Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ ಅದ್ದೂರಿ ವಿವಾಹ ; ಯಾರೆಲ್ಲಾ ಬಂದಿದ್ರು..?

---Advertisement---

ಉಡುಪಿ; ಬಿಗ್ ಬಾಸ್ ಸೀಸನ್ 11 ಸ್ಪರ್ಧಿಯಾಗಿದ್ದ ಚೈತ್ರಾ ಕುಂದಾಪುರ ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉಡುಪಿಯ ಕಮಲಶಿಲೆಯ ಬ್ರಾಹ್ಮೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಚೈತ್ರಾ ಕುಂದಾಪುರ ಹಾಗೂ ಶ್ರೀಕಾಂತ್ ಕಶ್ಯಪ್ ಮದುವೆಯಾಗಿದ್ದಾರೆ. ಬಿಗ್ ಬಾಸ್ ಮನೆಯೊಳಗಿದ್ದಾಗಲೇ ಮದುವೆ ಬಗ್ಗೆ ಚೈತ್ರಾ ಮಾತನಾಡಿದ್ದರು. ಬಿಗ್ ಬಾಸ್ ಮುಗಿದ ಮೇಲೂ ಚೈತ್ರಾ ಕುಂದಾಪುರ ಅವರ ಜೊತೆಗೆ ಇದ್ದು, ಎಲ್ಲಾ ಕಡೆ ಸಂದರ್ಶನಗಳಿಗೆ ಓಡಾಡಿದ್ದವರು ಶ್ರೀಕಾಂತ್ ಕಶ್ಯಪ್. ಇದೀಗ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಶ್ರೀಕಾಂತ್ ಕಶ್ಯಪ್ ಹಾಗೂ ಚೈತ್ರಾ ಕುಂದಾಪುರ ಅವರದ್ದು, ಪಕ್ಕ ಲವ್ ಮ್ಯಾರೇಜ್. ಸುಮಾರು 12 ವರ್ಷಗಳಿಂದ ಇಬ್ಬರು ಲವ್ ಮಾಡುತ್ತಿದ್ದರು. ಈಗ ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಿದ್ದಾರೆ. ಚೈತ್ರಾ ಕುಂದಾಪುರ ಅವರ ವಿವಾಹಕ್ಕೆ ಬಿಗ್ ಬಾಸ್ ಸ್ಪರ್ಧಿಗಳು ಎಲ್ಲರೂ ಭಾಗಿಯಾಗಿದ್ದರು. ಅದರಲ್ಲೂ ಬಿಗ್ ಬಾಸ್ ರಜತ್ ಕಿಶನ್ ಅಣ್ಣನ ಸ್ಥಾನದಲ್ಲಿ ನಿಂತು ಎಲ್ಲಾ ಕಾರ್ಯವನ್ನ ನೆರವೇರಿಸಿಕೊಟ್ಟರು.

ಬಿಗ್ ಬಾಸ್ ನಲ್ಲಿ ಇರುವಷ್ಟು ದಿನ ಬಾಸ್ ಬಾಸ್ ಅಂತ ಚೈತ್ರಾರನ್ನ ಗೋಳುಯ್ದುಕೊಂಡಿದ್ದರು. ಈಗ ಅಣ್ಣನ ಸ್ಥಾನದಲ್ಲಿ ನಿಂತು ಮದುವೆ ಶಾಸ್ತ್ರದಲ್ಲಿ ಭಾಗಿಯಾಗಿದ್ದಾರೆ. ರಜತ್ ಜೊತೆಗೆ ಧನರಾಜ್ ಆಚಾರ್ಯ, ಗೋಲ್ಡ್ ಸುರೇಶ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ಬಿಗ್ ಬಾಸ್ ನಲ್ಲಿರುವಷ್ಟು ದಿನ ಜೋರು ಮಾತುಗಳಿಂದಾನೇ ಚೈತ್ರಾ ಫೇಮಸ್ ಆಗಿದ್ದರು. ತಂಗಿ ತಂಗಿ ಅಂತ ಎಲ್ಲರೊಟ್ಟಿಗೆ ಇರ್ತಾ ಇದ್ದರು. ಹೀಗಾಗಿ ಚೈತ್ರಾ ಮದುವೆಯಲ್ಲಿ ಭಾಗಿಯಾಗಿ ಶುಭ ಹಾರೈಸಿದ್ದಾರೆ. ದಂಪತಿಗೆ ಹೊಸ ಜೀವನ ಸುಖಕರವಾಗಲಿ ಎಂದು ಹಾರೈಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment