Connect with us

Hi, what are you looking for?

ಪ್ರಮುಖ ಸುದ್ದಿ

ಬಿಗ್ ಬಾಸ್ ಸೀಸನ್-8ರ ಮೊದಲ ವೈಲ್ಡ್ ಕಾರ್ಡ್ ಎಂಟ್ರಿ ಯಾರು ಗೊತ್ತಾ…? ವೈಲ್ಡ್ ಕಾರ್ಡ್ ಎಂಟ್ರಿ ಕಂಟೆಸ್ಟೆಂಟ್ ನೋಡಿ ಪ್ರಶಾಂತ್ ಸಂಬರ್ಗಿ ಶಾಕ್…!

ಬಿಗ್ ಬಾಸ್ ಆಟ ದಿನದಿಂದ ದಿನಕ್ಕೆ ರಂಗೇರ್ತಿದೆ. ಗೆಲ್ಲಬೇಕು ಅಂತಾ ಕಂಟೆಸ್ಟೆಂಟ್ ಪಣ ತೊಟ್ಟು ಟಾಸ್ಕ್ ಮಾಡ್ತಿದ್ದಾರೆ. ಒಟ್ಟು 17 ಸ್ಪರ್ಧಿಗಳಲ್ಲಿ ಈಗಾಗ್ಲೇ ಮನೆಯಿಂದ ಟಿಕ್ ಸ್ಟಾರ್ ಧನುಶ್ರೀ, ನಿರ್ಮಲಾ ಚೆನ್ನಪ್ಪ, ಗೀತಾ ಭಾರತಿ ಭಟ್ ಹಾಗೂ ಚಂದ್ರಕಲಾ ಮೋಹನ್ ಸೇರಿದಂತೆ ನಾಲ್ಕು ಸ್ಪರ್ಧಿಗಳು ಹೊರ ನಡೆದಿದ್ದು, ಉಳಿದ 13 ಮಂದಿ ನಡುವೆ ಫೈಪೋಟಿ ನಡೆಯುತ್ತಿದೆ. ಹೀಗಿರುವಾಗಲೇ ಬಿಗ್ ಮನೆಯೊಳಗೆ ವೈಲ್ಡ್ ಕಾರ್ಡ್ ಮೂಲಕ ಮತ್ತೊಬ್ಬ ಸದಸ್ಯರು ಎಂಟ್ರಿ ಕೊಟ್ಟಿದ್ದಾರೆ.

ಅವರೇ ಚಕ್ರವರ್ತಿ ಚಂದ್ರಚೂಡ್.. ಕನ್ನಡ ಸಾಹಿತ್ಯ ಕ್ಷೇತ್ರ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡ ಇವ್ರು ಪತ್ರಕರ್ತರಾಗಿಯೂ ಹಾಗೂ ಸಿನಿಮಾ ರಂಗದಲ್ಲಿ ನಿರ್ದೇಶಕರಾಗಿ ಸಿನಿಮಾಗಳಿಗೆ ಆ್ಯಕ್ಷನ್ ಕಟ್ ಹೇಳಿರುವವರು. ಟಿವಿ ಚಾನಲ್ ಗಳಲ್ಲಿ ಪ್ಯಾನಲ್ ಡಿಸ್ಕಷನ್, ಡಿಬೆಟ್ ಗಳಲ್ಲಿ ಭಾಗವಹಿಸ್ತಿದ್ದ ಚಂದ್ರಚೂಡ್ ಇನ್ಮುಂದೆ ಬಿಗ್ ಬಾಸ್ ಶೋನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗ್ತಿದೆ.

ಅಂದಹಾಗೇ ಪ್ರಶಾಂತ್ ಸಂಬರ್ಗಿ ಹಾಗೂ ಚಂದ್ರಚೂಡ್ ಇಬ್ಬರು ಒಳ್ಳೆ ಮಾತುಗಾರರು. ಹೀಗಿರುವಾಗ ಇವರಿಬ್ಬರು ಬಿಗ್ ಮನೆಯಲ್ಲಿ ಒಂದ್ಕಡೆ ಸೇರಿದ್ರೆ ಮಾತಿನ ಸಮರ ಮತ್ತಷ್ಟು ಹೆಚ್ಚಾಗಲಿದೆ. ಈಗಾಗ್ಲೇ ಚಕ್ರವರ್ತಿ ಚಂದ್ರಚೂಡ್ ವೈಲ್ಡ್ ಕಾರ್ಡ್ ಮೂಲಕ ಬಿಗ್ ಮನೆ ಪ್ರವೇಶ ಮಾಡಿದ್ದು, ಎಲ್ಲರ ಕುತೂಹಲ ಹೆಚ್ಚಿಸಿದೆ. ಸದ್ಯ ರಿಲೀಸ್ ಆಗಿರುವ ಪ್ರೋಮೋದಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಆಗಿರುವ ಚಂದ್ರಚೂಡ್ ಅವರನ್ನು ನೋಡಿ ಪ್ರಶಾಂತ್ ಎಕ್ಸೈಟ್ ನಿಂದ ಓಹೋ ಎಂದು ಕೂಗಿದ್ದಾರೆ. ಅತ್ತ ಮನೆಯವರು ಒಂದು ಕ್ಷಣ ಗಾಬರಿಯಿಂದ ನೋಡಿದ್ದಾರೆ. ಯಾರು ಇವ್ರು ಅಂತಾ ಲೆಕ್ಕಾ ಆಗ್ತಿದ್ದಾರೆ. ಇವತ್ತಿನ ಸಂಚಿಕೆಯಲ್ಲಿ ವೈಲ್ಡ್ ಎಂಟ್ರಿ ಸದಸ್ಯರ ಯಾರು ಇರಬಹುದು..? ಚಂದ್ರಚೂಡ್ ಅಥವಾ ಬೇರೆನಾ ಅನ್ನೋದು ಗೊತ್ತಾಗಲಿದೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಕೊಡಗು: ಸದ್ಯ ಲಾಕ್ಡೌನ್ ನಿಂದಾಗಿ ಅದೆಷ್ಟೋ ಜನ ತುತ್ತು ಅನ್ನಕ್ಕೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಂಥವರ ಸಹಾಯಕ್ಕಾಗಿ ಅದೆಷ್ಟೋ ಜನ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈ ಮಧ್ಯೆ ಅಲ್ಲೊಬ್ಬ ಯುವಕ ತನ್ನ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಬೆಂಗಳೂರು : ಸಂಚಾರಿ ವಿಜಯ್ ಅವರು ನಟನೆಯಲ್ಲಿ ಅದ್ಭುತ ನಟ ಅನ್ನೋದು ಎಲ್ಲರಿಗೂ ಗೊತ್ತು. ತನ್ನ ನಟನೆಯಿಂದಲೇ ಎಲ್ಲರ ಗಮನ ಸೆಳೆದ ನಟ. ತಾನೊಬ್ಬ ನಟ ಎಂಬ ಹಮ್ಮಿಗಿಂತ ತಾನೊಬ್ಬ ಕಲಾವಿದ ಎಂಬಂತೆ...

ಪ್ರಮುಖ ಸುದ್ದಿ

ಸುದ್ದಿಒನ್, ಬೆಂಗಳೂರು, (ಜೂ.15) : ದ್ವಿತೀಯ ಪಿಯು ಪುನರಾವರ್ತಿತ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವ ಕುರಿತು ಪರಿಶೀಲಿಸಿ ನಿರ್ಧಾರ ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಪರೀಕ್ಷೆ ನಡೆಸದೆ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ರಾಜ್ಯ...

ಪ್ರಮುಖ ಸುದ್ದಿ

ಬೆಂಗಳೂರು: ಮೊದಲ ಹಂತದ ಅನ್ಲಾಕ್ ಶುರುವಾಗಿದ್ದು, ಬಿಬಿಎಂಪಿ ಆಟೋ ಚಾಲಕರಿಗೆ ಹೊಸ ರೂಲ್ಸ್ ತಂದಿದೆ. ಈ ರೂಲ್ಸ್ ಪ್ರಕಾರ ಆಟೋ ಡ್ರೈವರ್ ಗಳು ವ್ಯಾಕ್ಸಿನ್ ಹಾಕಿಸಿಕೊಳ್ಳದೆ ಇದ್ರೆ ಆಟೋ ಚಾಲನೆ ಮಾಡುವ ಹಾಗಿಲ್ಲ...

ಪ್ರಮುಖ ಸುದ್ದಿ

ಚಿಕ್ಕಮಗಳೂರು: ಬೈಕ್ ಅಪಘಾತದಿಂದ ತೀವ್ರ ಗಾಯಗೊಂಡಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ನಿನ್ನೆ ನಿಧನರಾಗಿದ್ದರು. ಇಂದು ರವಿಂದ್ರ ಕಲಾಕ್ಷೇತ್ರದಲ್ಲಿ ಅವರ ಅಂತಿಮ ದರ್ಶನಕ್ಕೂ ವ್ಯವಸ್ಥೆ ಮಾಡಲಾಗಿತ್ತು. ಇಂಡಸ್ಟ್ರಿಯಲ್ಲಿ ಎಲ್ಲರೊಟ್ಟಿಗೂ ಬೆರೆಯುತ್ತಿದ್ದ ನಟ....

ಪ್ರಮುಖ ಸುದ್ದಿ

ಇತರರು ತನಗೆ ಸ್ವಲ್ಪ ಕಷ್ಟ ಕೊಟ್ಟರೂ ಕ್ಷಮಾ ಗುಣವು ದೀರ್ಘಾಯಸ್ಸನ್ನು ಕೊಡುತ್ತದೆ. ಇದು ಹೇಗೆ ಸಾಧ್ಯ ಎಂದು ಅಂದುಕೊಳ್ಳುತ್ತಿರುವಿರಾ? ಈ ಮಾತಿಗೆ ಕೆಲವರು ವಿರೋಧವನ್ನು ವ್ಯಕ್ತಪಡಿಸುವವರೂ ಇರುವರು. ಯಾಕೆಂದರೆ ಅಂಥವರ ಪ್ರಕಾರವಾಗಿ ಇತರರ...

ದಿನ ಭವಿಷ್ಯ

ಮಂಗಳವಾರ ರಾಶಿ ಭವಿಷ್ಯ-ಜೂನ್-15,2021 ಮಿಥುನ ಸಂಕ್ರಾಂತಿ ಸೂರ್ಯೋದಯ: 05:52 AM, ಸೂರ್ಯಸ್ತ: 06:45 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಜ್ಯೇಷ್ಠ ಮಾಸ,ಉತ್ತರಾಯಣ, ವಸಂತ ಋತು,...

ಪ್ರಮುಖ ಸುದ್ದಿ

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 6835 ಹೊಸ ಪ್ರಕರಣ ಪತ್ತೆಯಾಗಿದೆ. 31828 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 117914 RTPCR ಟೆಸ್ಟ್ ಸೇರಿದಂತೆ ಒಟ್ಟು,...

error: Content is protected !!