ಬೆಂಗಳೂರು: ಕೊರೊನಾ ಕಠಿಣ ನಿಯಮ ಇದ್ದಂತ ಸಮಯದಲ್ಲೂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆ ನಡೆದಿತ್ತು. ಅದಕ್ಕೆ ಸಂಬಂಧಿಸಿದಂತೆ ದೂರು ಕೂಡ ದಾಖಲಾಗಿತ್ತು. ಇದೀಗ ಹೈಕೋರ್ಟ್ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ನೀಡಿದೆ.
ನಿಯಮ ಮೀರಿ ಪಾದಯಾತ್ರೆ ನಡೆಸಿದ್ದಕ್ಕಾಗಿ ಡಿಕೆ ಶಿವಕುಮಾರ್ ಸೇರಿದಂತೆ 13 ಜನರ ವಿರುದ್ಧ ದೂರು ದಾಖಲಾಗಿತ್ತು. ಮೂರು ಪ್ರಕರಣಗಳು ದಾಖಲಾಗಿತ್ತು. ಅದರಲ್ಲಿ ಒಂದು ಪ್ರಕರಣವನ್ನು ವಿಚಾರಣೆ ನಡೆಸಿರುವ ಹೈಕೋರ್ಟ್ ರದ್ದು ಮಾಡಿದೆ. ಇದರಿಂದ ಡಿಸಿಎಂಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ.
2022ರಲ್ಲಿ ಪಾದಯಾತ್ರೆ ನಡೆಸಲಾಗಿತ್ತು. ನಿಯಮ ಉಲ್ಲಂಘನೆ ಸಂಬಂಧ ರಾಮನಗರ ತಹಶಿಲ್ದಾರ್ ಅವರು ರಾಮನಗರ ಗ್ರಾಮೀಣ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ಅದರ ವಿಚಾರಣೆ ನಡೆಸಿದ್ದ ಪೊಲೀಸರು ಕೋರ್ಟ್ ಗೆ ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದರು. ಬಳಿಕ ಜನಪ್ರತಿನಿಧಿಗಳ ಕೋರ್ಟ್ ಇದನ್ನು ಪ್ರಶ್ನಿಸಿ, ಡಿಕೆಶಿ, ಸಿದ್ದರಾಮಯ್ಯ ಸೇರಿದಂತೆ ಎಲ್ಲರಿಗೂ ತಾತ್ಕಾಲಿಕ ರಿಲೀಫ್ ನೀಡಿತ್ತು. ಇದೀಗ ಒಂದು ಕೇಸನ್ನು ಹೈಕೋರ್ಟ್ ರದ್ದು ಮಾಡಿದೆ.