ಸುದ್ದಿಒನ್, ಚಿತ್ರದುರ್ಗ, ನವೆಂಬರ್.20 : ಚಿತ್ರದುರ್ಗ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಮುರುಘಾ ಶರಣರ ವಿರುದ್ಧ ಹೊರಡಿಸಿದ್ದ ಅರೆಸ್ಟ್ ವಾರಂಟ್ ಗೆ ಹೈಕೋರ್ಟ್ ತಡೆ ನೀಡಿದೆ.
ಚಿತ್ರದುರ್ಗದಲ್ಲಿ ಮುರುಘಾಶರಣ ಬಂಧನ ಆದೇಶ ಜಾರಿಯಾದ ಹಿನ್ನೆಲೆಯಲ್ಲಿ ಹೈಕೋರ್ಟಿನಲ್ಲಿ ತುರ್ತು ವಿಚಾರಣೆ ನಡೆಸಿದ ನ್ಯಾ.ಸೂರಜ್ ಗೋವಿಂದರಾಜು ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದ್ದು, ಚಿತ್ರದುರ್ಗಕ್ಕೆ ಕರೆತಂದಿರುವುದು ಹೈಕೋರ್ಟ್ ಆದೇಶದ ಉಲ್ಲಂಘನೆಯಾಗಿದೆ. ಅದ್ದರಿಂದ ಮುರುಘಾ ಶರಣರನ್ನು ಬಿಡುಗಡೆ ಮಾಡುವಂತೆ ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.