ಬಲೂಚಿಸ್ತಾನದಲ್ಲಿ ಬಲೂಚ್ ಬಂಡುಕೋರರ ದಾಳಿ ಪಾಕಿಸ್ತಾನ ಸರ್ಕಾರವನ್ನು ಕಷ್ಟಕ್ಕೆ ಸಿಲುಕಿಸಿದೆ. ಪಾಕಿಸ್ತಾನ ಸರ್ಕಾರದ ಮೇಲೆ ಭಾರೀ ರಾಜಕೀಯ ಹಾಗೂ ಭದ್ರತಾ ಒತ್ತಡ ಉಂಟುಮಾಡಿದೆ. ಪಾಕಿಸ್ತಾನದ ಒಳನಾಡಿನ ಭದ್ರತಾ ಸ್ಥಿತಿ ಸಂಪೂರ್ಣವಾಗಿ ಹಾಳಾಗಿದೆ.
ಪರಿಸ್ಥಿತಿ ಎಷ್ಟು ಗಂಭೀರವಾಗಿದೆ ಎಂದರೆ, ಪಾಕಿಸ್ತಾನದ ಒಟ್ಟು ಭೂವಿಸ್ತೀರ್ಣದ ಶೇ. 40 ರಷ್ಟು ಭಾಗ ನಮ್ಮ ನಿಯಂತ್ರಣದಿಂದ ತಪ್ಪಿಸಿಕೊಂಡಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಹೇಳಿದ್ದಾರೆ. ಬಂಡುಕೋರರ ಬಳಿ ಲಕ್ಷಾಂತರ ರೂಪಾಯಿ ಮೌಲ್ಯದ ಅತ್ಯಾಧುನಿಕ ರೈಫಲ್‌ಗಳು ಮತ್ತು ಶಸ್ತ್ರಾಸ್ತ್ರಗಳಿದ್ದು, ಪಾಕಿಸ್ತಾನ ಸೇನೆಯ ಬಳಿ ಅಷ್ಟಿಲ್ಲ ಎಂದು ರಕ್ಷಣಾ ಸಚಿವರು ಒಪ್ಪಿಕೊಂಡಿದ್ದಾರೆ.
ಭಾರತಕ್ಕೆ ಬೆದರಿಕೆ ಹಾಕುತ್ತಿದ್ದ ಪಾಕಿಸ್ತಾನ ಇದೀಗ ತನ್ನದೇ ಭೂಭಾಗ ಉಳಿಸಿಕೊಳ್ಳಲು ಹೋರಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಲೂಚಿಸ್ತಾನದಲ್ಲಿ ಪಾಕಿಸ್ತಾನಿ ಸೇನೆ ಮತ್ತು ಬಲೂಚ್ ಬಂಡುಕೋರರ ನಡುವೆ ನಡೆಯುತ್ತಿರುವ ಸಂಘರ್ಷದ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

















