Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆಶಿಗೆ ಬಿಹಾರ ಮುಖಂಡರಿಂದ ಬೆಂಬಲ : ಸಿದ್ದರಾಮಯ್ಯ ಏನಂದ್ರು..?

---Advertisement---

ಬೆಂಗಳೂರು: ಬಿಹಾರದ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕದಲ್ಲೂ ಪ್ರಚಾರ ಕಾರ್ಯ ಆರಂಭವಾಗಿದೆ. ಇತ್ತೀಚೆಗಷ್ಟೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಿಹಾರಿಗಳನ್ನ ಭೇಟಿ ಮಾಡಿ, ಪ್ರಚಾರ ಮಾಡಿದ್ದಾರೆ. ಅದೇ ವೇಳೆ ಬಿಹಾರಿ ಮುಖಂಡರೆಲ್ಲಾ ಸೇರಿ ನೀವೆ ಮುಂದಿನ ಸಿಎಂ ಆಗ್ಬೇಕು ಎಂಬುದನ್ನು ಹೇಳಿದ್ದಾರೆ. ಮುಂದಿನ ಸಿಎಂ ಡಿಕೆಶಿ ಎಂಬ ಘೋಷಣೆಯನ್ನು ಕೂಗಿದ್ದಾರೆ.

ಈ ಸಂಬಂಧ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಬಿಹಾರದ ಚುನಾವಣೆಯ ಪ್ರಚಾರಕ್ಕೆ ನೀವೂ ಹೋಗ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು, ನನಗಿನ್ನು ಯಾವುದೇ ರೀತಿಯ ಮಾಹಿತಿ ಬಂದಿಲ್ಲ. ಕರೆದಾಗ ಹೋಗ್ತೀನಿ ಎಂದಿದ್ದಾರೆ. ಜನ ಅಥವಾ ಮಾಧ್ಯಮಗಳು ಈ ಬಗ್ಗೆ ಚರ್ಚಿಸುವುದು ಅನಗತ್ಯ. ಹೈಕಮಾಂಡ್ ಆದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಥವಾ ಮಲ್ಲಿಕಾರ್ಜುನ ಖರ್ಗೆ ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಹೀಗಾಗಿ ಹೈಕಮಾಂಡ್ ನಿರ್ಧಾರವೇ ಅಂತಿಮ. ಬೇರೆಯವರು ಮಾತನಾಡಿದರೆ ಅದಕ್ಕೆ ಕಿಮ್ಮತ್ತಿಲ್ಲ ಎಂದಿದ್ದಾರೆ.

ಆಂಟಿ ಇನ್ ಕಮ್ ಟ್ಯಾಕ್ಸ್, ಬಿಜೆಪಿಯವರ ಭ್ರಷ್ಟಾಚಾರ, ಮಹಿಳೆಯರಿಗೆ ಪ್ರತಿ ತಿಂಗಳು ಎರಡು ಸಾವಿರ ಕೊಡ್ತಾ ಇದ್ದೀವಿ. ನಿತೀಶ್ ಹಲವು ವರ್ಷಗಳಿಂದ ಮುಖ್ಯಮಂತ್ರಿಯಾಗಿದ್ದಾರೆ. ಆದ್ರೆ ಯಾವುದೇ ರೀತಿಯ ಸಿದ್ಧಾಂತ ಇಲ್ಲ. ಬಡತನ ಜಾಸ್ತಿ ಇದ್ದಾರೆ. ಹೀಗಾಗಿ ಬಡವರು, ಅಲ್ಪಸಂಖ್ಯಾತರು ಕಾಂಗ್ರೆಸ್ ಗೆ ಬೆಂಬಲ ಜಾಸ್ತಿ ಇದೆ. ಹೀಗಾಗಿ ಕಾಂಗ್ರೆಸ್ ಗೆ ಮತ ಹಾಕ್ತಾರೆ ಎಂಬ ಮಾತನ್ನ ಹೇಳಿದ್ದಾರೆ. ಸದ್ಯ ರಾಜ್ಯ ಕಾಂಗ್ರೆಸ್ ನಾಯಕರು ಕೂಡ ಬಿಹಾರದ ಚುನಾವಣೆಗೆ ಮತ ಪ್ರಚಾರ ಮಾಡ್ತಾ ಇದ್ದಾರೆ. ಅಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಆಡಳಿತಕ್ಕೆ ತರಬೇಕೆಂದು ಕೊಂಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now