ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಸದ್ಯಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ಕೋರ್ಟ್ ನಿಂದ ತಡೆಯಾಜ್ಞೆ ನೀಡಿದ್ದು, ಇನ್ನೂ ಒಂದು ವಾರ ರಿಲೀಫ್ ನೀಡಿದೆ. ಡಿಕೆಶಿ ವಿರುದ್ಧ ಸಿಬಿಐ ನಡೆಸುತ್ತಿದ್ದ ತನಿಖೆಗೆ ಈ ಹಿಂದೆ ಕೋರ್ಟ್ ತಡೆಯಾಜ್ಞೆ ನೀಡಿತ್ತು. ಫೆಬ್ರವರಿ 24ಕ್ಕೆ ಸಿಬಿಐಗೆ ತನಿಖಾ ಪ್ರಗತಿ ವರದಿ ನೀಡುವಂತೆ ಸೂಚನೆ ನೀಡಿತ್ತು. ಈ ಸಂಬಂಧ ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಡಿಕೆಶಿಗೆ ಇನ್ನೂ ಒಂದು ವಾರ ರಿಲೀಫ್ ನೀಡಿದೆ.

ಡಿಕೆ ಶಿವಕುಮಾರ್ ಅವರ ಮೇಲೆ ಅಕ್ರಮ ಆಸ್ತಿ ಕೇಸ್ ವಿಚಾರಣೆ ನಡೆಯುತ್ತಿದ್ದಾಗ, ನಾನೊಬ್ಬ ಕೃಷಿಕ. ಕೃಷಿಯ ಮೂಲದಿಂದಾನೇ ಆಸ್ತಿ ಮಾಡಿರುವುದು ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಕೆಯ ಬಳಿಕ ಡಿಕೆ ಶಿವಕುಮಾರ್ ಅವರ ಆಸ್ತಿ ಮೌಲ್ಯ, ಬೆಳೆ ಬಗ್ಗೆ, ಪಹಣಿ ಬಗ್ಗೆ ಎಲ್ಲಾ ಸೇರಿ ಕೃಷಿಗೆ ಸಂಬಂಧಿಸಿದಂತೆ ಹಲವು ದಾಖಲೆಗಳನ್ನು ಸಿಬಿಐ ಹೊರ ತೆಗೆಸಿತ್ತು.

ಈ ಕೇಸ್ ಗೆ ಸಂಬಂಧಿಸಿದಂತೆ ಮತ್ತೆ ವಿಚಾರಣೆಗೆ ಬರುವುದಿತ್ತು. ಈ ನಡುವೆ ಕೋರ್ಟ್ ಒಂದು ವಾರಗಳ ಕಾಲ ರಿಲೀಫ್ ನೀಡಿದೆ. ಚುನಾವಣೆ ಬೇರೆ ಹತ್ತಿರವಾಗುತ್ತಿದ್ದು, ಡಿಕೆ ಶಿವಕುಮಾರ್ ಅವರಿಗೆ ಕೇಸ್ ಗಳನ್ನು ಎದುರಿಸಬೇಕಾ..? ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕಾ ತಿಳಿಯದಂತಾಗಿದೆ.

