Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಬಿಗ್ ಅಪ್ಡೇಟ್ : ಕೋರ್ಟ್ ಗೆ ಮೆಮೋ ಸಲ್ಲಿಸಿದ ಎಸ್ಪಿಪಿ ಪ್ರಸನ್ನ

---Advertisement---

 

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅಂಡ್ ಗ್ಯಾಂಗ್ ಎರಡನೇ ಬಾರಿಗೆ ಜೈಲು ಪಾಲಾಗಿದ್ದಾರೆ. ಆದರೆ ಈ ಕೇಸಲ್ಲಿ ಇದೀಗ ಮಹತ್ವದ ಬೆಳವಣಿಗೆ ನಡೆದಿದ್ದು, ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಕೋರ್ಟ್ ಗೆ ಮೊಮೊ ಸಲ್ಲಿಕೆ ಮಾಡಿದ್ದಾರೆ. ಆದಷ್ಟು ಬೇಗ ವಿಚಾರಣೆ ಮುಗಿಸುವಂತೆ ಸುಪ್ರೀಂ ಕೋರ್ಟ್ ಹೇಳಿದ್ದರು ಕೂಡ ಆರೋಪಿಗಳು ಉದ್ದೇಶ ಪೂರ್ವಕವಾಗಿಯೇ ವಿಳಂಬ ಮಾಡ್ತಾ ಇದ್ದಾರೆ ಎಂದು ದೂರಿದ್ದಾರೆ.

ಕೋರ್ಟ್ ಗೆ ಪದೇ ಪದೇ ತಮ್ಮನ್ನು ಪ್ರಕರಣದಿಂದ ಮುಕ್ತಗೊಳಿಸುವಂತೆ ಕೋರಿ ಅರ್ಜಿಗಳನ್ನು ಸಲ್ಲಿಕೆ ಮಾಡುತ್ತಿದ್ದು, ಈ ಮೂಲಕ ವಿಚಾರಣೆಯನ್ನು ವಿಳಂಬ ಮಾಡ್ತಾ ಇದ್ದಾರೆ ಎಂದು ದೂರಿದ್ದಾರೆ. ಅರ್ಜಿಗಳನ್ನು ಸಲ್ಲಿಕೆ ಮಾಡುವಂತಿದ್ದರೆ ಎಲ್ಲರು ಒಟ್ಟಿಗೆ ಮಾಡಿ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಆದರೆ ಈಗ ಒಬ್ಬರ ನಂತರ ಒಬ್ಬರು ಕೇಸ್ ನಿಂದ ಮುಕ್ತಿಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಕೆ ಮಾಡುತ್ತಿದ್ದಾರೆ.

ಆರೋಪಿಗಳ ಪರ ವಕೀಲರು ಉದ್ದೇಶಪೂರ್ವಕವಾಗಿಯೇ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಕಳೆದ ಎರಡು ತಿಂಗಳಿನಿಂದ ಕೋರ್ಟ್ ಸಮಯವನ್ನು ಹಾಳು ಮಾಡುವ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಆದಷ್ಟು ಬೇಗ ವಿಚಾರಣೆ ನಡೆದು, ಕೋರ್ಟ್ ತೀರ್ಪು ನೀಡಬೇಕೆಂದು ಎಸ್ಪಿಪಿ ಪ್ರಸನ್ನ ಕುಮಾರ್ ಮನವಿ ಮಾಡಿದ್ದಾರೆ. ಸದ್ಯ ದರ್ಶನ್ ಅವರಿಗೆ ಇರುವುದು ಜಾಮೀನಿನ ಚಿಂತೆಗಿಂತ ಹಾಸಿಗೆ, ದಿಂಬಿನ ಚಿಂತೆ. ಮನೆಯಲ್ಲಿ ಆರಾಮವಾಗಿ ವಿಶ್ರಾಂತಿ ಪಡೆಯುತ್ತಿದ್ದ ನಟ ದರ್ಶನ್ ಜೈಲಿನಲ್ಲಿ ನರಕಯಾತನೆ ಪಡುವಂತಾಗಿದೆ. ಅದರಲ್ಲೂ ಬೆನ್ನು ನೋವು, ಮೊಣ ಕೈ ನೋವಿನಿಂದ ಬಳಲುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now