Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದ ವಸತಿ ರಹಿತ ಬಡ ಜನತೆಗೆ ಸಿಎಂ ಗುಡ್ ನ್ಯೂಸ್ : ಈ ವರ್ಷವೇ 5 ಲಕ್ಷ ಮಂದಿಗೆ ಸೈಟ್ ಹಂಚಿಕೆ

---Advertisement---

ಹಿರಿಯೂರು : ರಾಜ್ಯದ ವಸತಿ ರಹಿತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಬಡವರ ಪರವಾಗಿ ವಾಸದ ಮನೆಗಳಿಲ್ಲದ 5 ಲಕ್ಷ ಮಂದಿಗೆ ಈ ವರ್ಷವೇ ನಿವೇಶನ (ಸೈಟ್) ಹಂಚಿಕೆ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಹಿರಿಯೂರು ತಾಲ್ಲೂಕಿನ ಧರ್ಮಪುರ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ, ನೂತನ ಕೆ.ಎಸ್.ಆರ್.ಟಿ. ಬಸ್ ನಿಲ್ದಾಣ ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖೆ ಅಭಿವೃದ್ಧಿ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಬಡವರ ಪರವಾಗಿ ವಾಸದ ಮನೆಗಳಿಲ್ಲದ 5 ಲಕ್ಷ ಮಂದಿಗೆ ಈ ವರ್ಷವೇ ನಿವೇಶನ (ಸೈಟ್) ಹಂಚಿಕೆ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ ಅವರು, ಎಲ್ಲೆಲ್ಲಿ ಸರ್ಕಾರಿ ಜಾಗವಿದೆಯೋ ಅಲ್ಲೆಲ್ಲಾ ಬಡವರಿಗೆ ಅಗತ್ಯ ಸೌಕರ್ಯ ಕಲ್ಪಿಸಲು ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ ಎಂದರು. ಒಂದು ವೇಳೆ ಜಾಗವಿಲ್ಲದಿದ್ದರೆ ಖಾಸಗಿ ಜಮಿನನ್ನು ಖರೀದಿ ಮಾಡಿ, ಎಲ್ಲರಿಗೂ ಸೈಟ್ ಹಾಗೂ ಮನೆ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ.

ಪ್ರಜಾಸೇವೆ ಇಲಾಖೆಯ ಮುಖಾಂತರ ಜನರ ಮನೆ ಬಾಗಿಲಗೆ ಬಂದು ಅರ್ಜಿಗಳನ್ನು ಪಡೆದು, ಜನರಿಗೆ ಯಾವ ಕೆಲಸಗಳು ಆಗಬೇಕಿದೆ ಎಂಬುದನ್ನು ಅರ್ಜಿಯಲ್ಲಿ ಗುರತು ಮಾಡುತ್ತಾರೋ, ಆ ಕೆಲಸವನ್ನು ಅಧಿಕಾರಿಗಳೇ ಮಾಡಿಕೊಡಲಿದ್ದಾರೆ. ಸಾರ್ವಜನಿಕರ ಅಹವಾಲು ಸ್ವೀಕರಿಸಿ ಸೈಟ್, ಮನೆ, ಪಿಂಚಣಿ ಹಾಗೂ ಇತರೆ ಸೌಲಭ್ಯಗಳನ್ನು ನೇರವಾಗಿ ಒದಗಿಸಲು ಪ್ರಜಾಸೇವೆ ಅಭಿಯಾನ ಆರಂಭಿಸಲಾಗುವುದು ಎಂದರು.

ದೇಶದಲ್ಲಿ ಬೆಲೆ ಏರಿಕೆ ಗಗನಕ್ಕೇರುತ್ತಿದ್ದರೆ, ಜನಸಾಮಾನ್ಯರ ಆದಾಯ ಮಾತ್ರ ಪಾತಾಳಕ್ಕೆ ಕುಸಿಯುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಕಳವಳ ವ್ಯಕ್ತಪಡಿಸಿದರು. ಹೆಣ್ಣುಮಕ್ಕಳು ಹಾಗೂ ರೈತರ ಬದುಕನ್ನು ಉಳಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ. ರೈತರ ಅನುಕೂಲಕ್ಕಾಗಿ ಇಂಧನ ಇಲಾಖೆಯಿಂದ ಉಚಿತ ಫ್ರೀ ಪಂಪ್ಸೆಟ್ಗಳನ್ನು ಒದಗಿಸುವ ವಿದ್ಯುತ್ ಶಕ್ತಿ ಯೋಜನೆಯನ್ನು ಪ್ರಾರಂಭಿಸಲಾಗಿದೆ. ನೆರೆಹೊರೆ ರಾಜ್ಯಗಳಲ್ಲಿ ಇಲ್ಲದ ಈ ಜನಪರ ಯೋಜನೆ ನಮ್ಮ ಸರ್ಕಾರದಲ್ಲಿ ಜಾರಿಯಲ್ಲಿದೆ. ಬರಗಾಲದ ಸಂದರ್ಭದಲ್ಲೂ ನೀರಾವರಿ ಹಾಗೂ ಇತರೆ ಜನಪರ ಕಾರ್ಯಗಳಿಗೆ ಯಾವುದೇ ಕೊರತೆಯಾಗದಂತೆ ಕ್ರಮ ವಹಿಸಲಾಗಿದೆ. ಹಿರಿಯೂರು ತಾಲ್ಲೂಕಿನ ನೀರಾವರಿ ಬಗ್ಗೆ ವಿಶೇಷ ಕಾಳಜಿ ವಹಿಸಲಾಗಿದ್ದು, ಧರ್ಮಪುರ ಹೋಬಳಿಯ ಕೆರೆಗಳಿಗೆ ನೀರು ತುಂಬಿಸಿ ರೈತರ ಬದುಕಿನಲ್ಲಿ ಬದಲಾವಣೆ ತರುವ ಐತಿಹಾಸಿಕ ತೀರ್ಮಾನವನ್ನು ನಮ್ಮ ಸರ್ಕಾರ ಕೈಗೊಂಡಿದೆ ಎಂದು ತಿಳಿಸಿದರು. ರೂ.3.5 ಕೋಟಿ ವೆಚ್ಚದಲ್ಲಿ ನೂತನ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ರೂ.2,500 ಕೋಟಿಗೂ ಅಧಿಕ ಮೌಲ್ಯದ ಕೆಲಸಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಪ್ರಸ್ತಾವಿಕವಾಗಿ ಮಾತನಾಡಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರಕ್ಕೆ ಬಂದ ನಂತರ ಜನಪರ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದಾರೆ. ಅದರಲ್ಲೂ ಮೊದಲ ಆದ್ಯತೆಯಾಗಿ ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡಿ, ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ರೈತರಿಗೆ ಪೂರಕವಾದ ನೇಗಿಲಯೋಗಿ, ತೇಗದ ಸಿರಿ ಯೋಜನೆಗಳ ಜತೆಗೆ, ಸಾರ್ವಜನಿಕರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಮತ್ತು ಕೆಲಸಗಳು ಕಾಲಮಿತಿಯಲ್ಲಿ ಪೂರ್ಣಗೊಳ್ಳಲು ‘ಪ್ರಜಾಸೇವೆ’ ಎನ್ನುವ ನೂತನ ಕಾರ್ಯಕ್ರಮವನ್ನು ನಾಡಿನಲ್ಲಿ ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

Join WhatsApp

Join Now

Join Telegram

Join Now