Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

LPG ಗ್ರಾಹಕರಿಗೆ ಬಿಗ್ ಅಲರ್ಟ್: ಅ.1ರೊಳಗೆ ಇ-ಕೆವೈಸಿ ಮಾಡದಿದ್ದರೆ ಸಿಗಲ್ಲ ಸಬ್ಸಿಡಿ.!

---Advertisement---

ದೆಹಲಿ.ಸೆಪ್ಟೆಂಬರ್. 25 : ದೇಶೀಯ ಎಲ್‌ಪಿಜಿ ಸಿಲಿಂಡರ್ ಬಳಕೆದಾರರಿಗೆ ಸಬ್ಸಿಡಿ ಸೌಲಭ್ಯ ಮುಂದುವರಿಯಬೇಕಾದರೆ ಬಯೋಮೆಟ್ರಿಕ್ ಆಧಾರ್ ದೃಢೀಕರಣವನ್ನು ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶಿಸಿದೆ.

ಅಕ್ಟೋಬರ್ 1, 2026ರ ಒಳಗೆ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸದಿದ್ದರೆ ಸಬ್ಸಿಡಿ ರಹಿತವಾಗಿ ಹೆಚ್ಚಿನ ಬೆಲೆ ಪಾವತಿಸಬೇಕಾಗಲಿದ್ದು, ಇದರಿಂದ ಗ್ರಾಹಕರ ಮಾಸಿಕ ಅಡುಗೆ ಅನಿಲ ವೆಚ್ಚ ಅಂದಾಜು 4,500 ರೂಪಾಯಿವರೆಗೆ ಏರಿಕೆಯಾಗುವ ಸಾಧ್ಯತೆಯಿದೆ. ಸಬ್ಸಿಡಿಯು ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪುವಂತೆ ಮಾಡಲು ಮತ್ತು ಗೃಹ ಬಳಕೆಯ ಸಿಲಿಂಡರ್‌ಗಳು ವಾಣಿಜ್ಯ ಬಳಕೆಗೆ ದುರುಪಯೋಗವಾಗುವುದನ್ನು ತಡೆಯಲು ಈ ನಿಯಮ ಜಾರಿಗೆ ತರಲಾಗಿದೆ.

ಈಗಾಗಲೇ ಆಧಾರ್ ಬಯೋಮೆಟ್ರಿಕ್ ಪರಿಶೀಲನೆ ಪೂರ್ಣಗೊಳಿಸಿರುವ ಗ್ರಾಹಕರು ಯಾವುದೇ ಆತಂಕಪಡುವ ಅಗತ್ಯವಿಲ್ಲ; ಅವರ ಸಿಲಿಂಡರ್ ಬುಕಿಂಗ್ ಹಾಗೂ ಸಬ್ಸಿಡಿ ಎಂದಿನಂತೆ ಮುಂದುವರಿಯಲಿದೆ. ಆದರೆ ನಿಗದಿತ ಗಡುವಿನೊಳಗೆ ಪ್ರಕ್ರಿಯೆ ಮುಗಿಸದ ಗ್ರಾಹಕರು ಪರಿಶೀಲನೆ ಮುಗಿಯುವವರೆಗೆ 14.2 ಕೆಜಿ ತೂಕದ ಸಬ್ಸಿಡಿ ಸಹಿತ ಸಿಲಿಂಡರ್ ಪಡೆಯುವ ಅರ್ಹತೆಯನ್ನು ಕಳೆದುಕೊಳ್ಳಲಿದ್ದಾರೆ. ಅಂತಹ ಗ್ರಾಹಕರಿಗೆ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವುದಿಲ್ಲವಾದರೂ, ಲಭ್ಯತೆಗೆ ಅನುಗುಣವಾಗಿ 5 ಕೆಜಿ ಅಥವಾ 10 ಕೆಜಿಯ ಸಣ್ಣ ಸಿಲಿಂಡರ್‌ಗಳನ್ನು ಮಾರುಕಟ್ಟೆ ದರದಲ್ಲಿ ಖರೀದಿಸಬೇಕಾಗುತ್ತದೆ. ಇದರಿಂದಾಗಿ ತಿಂಗಳ ವೆಚ್ಚದಲ್ಲಿ ಭಾರೀ ಹೆಚ್ಚಳ ಉಂಟಾಗಲಿದೆ. ಆದಾಗ್ಯೂ ನೈಜ ಸಂಪರ್ಕಗಳನ್ನು ರದ್ದುಪಡಿಸುವುದು ಸರ್ಕಾರದ ಉದ್ದೇಶವಲ್ಲ ಎಂದು ಪೆಟ್ರೋಲಿಯಂ ಸಚಿವಾಲಯ ಸ್ಪಷ್ಟಪಡಿಸಿದೆ.

ಗ್ರಾಹಕರು ಈ ಇ-ಕೆವೈಸಿ ಪ್ರಕ್ರಿಯೆಯನ್ನು ಅತ್ಯಂತ ಸುಲಭವಾಗಿ ಪೂರ್ಣಗೊಳಿಸಲು ಹಲವು ಮಾರ್ಗಗಳನ್ನು ಒದಗಿಸಲಾಗಿದೆ. ಸಿಲಿಂಡರ್ ಡೆಲಿವರಿ ಪಡೆಯುವ ಸಮಯದಲ್ಲಿ ಡೆಲಿವರಿ ಸಿಬ್ಬಂದಿಯ ಮೂಲಕ, ನೇರವಾಗಿ ಸ್ಥಳೀಯ ಗ್ಯಾಸ್ ಏಜೆನ್ಸಿಗೆ ಭೇಟಿ ನೀಡಿ ಬಯೋಮೆಟ್ರಿಕ್ ನೀಡುವ ಮೂಲಕ ಅಥವಾ ಇಂಡಿಯನ್ ಆಯಿಲ್, ಭಾರತ್ ಗ್ಯಾಸ್ ಮತ್ತು ಹೆಚ್‌ಪಿ ಗ್ಯಾಸ್‌ನ ಅಧಿಕೃತ ಮೊಬೈಲ್ ಆ್ಯಪ್‌ಗಳಲ್ಲಿ ಆಧಾರ್ ಮುಖ ಗುರುತಿಸುವಿಕೆ (Face Authentication) ತಂತ್ರಜ್ಞಾನವನ್ನು ಬಳಸಿ ಮನೆಯಲ್ಲೇ ಕುಳಿತು ಮಾಡಿಕೊಳ್ಳಬಹುದಾಗಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ ಈಗಾಗಲೇ ಶೇಕಡಾ 89.9 ರಷ್ಟು ಗ್ರಾಹಕರು ಈ ಪ್ರಕ್ರಿಯೆಯನ್ನು ಮುಗಿಸಿದ್ದು, ಉಳಿದ ಗ್ರಾಹಕರು ಸಬ್ಸಿಡಿ ಕಡಿತದ ಹೊರೆ ತಪ್ಪಿಸಲು ಅಕ್ಟೋಬರ್ 1ರ ಒಳಗೆ ಪರಿಶೀಲನೆ ಮುಗಿಸಿಕೊಳ್ಳುವಂತೆ ಕೋರಲಾಗಿದೆ.

Join WhatsApp

Join Now

Join Telegram

Join Now