Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉಪೇಂದ್ರಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್.. ಎಫ್ಐಆರ್ ಗೆ ತಡೆಯಾಜ್ಞೆ

---Advertisement---

 

ಉಪೇಂದ್ರ ಅವರಿಗೆ ಸದ್ಯ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ನಿಂದ ಎಫ್ಐಆರ್ ಗೆ ತಡೆ ನೀಡಲಾಗಿದೆ. ಉಪೇಂದ್ರ ವಿರುದ್ಧ ಬೆಂಗಳೂರಿನ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿತ್ತು. ತಮ್ಮ ವಿರುದ್ಧ ಹಾಕಲಾಗಿದ್ದ ಎಫ್​ಐಆರ್​ಗೆ ತಡೆ ನೀಡಬೇಕು ಎಂದು ಕೋರಿ ಉಪೇಂದ್ರ ಅವರು ಹೈಕೋರ್ಟ್​ ಮೆಟ್ಟಿಲು ಏರಿದ್ದರು. ಈಗ ಅವರ ಪರವಾಗಿ ಕೋರ್ಟ್​ ಆದೇಶ ನೀಡಿದೆ. ‘ಗಾದೆ ಮಾತು ಉಲ್ಲೇಖಿಸಿ ಉಪೇಂದ್ರ ಹೇಳಿಕೆ ನೀಡಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಇದಕ್ಕೆ ಅನ್ವಯವಾಗುವುದಿಲ್ಲ’ ಎಂದು ಉಪೇಂದ್ರ ಪರವಾಗಿ ಹಿರಿಯ ವಕೀಲ ಉದಯ್ ಹೊಳ್ಳ ವಾದ ಮಂಡನೆ ಮಾಡಿದ್ದಾರೆ.

ಜಾತಿ ನಿಂದನೆ ಆರೋಪ ಎದುರಾದ ಬಳಿಕ ಉಪೇಂದ್ರ ಅವರ ವಿರುದ್ಧ ಸೋಶಿಯಲ್​ ಮೀಡಿಯಾದಲ್ಲಿ ಅನೇಕರು ಕಿಡಿಕಾರಲು ಆರಂಭಿಸಿದರು. ಈಗ ಉಪೇಂದ್ರ ಅವರ ಮನೆಗೆ ಪೊಲೀಸರು ಬಿಗಿ ಭದ್ರತೆ ನೀಡಿದ್ದಾರೆ. ಬೆಂಗಳೂರಿನ ಕತ್ತರಿಗುಪ್ಪೆ ಮತ್ತು ಸದಾಶಿವ ನಗರದ ತಮ್ಮ ನಿವಾಸದಲ್ಲಿ ಉಪೇಂದ್ರ ಇಲ್ಲ ಎಂದು ಹೇಳಲಾಗುತ್ತಿದೆ. ಆದರೂ ಮುಂಜಾಗೃತ ಕ್ರಮವಾಗಿ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಇನ್ನು ಉಪೇಂದ್ರ ಅವರ ಹೇಳಿಕೆ ಕುರಿತು ಬೆಂಗಳೂರು ಯೂನಿವರ್ಸಿಟಿ ವಿದ್ಯಾರ್ಥಿಗಳು ಕೂಡ ಪ್ರತಿಭಟನೆ ನಡೆಸಿದ್ದಾರೆ.

ನಿನ್ನೆ ಉಪೇಂದ್ರ ಅವರು ಫೇಸ್ ಬುಕ್ ಲೈವ್ ನಲ್ಲಿ ಮಾತಾಡುವಾಗ ಗಾದೆ ಮಾತೊಂದನ್ನು ಹೇಳಿದ್ದರು. ಊರಿದ್ದ ಮೇಲೆ ಹೊಲಗೇರಿ ಇದ್ದೆ ಇರುತ್ತೆ ಎಂದಿದ್ದರು. ಇದರಿಂದ ಒಂದು ಸಮುದಾಯಕ್ಕೆ ಅವಹೇಳನ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತವಾಗಿತ್ತು. ಈ ಸಂಬಂಧ ಉಪೇಂದ್ರ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಪ್ರತಿಭಟನೆಗಳು ಕೂಡ ನಡೆದಿತ್ತು. ಉಪೇಂದ್ರ ಅವರನ್ನು ಬಂಧಿಸಬೇಕೆಂದು ಒತ್ತಾಯ ಕೇಳಿ ಬಂದಿತ್ತು. ಇದೀಗ ಹೈಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment