ಇಸ್ಲಾಮಾಬಾದ್: ತೋಶಾಖಾನಾ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದೆ. ಇಸ್ಲಾಮಾಬಾದ್ ನ ಹೈಕೋರ್ಟ್ ಜೈಲಿನಿಂದ ಬಿಡುಗಡೆ ಮಾಡುವಂತೆ ಮಹತ್ವದ ಆದೇಶ ಹೊರಡಿಸಿದೆ.
ಇಮ್ರಾನ್ ಖಾನ್ ತೋಶಖಾನಾ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದರು. ಇಸ್ಲಾಮಾಬಾದ್ ಜಿಲ್ಲಾ ಮತ್ತು ಸೆಷನ್ ಕೋರ್ಟ್ ಶಿಕ್ಷೆ ವಿಧಿಸಿತ್ತು. ಮೂರು ವರ್ಷ ಜೈಲು ಶಿಕ್ಷೆಯ ಜೊತೆಗೆ ಒಂದು ಲಕ್ಷ ರೂಪಾತಿ ದಂಡ ವಿಧಿಸಿತ್ತು. ಅದರ ಜೊತೆಗೆ ಐದು ವರ್ಷಗಳ ಕಾಲ ಯಾವುದೇ ಚುನಾವಣೆಗೆ ನಿಲ್ಲದಂತೆ ಆದೇಶ ಹೊರಡಿಸಿತ್ತು. ಇದೀಗ ಎಲ್ಲದಕ್ಕೂ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ನಿಂದ ಬಿಡಿಗಡೆ ಭಾಗ್ಯ ಸಿಕ್ಕಿದೆ. ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ.
ಇಮ್ರಾನ್ ಖಾನ್ ಬಂಧನದ ಬಳಿಕ ಪಾಕಿಸ್ತಾನದ ನ್ಯಾಷನಲ್ ಅಸೆಂಬ್ಲಿ ವಿಸರ್ಜನೆ ಮಾಡಲು ಪಾಕ್ ಪಿಎಂ ಶೆಹಬಾಜ್ ಷರೀಫ್ ಯೋಚಿಸಿದ್ದರು. ಚುನಾವಣೆ ಸಮೀಪದಲ್ಲಿರುವಾಗಲೇ ಇಮ್ರಾನ್ ಖಾನ್ ಗೆ ರಿಲೀಫ್ ಸಿಕ್ಕಿದೆ. ಬಿಡುಗಡೆ ಬಳಿಕ ಈ ಬಾರಿಯ ಚುನಾವಣೆಯಲ್ಲೂ ಸ್ಪರ್ಧಿಸುವ ಸಾಧ್ಯತೆ ಇದೆ.