Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನ ಮರುಸ್ಥಾಪಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ

---Advertisement---

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್‌ನಿಂದ ದೊಡ್ಡ ಮಟ್ಟದ ಕಾನೂನು ನೆರವು ದೊರೆತ ಬೆನ್ನಲ್ಲೇ, ಅವರ ಶಾಸಕ ಸ್ಥಾನವನ್ನು ಮರುಸ್ಥಾಪಿಸಿ ವಿಧಾನಸಭೆ ಸಚಿವಾಲಯ ಮಂಗಳವಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯವು ವಿನಯ್ ಕುಲಕರ್ಣಿ ಸೇರಿದಂತೆ ಇತರ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಈ ಶಿಕ್ಷೆಯ ತೀರ್ಪಿನ ಆಧಾರದ ಮೇಲೆ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಲಾಗಿತ್ತು.

ಆದರೆ, ಸಿವಿಲ್ ನ್ಯಾಯಾಲಯ ನೀಡಿರುವ ಈ ಜೀವಾವಧಿ ಶಿಕ್ಷೆಯ ತೀರ್ಪಿಗೆ ಹೈಕೋರ್ಟ್‌ ಇತ್ತೀಚೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿತ್ತು. ಹೈಕೋರ್ಟ್‌ನ ಈ ನಿರ್ದೇಶನವನ್ನು ಆಧರಿಸಿ, ಸಚಿವಾಲಯವು ಅವರ ಶಾಸಕತ್ವವನ್ನು ಮರಳಿ ನೀಡಿ ಹೊಸ ಆದೇಶವನ್ನು ಹೊರಡಿಸಿದೆ.

Join WhatsApp

Join Now

Join Telegram

Join Now