ಬೆಂಗಳೂರು, ಡಿಸೆಂಬರ್ 20 : ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿಯಾದ ಹೇಳಿಕೆ ನೀಡಿದ ವಿಚಾರವಾಗಿ ಬಂಧನಕ್ಕೆ ಒಳಗಾಗಿದ್ದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿಯನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.
ಸಿಟಿ ರವಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಕೋರಿ ಅರ್ಜಿ ಸಲ್ಲಿಸಲಾಗಿತ್ತು. ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ತಕ್ಷಣ ಬಿಡುಗಡೆ ಮಾಡುವಂತೆ ಮಧ್ಯಂತರ ಆದೇಶ ಹೊರಡಿಸಿದೆ. ಮುಂದೆ ನಡೆಯುವ ತನಿಖೆಗೆ ಸಹಕರಿಸಬೇಕೆಂದು ಷರತ್ತು ವಿಧಿಸಿದೆ.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನಿಗಾಗಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ನಾಳೆಗೆ(ಡಿಸೆಂಬರ್ 21) ಜಾಮೀನು ಮುಂಡೂಡಿತ್ತು. ಆದರೆ ಇಂದು ಹೈಕೋರ್ಟ್ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದ ಸಿಟಿ ರವಿಯವರಿಗೆ ಈ ಆದೇಶದಿಂದ ಬಿಗ್ ರಿಲೀಫ್ ಸಿಕ್ಕಿದೆ.