Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಚಿವ ಡಿ ಸುಧಾಕರ್ ಗೆ ಬಿಗ್ ರಿಲೀಫ್ : ಹೈಕೋರ್ಟ್ ನಿಂದ ಮಧ್ಯಂತರ ತಡೆ

---Advertisement---

 

ಬೆಂಗಳೂರು: ದಲಿತರ ಮೇಲೆ ದೌರ್ಜನ್ಯ ತಡೆ ಕೇಸ್ ಗೆ ಸಂಬಂಧಿಸಿದಂತೆ ಸಚಿವ ಡಿ ಸುಧಾಕರ್ ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಮೂಲಕ ಡಿ ಸುಧಾಕರ್ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತೆ ಆಗಿದೆ. ಈ ಸಂಬಂಧ ವಿಚಾರಣೆಯನ್ನು ಅಕ್ಟೋಬರ್3ಕ್ಕೆ ಮುಂದೂಡಿಕೆ ಮಾಡಲಾಗಿದೆ.

ಸುಬ್ಬಮ್ಮ ಎಂಬುವವರು ಸಚಿವರ ಮೇಲೆ ದೂರು ದಾಖಲಿಸಿದ್ದರು. ಈ ಸಂಬಂಧ ಎಸ್‌ಸಿ/ಎಸ್ಟಿ ಕಾಯ್ದೆಯ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಈ ಪ್ರಕರಣದ ರದ್ದುಕೋರಿ ಸಚಿವ ಡಿ ಸುಧಾಕರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ಏಕಸದಸ್ಯ ಪೀಠ, ಪ್ರಕರಣ ಸಂಬಂಧ ಮಧ್ಯಂತರ ತಡೆ ನೀಡಿದೆ. ಈ ಮೂಲಕ ಸಚಿವ ಡಿ ಸುಧಾಕರ್ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಆಗಿದೆ‌.

ಇನ್ನು ಭೂಕಬಳಿಕೆ ಹಾಗೂ ಜಾತಿ ನಿಂದನೆ ಆರೋಪ ಎದುರಾಗಿದ್ದರಿಂದ ಸಚಿವರ ವಿರುದ್ಧ ಚಿತ್ರದುರ್ಗ ಜಿಲ್ಲೆಯಲ್ಲೂ ಭಾರೀ ಆಕ್ರೋಶವೆದ್ದಿತ್ತು. ಎಂ ಜಯಣ್ಣ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಿ ಸುಧಾಕರ್ ಅವರನ್ನು ಸಚಿವ ಸ್ಥಾನದಿಂದ ವಜಾಮಾಡಬೇಕೆಂದು ಒತ್ತಾಯಿಸಿದ್ದರು.  ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಆಕ್ರೋಶ ಹೊರ ಹಾಕಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...