Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಭವಾನಿ ರೇವಣ್ಣಗೆ ಬಿಗ್ ರಿಲೀಫ್ : ಮಧ್ಯಂತರ ಜಾಮೀನು ಮಂಜೂರು

---Advertisement---

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಲೇ ಇದ್ದಾರೆ. ಅರೆಸ್ಟ್ ಆದಾಗಿನಿಂದ ಪ್ರಜ್ವಲ್ ರೇವಣ್ಣ ಅವರು ಹೊಟ್ಟೆ ನೋವಿನ ಕಾರಣ ಹೇಳಿ ತಪ್ಪಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಇನ್ನಷ್ಟು ದಿನ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರನ್ನು ತಮ್ಮ ವಶಕ್ಕೆ ಪಡೆದಿದ್ದಾರೆ. ಇದರ ನಡುವೆ ಭವಾನಿ ರೇವಣ್ಣ ಅವರಿಗೆ ರಿಲ್ಯಾಕ್ಸ್ ಆಗಿದೆ.

ಮಹಿಳೆಯ ಕಿಡ್ನ್ಯಾಪ್ ಪ್ರಕರಣದಲ್ಲಿ ರೇವಣ್ಣ ಅವರು ಜೈಲು ಸೇರಿ, ಒಂದಷ್ಟು ದಿನಗಳ ಕಾಲ ಸೆರೆವಾಸ ಅನುಭವಿಸಿ ಬಂದಿದ್ದರು. ಬಳಿಕ ಜಾಮೀನಿನ ಮೇಲೆ ಹೊರಗೆ ಬಂದಿದ್ದರು. ಅದೇ ಪ್ರಕರಣದಲ್ಲಿ ಭವಾನಿ ಅವರಿಗೂ ಬಂಧನದ ಭೀತಿ ಕಾಡಿತ್ತು. ಹೀಗಾಗಿ ಯಾರಿಗೂ ಸಿಗದೆ ನಾಪತ್ತೆಯಾಗಿದ್ದರು. ಎಸ್ಐಟಿ ಅಧಿಕಾರಿಗಳು ಹುಡುಕಾಡಿದ್ದರು ಸಿಕ್ಕಿರಲಿಲ್ಲ. ಒಮ್ಮೆ ವಿಚಾರಣೆಗೆ ಬರುತ್ತೇನೆ ಎಂದು ಹೇಳಿದ್ದ ಭವಾನಿ, ಬರಲೇ ಇಲ್ಲ. ಎಸ್ಐಟಿ ಅಧಿಕಾರಿಗಳ ಮುಂದೆ ಹೋದರೆ ಅರೆಸ್ಟ್ ಮಾಡುತ್ತಾರೇನೋ ಎಂಬ ಆತಂಕದಿಂದ ಬೇರೊಂದು ಕಡೆ ಉಳಿದುಕೊಂಡಿದ್ದರು. ಇದೀಗ ಭವಾನಿ ರೇವಣ್ಣ ಅವರಿಗೆ ಜಾಮೀನು ಮಂಜೂರಾಗಿದೆ‌. ಈಗಲಾದರೂ ಎಸ್ಐಟಿ ಅಧಿಕಾರಿಗಳ ತನಿಖೆಗೆ ಸಹಕರಿಸುತ್ತಾರಾ ನೋಡಬೇಕಿದೆ.

ಹೈಕೋರ್ಟ್ ನ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ. ಹೀಗಾಗಿ 1 ಗಂಟೆ ವೇಳೆಗೆ SIT ಮುಂದೆ ಹಾಜರಾಗಲು ಸೂಚನೆ ನೀಡಲಾಗಿದೆ. ಜೊತೆಗೆ ತನಿಖೆಗೆ ಸಹಕರಿಸುವಂತೆ ಕೋರ್ಟ್​ನಿಂದ ಸೂಚನೆ ಹೊರಡಿಸಲಾಗಿದೆ. ಈಗಾಗಲೇ ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿಯಲ್ಲಿದ್ದು, ಕೋರ್ಟವ ಮಾತಿನಂತೆ ಭವಾನಿ ರೇವಣ್ಣ ಅವರು ತನಿಖೆಗೆ ಸಹಕಾರ ನೀಡುತ್ತಾರಾ ಎಂಬುದನ್ನು ನೋಡಬೇಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...