Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೀದರ್ : SIR ಸರ್ವೆ ವೇಳೆ ಕುಸಿದು ಬಿದ್ದು BLO ಅಧಿಕಾರಿ ಹೃದಯಾಘಾತದಿಂದ ಸಾವು!

---Advertisement---

ಬೀದರ್.ಜುಲೈ.05 : ಬೀದರ್ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಕಾರ್ಯದಲ್ಲಿ ನಿರತರಾಗಿದ್ದ ಅಧಿಕಾರಿಯೊಬ್ಬರು ಕರ್ತವ್ಯದ ಅವಧಿಯಲ್ಲೇ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ತಾಲ್ಲೂಕಿನ ಅಮಲಾಪುರ ಗ್ರಾಮದ 33ನೇ ಬೂತ್‌ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಭಾಲ್ಕಿ ಮೂಲದ ಬಿಎಲ್‌ ಒ (BLO) ಸುನೀಲ್ (45) ಮೃತಪಟ್ಟ ದುರ್ದೈವಿ. ಕಳೆದ ಕೆಲವು ದಿನಗಳಿಂದ ಸತತವಾಗಿ ಸರ್ವೆ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ಸುನೀಲ್‌ ಅವರಿಗೆ ಕೆಲಸದ ವೇಳೆಯೇ ಹಠಾತ್ ತೀವ್ರ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ.

ಕೂಡಲೇ ಅಲ್ಲಿದ್ದ ಸ್ಥಳೀಯರು ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದರು. ದುರದೃಷ್ಟವಶಾತ್, ಆಸ್ಪತ್ರೆಯಲ್ಲಿ ವೈದ್ಯರು ಸ್ಟಂಟ್ ಅಳವಡಿಸುವ ತುರ್ತು ಚಿಕಿತ್ಸೆ ನೀಡುತ್ತಿದ್ದ ಸಮಯದಲ್ಲೇ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now