ಬೆಂಗಳೂರು: ದಲಿತರ ಮೇಲೆ ದೌರ್ಜನ್ಯ ತಡೆ ಕೇಸ್ ಗೆ ಸಂಬಂಧಿಸಿದಂತೆ ಸಚಿವ ಡಿ ಸುಧಾಕರ್ ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಮೂಲಕ ಡಿ ಸುಧಾಕರ್ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತೆ ಆಗಿದೆ. ಈ ಸಂಬಂಧ ವಿಚಾರಣೆಯನ್ನು ಅಕ್ಟೋಬರ್3ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಸುಬ್ಬಮ್ಮ ಎಂಬುವವರು ಸಚಿವರ ಮೇಲೆ ದೂರು ದಾಖಲಿಸಿದ್ದರು. ಈ ಸಂಬಂಧ ಎಸ್‌ಸಿ/ಎಸ್ಟಿ ಕಾಯ್ದೆಯ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಈ ಪ್ರಕರಣದ ರದ್ದುಕೋರಿ ಸಚಿವ ಡಿ ಸುಧಾಕರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ಏಕಸದಸ್ಯ ಪೀಠ, ಪ್ರಕರಣ ಸಂಬಂಧ ಮಧ್ಯಂತರ ತಡೆ ನೀಡಿದೆ. ಈ ಮೂಲಕ ಸಚಿವ ಡಿ ಸುಧಾಕರ್ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಆಗಿದೆ.
ಇನ್ನು ಭೂಕಬಳಿಕೆ ಹಾಗೂ ಜಾತಿ ನಿಂದನೆ ಆರೋಪ ಎದುರಾಗಿದ್ದರಿಂದ ಸಚಿವರ ವಿರುದ್ಧ ಚಿತ್ರದುರ್ಗ ಜಿಲ್ಲೆಯಲ್ಲೂ ಭಾರೀ ಆಕ್ರೋಶವೆದ್ದಿತ್ತು. ಎಂ ಜಯಣ್ಣ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಿ ಸುಧಾಕರ್ ಅವರನ್ನು ಸಚಿವ ಸ್ಥಾನದಿಂದ ವಜಾಮಾಡಬೇಕೆಂದು ಒತ್ತಾಯಿಸಿದ್ದರು. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಆಕ್ರೋಶ ಹೊರ ಹಾಕಿದ್ದರು.