ನವದೆಹಲಿ: ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದ್ದು, ಹೊಸದೊಂದು ಎಚ್ಚರಿಕೆಯನ್ನು ಜಾರಿಗೊಳಿಸಿದೆ. ರೈಲ್ವೆಯಲ್ಲಿ ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಧೂಮಪಾನದ ಮೇಲಿನ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಲಾಗಿದೆ. ಜನ ವಿಶ್ವಾಸ್ ಕಾಯ್ದೆಯ ತಿದ್ದುಪಡಿಯಡಿ ತರಲಾದ ಈ ಹೊಸ ನಿಯಮಗಳ ಗೆಜೆಟ್ ಅಧಿಸೂಚನೆ ಈಗಾಗಲೇ ಬಿಡುಗಡೆಯಾಗಿದ್ದು, ಜುಲೈ 1 ರಿಂದ ದೇಶಾದ್ಯಂತ ಜಾರಿಗೆ ಬರಲಿವೆ.
ಹೊಸ ನಿಯಮಗಳ ಪ್ರಕಾರ, ರೈಲುಗಳಲ್ಲಿ ಅಥವಾ ರೈಲ್ವೆ ಆವರಣದಲ್ಲಿ ಧೂಮಪಾನ ಮಾಡುತ್ತಾ ಸಿಕ್ಕಿಬಿದ್ದರೆ ಭಾರಿ ದಂಡ ವಿಧಿಸಲಾಗುತ್ತದೆ. ಅಷ್ಟೇ ಅಲ್ಲದೆ, ಪರಿಸ್ಥಿತಿಯ ತೀವ್ರತೆಯನ್ನು ಆಧರಿಸಿ ಪ್ರಯಾಣಿಕರ ಟಿಕೆಟ್ ರದ್ದುಗೊಳಿಸುವ ಅಧಿಕಾರವೂ ಅಧಿಕಾರಿಗಳಿಗಿರುತ್ತದೆ. ನಿಯಮ ಉಲ್ಲಂಘನೆಯ ತೀವ್ರತೆ ಹೆಚ್ಚಾಗಿದ್ದರೆ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆಯೂ ಇದೆ ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ. ಪ್ರಯಾಣಿಕರ ಜೀವಕ್ಕೆ ಸಂಚಕಾರ ತರುವ ಯಾವುದೇ ವಿಷಯದಲ್ಲೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಇಲಾಖೆ ತಿಳಿಸಿದೆ.
ಕೇವಲ ಧೂಮಪಾನ ಮಾತ್ರವಲ್ಲದೆ, ಕಾಯ್ದಿರಿಸದ (Unreserved) ಪ್ರಯಾಣಿಕರು ಇತರರ ಬೆರ್ತ್‌ಗಳನ್ನು ಆಕ್ರಮಿಸಿಕೊಳ್ಳುವುದು ಮತ್ತು ಸಹ-ಪ್ರಯಾಣಿಕರಿಗೆ ತೊಂದರೆ ಉಂಟುಮಾಡುವ ವಿಷಯಗಳ ಮೇಲೆಯೂ ಕಠಿಣ ಕ್ರಮ ಕೈಗೊಳ್ಳಲು ಈ ಹೊಸ ನಿಯಮಗಳು ದಾರಿ ಮಾಡಿಕೊಟ್ಟಿವೆ. ಇದರಿಂದಾಗಿ ರೈಲುಗಳಲ್ಲಿ ಅನಧಿಕೃತವಾಗಿ ಸೀಟು ಆಕ್ರಮಿಸಿಕೊಳ್ಳುವ ದಂದೆಗೆ ಬ್ರೇಕ್ ಬೀಳಲಿದೆ ಎಂದು ಅಧಿಕಾರಿಗಳು ಭಾವಿಸಿದ್ದಾರೆ.
ರೈಲ್ವೆ ಇಲಾಖೆಯ ಮುಖ್ಯ ಉದ್ದೇಶ: ರೈಲು ಪ್ರಯಾಣದಲ್ಲಿ ಸುರಕ್ಷತೆ, ಸ್ವಚ್ಛತೆ ಮತ್ತು ಶಿಸ್ತನ್ನು ಸುಧಾರಿಸುವುದೇ ಈ ಕಾನೂನು ತಿದ್ದುಪಡಿಯ ಮುಖ್ಯ ಉದ್ದೇಶವಾಗಿದೆ.
ಜುಲೈ 1 ರಿಂದ ಈ ನಿಯಮಗಳು ದೇಶಾದ್ಯಂತ ಕಟ್ಟುನಿಟ್ಟಾಗಿ ಜಾರಿಗೆ ಬರಲಿರುವ ಹಿನ್ನೆಲೆಯಲ್ಲಿ, ಪ್ರಯಾಣಿಕರು ರೈಲ್ವೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಅಧಿಕಾರಿಗಳು ಸೂಚಿಸಿದ್ದಾರೆ. ಯಾರಾದರೂ ನಿಯಮ ಉಲ್ಲಂಘಿಸಿದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ರೈಲ್ವೆ ಇಲಾಖೆ ಎಚ್ಚರಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












