Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭೋವಿ ಪೀಠಾಧ್ಯಕ್ಷರಾದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅಭಿವೃದ್ಧಿ ಸಂಕೇತ : ಕೆ.ಎಸ್. ನವೀನ್  

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ, ಜು.18 : ಭೋವಿ ಶ್ರೀಗಳು ತಮ್ಮ ಜನ್ಮದಿನವನ್ನು ಜನಪರ ಕಾರ್ಯಕ್ರಮವನ್ನಾಗಿ ಆಚರಿಸುತ್ತಿರುವುದು ಮಾದರಿ ಕಾರ್ಯ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಹೇಳಿದರು.

ನಗರದ ಭೋವಿ ಮಠದಲ್ಲಿ ಶನಿವಾರ ಆಯೋಜಿಸಿದ್ದ ಪೀಠಾಧ್ಯಕ್ಷ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಜನ್ಮದಿನೋತ್ಸವ ಹಾಗೂ ವಧುವರ ಸಮಾವೇಶದಲ್ಲಿ ಮಾತನಾಡಿದ ಅವರು. ಶ್ರೀಗಳ ವಯಸ್ಸು ಬಹಳ ಕಡಿಮೆ. ಆದರೆ, ಅವರ ಸಾಧನೆ ಹಿರಿದು. ಅಂತಹ ಸಾಧಕರ ಜನ್ಮದಿವನ್ನು ವಿವಿಧ ಮಠಾಧೀಶರು ಒಗ್ಗೂಡಿ ಅರ್ಥಪೂರ್ಣವಾಗಿ ಆಚರಿಸುತ್ತಿರುವುದು ಶ್ರೀಗಳ ಮೇಲಿನ ಪ್ರೀತಿಗೆ ಸಾಕ್ಷಿಯಾಗಿದೆ ಎಂದರು.

ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎನ್ನುವಂತೆ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರ ಕಾರ್ಯಕ್ರಮಗಳು ಬೃಹತ್ ಆಗಿವೆ. ಮಠದ ಅಭಿವೃದ್ಧಿಗಾಗಿ ಅವರು ಕೈಗೊಂಡಿರುವ ಕಾಮಗಾರಿಗಳು ಕಣ್ಮುಂದಿವೆ. ಸಮಾಜದ ಪ್ರಗತಿಗಾಗಿ ರಾಜ್ಯಾದ್ಯಂತ ಎಡೆಬಿಡದೆ ಓಡಾಡುತ್ತಿರುವುದು, ಭೋವಿ ಸಂಘಟನೆಯನ್ನು ರಾಷ್ಟ್ರಮಟ್ಟಕ್ಕೆ ವಿಸ್ತರಿಸಿರುವುದು ವಿಸ್ಮಯ. ಬೃಹತ್ ಪೆಂಡಾಲ್ ಮಧ್ಯದಲ್ಲಿನ ಕಂಬದಂತೆ ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಎಲ್ಲ ಭಾರವನ್ನು ತಾವೊಬ್ಬರೇ ವಹಿಸಿಕೊಂಡು ಭೋವಿಗಳ ಪಾಲಿಗೆ ಆಶಾಕಿರಣರಾಗಿದ್ದಾರೆ ಎಂದು ಬಣ್ಣಿಸಿದರು.

ಶ್ರೀಗಳ ಆಶ್ರಯದಲ್ಲಿ ಬೆಳೆಯುವ ವಿದ್ಯಾರ್ಥಿಗಳು, ಯುವಕ-ಯುವತಿಯರು ಮುಂದೆ ಸಮಾಜಕ್ಕೆ ಆಶ್ರಯ ನೀಡುವ ಹೆಮ್ಮರಗಳಾಗಬೇಕು. ಸಾಮಾಜಿಕ ಜಾಲತಾಣದ ಮೂಲಕ ರಾತ್ರೋರಾತ್ರಿ ಕೀರ್ತಿ ಗಳಿಸಬಹುದು. ಆದರೆ, ಶ್ರೀಗಳು ವ್ಯಕ್ತಿತ್ವಯಿಂದ ಭಕ್ತರು, ಮಠಾಧೀಶರ ಪ್ರೀತಿ ಗಳಿಸಿದ್ದಾರೆ. ಎಲ್ಲ ಸಮುದಾಯದ ಶ್ರೀಗಳು ಮತ್ತು ಭಕ್ತರನ್ನು ಸೋದರತ್ವದ ಭಾವನೆಯಿಂದ ಕಾಣುತ್ತಿದ್ದಾರೆ ಎಂದರು.

ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿ, ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಮತ್ತು ಶ್ರೀ ಶಾಂತವೀರ ಸ್ವಾಮೀಜಿ ಅವರ ನಡುವಿನ ಬಾಂಧವ್ಯ ಕೇವಲ ವ್ಯಕ್ತಿಗಳ ನಡುವಿನ ಸಂಬಂಧವಲ್ಲ. ಅದು ಒಂದು ಗುರಿ ಮತ್ತು ಎರಡು ಕಣ್ಣುಗಳಂತೆ ಎಂದು ಬಣ್ಣಿಸಿದ ಶ್ರೀಗಳು   ಕಳೆದ ಎರಡು ದಶಕಗಳಿಂದಲೂ ಈ ಸಂಬಂಧ ಗಟ್ಟಿಯಾಗಿ ಮುಂದುವರಿಯುತ್ತಲೇ ಇದೆ. ಸಮಾಜದಲ್ಲಿ ಪರಸ್ಪರ ಬೆಂಬಲ ಮತ್ತು ಮಾರ್ಗದರ್ಶನದ ಮೂಲಕ ಸಮಾಜವನ್ನು ಕಟ್ಟುವ ಕೆಲಸದಲ್ಲಿ ಇವರಿಬ್ಬರೂ ಕೈಜೋಡಿಸಿದ್ದಾರೆ ಎಂದು ಹೇಳಿದರು.

ಇಮ್ಮಡಿ ಶ್ರೀಗಳ ಕುರಿತು ಕುಂಚಿಟಿಗ ಸ್ವಾಮೀಜಿ ಅಪಾರ ಪ್ರೀತಿ, ಗೌರವಭಾವನೆ ಹೊಂದಿದ್ದಾರೆ. ಪರಸ್ಪರ ಮಾರ್ಗದರ್ಶಕರಾಗಿ ಸಮುದಾಯ ಸಂಘಟನೆ ಹಾಗೂ ನಾಡು ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಭವಿಷ್ಯದಲ್ಲಿಯೂ ಮಹನೀಯರ ಮಾರ್ಗದರ್ಶನ ಎಲ್ಲ ಸಮುದಾಯಗಳಿಗೂ ದೊರೆಯಲಿ ಎಂದು ಆಶಯ ವ್ಯಕ್ತಪಡಿಸಿದರು.

ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ, ಶ್ರೀ ರೇಣುಕಾನಂದ ಸ್ವಾಮೀಜಿ, ಶ್ರೀ ಮಾಚಿದೇವ ಸ್ವಾಮೀಜಿ, ಶ್ರೀ ಅಪ್ಪಣ್ಣ ಸ್ವಾಮೀಜಿ, ಶ್ರೀ ಶಿವಸವ ಸ್ವಾಮೀಜಿ, ಶ್ರೀ ಬಸವಪ್ರಭು ಸ್ವಾಮೀಜಿ, ಶ್ರೀ ಮಹಲಿಂಗ ಸ್ವಾಮೀಜಿ, ಶ್ರೀ ಬಸವಪ್ರಸಾದ್ ಸ್ವಾಮೀಜಿ, ಶ್ರೀ ಚನ್ನಬಸವ ಸ್ವಾಮೀಜಿ, ಶ್ರೀ ಮಹಾಂತ ಸ್ವಾಮೀಜಿ, ಶ್ರೀ ತಿಪ್ಪೇರುದ್ರಸ್ವಾಮಿ, ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಶ್ರೀ ಶಿವಾನಂದ ಸ್ವಾಮೀಜಿ, ಶ್ರೀ ಬಸವ ಮರಳುಸಿದ್ಧ ಸ್ವಾಮೀಜಿ ಸೇರಿ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ 60ಕ್ಕೂ ಹೆಚ್ಚು ಮಠಾಧೀಶರು ಸಾನ್ನಿಧ್ಯ ವಹಿಸಿದ್ದರು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.
ಶ್ರೀಗಳ ಶ್ರಮ ಅನನ್ಯ :
ಭೋವಿ ಸಮುದಾಯದಲ್ಲಿ ಒಗ್ಗಟ್ಟಿನ ಸಂಕೇತವಾಗಿ ಇಡೀ ರಾಜ್ಯವನ್ನು ಸಂಘಟಿಸಿದ ಕೀರ್ತಿ ಇಮ್ಮಡಿ ಶ್ರೀಗಳಿಗೆ ಸಲ್ಲುತ್ತದೆ. ಶ್ರೀಗಳು ಸಮುದಾಯದ ಸಂಘಟನೆಗಾಗಿ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಇಂದು ಭೋವಿ ಸಮಾಜದತ್ತ ಇಡೀ ಸರ್ಕಾರವೇ ತಿರುಗಿ ನೋಡುತ್ತಿದೆ. ಇದಕ್ಕೆ ಮುಖ್ಯ ಕಾರಣ ಇಮ್ಮಡಿ ಶ್ರೀಗಳ ನಾಯಕತ್ವ ಭೋವಿ ಸಮುದಾಯವನ್ನು ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ದೂರದೃಷ್ಟಿ ಶ್ರೀಗಳದ್ದಾಗಿದೆ. ಈ ನಿಟ್ಟಿನಲ್ಲಿ ಇಡೀ ರಾಜ್ಯ ಹಾಗೂ ರಾಷ್ಟ್ರಾದ್ಯಂತ ಸಂಚರಿಸಿ, ಸಮುದಾಯದಲ್ಲಿ ಹೊಸ ಸಂಚಲನ ಮತ್ತು ಜಾಗೃತಿ ಮೂಡಿಸುತ್ತಿರುವುದು ಮಾದರಿ ಎಂದು ಕುಂಚಿಟಿಗ ಮಠದ ಶ್ರೀ ಶಾಂತವೀರ ಸ್ವಾಮೀಜಿ ಹೇಳಿದರು.

 

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now