ಮಂಗಳೂರು; ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಸುಮಾರು ಕಡೆ ನಿಷೇಧ ಮಾಡಲಾಗಿತ್ತು. ಅವರ ಭಾಷಣ ಬೇಡ ಎಂದೇ ಹಲವರು ಹೇಳಿದ್ದರು. ಇದೀಗ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಯಾವುದೇ ರೀತಿಯ ಬಂಧನ ಸಹಿತ ಯಾವುದೇ ಒತ್ತಡದ ಕ್ರಮಗಳನ್ನ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ ನೀಡಲಾಗಿದೆ. ಈ ಮೂಲಕ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ರಿಲ್ಯಾಕ್ಸ್ ಸಿಕ್ಕಂತಾಗಿದೆ.
ನ್ಯಾ.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ಪೀಠವೂ ಈ ಆದೇಶವನ್ನು ಹೊರಡಿಸಿ, ಜೂನ್ 10ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಮೇ 12ರಂದಜ ಬಂಟ್ವಾಳದ ಕಾವಳಪಡೂರು ಗ್ರಾಮದ ಮದುವೆ ಪ್ಯಾಲೇಸ್ ಹಾಲ್ ನಲ್ಲಿ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿಯ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಸ್ವಾಸ್ಥ್ಯ ಕೆಎಉವುದು ಮತ್ತು ಗುಂಪುಗಳ ನಡುವೆ ದ್ವೇಷ ಬಿತ್ತುವಂತೆ ಕಲ್ಲಡ್ಕ ಪ್ರಭಾಕರ್ ಭಟ್ ಪ್ರಚೋದನಕಾರಿ ಹೇಳಿಕೆ ನೀಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು.
ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ 353(2)ರಡಿ ದೂರು ದಾಖಲಾಗಿತ್ತು. ದೂರಿನನ್ವಯ ಎಫ್ಐಆರ್ ಕೂಡ ದಾಖಲಾಗಿತ್ತು. ಈ ಪ್ರಕರಣ ರದ್ದುಕೋರಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಪ್ರಭಾಕರ್ ಅವರ ಪರವಾಗಿ ಅರುಣ್ ಶ್ಯಾಂ ವಾದ ಮಂಡಿಸಿದ್ದರು. ವಾದವನ್ನು ಆಲಿಸಿದ ಹೈಕೋರ್ಟ್, ಪ್ರಭಾಕರ್ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಆದೇಶ ಹೊರಡಿಸಿದೆ. ಈ ಮೂಲಕ ಕಲ್ಲಡ್ಕ ಪ್ರಭಾಕರ್ ಭಟ್ ರಿಲ್ಯಾಕ್ಸ್ ಆಗಿದ್ದಾರೆ.
