ನವದೆಹಲಿ: ಸಿಬಿಐ ಪ್ರಕರಣ ಸಂಬಂಧ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆಯೇ ಮುಂದುವರೆದಿದೆ. ಈ ಮೂಲಕ ಸುಪ್ರೀಂ ಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ.
ಪ್ರಕರಣದ ಸಿಬಿಐ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡತ್ತು. ಬಳಿಕ ಸುಪ್ರೀಂ ಕೋರ್ಟ್ ಗೆ ಹೋಗಲಾಗಿತ್ತು. ಇದೀಗ ಸುಪ್ರೀಂ ಕೋರ್ಟ್ ನಲ್ಲೂ ಡಿಕೆಶಿಗೆ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಆದೇಶವನ್ನೇ ಪಾಲನೆ ಮಾಡಬೇಕಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ CBI ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಪ್ರಕರಣದ ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೀಗಾಗಿ ತಡೆಯಾಜ್ಞೆ ತೆರವುಗೊಳಿಸಲು ಮನವಿ ಮಾಡಲಾಗಿತ್ತು. ಸಿಬಿಐ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.