Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಬೈಕ್ – ಕಾರು ಡಿಕ್ಕಿ : ಸ್ಥಳದಲ್ಲೇ ಸವಾರ ಸಾವು..!

---Advertisement---

 

ಸುದ್ದಿಒನ್, ಚಿತ್ರದುರ್ಗ, ಜುಲೈ. 14 : ಬೈಕ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಬೋಕಿಕೆರೆ ಗ್ರಾಮದಲ್ಲಿ ನಡೆದಿದೆ. ಪ್ರವೀಣ್ ಹಾಗೂ ಯೋಗೀಶ್ ಮೃತರು.

ಶನಿವಾರ ತಡರಾತ್ರಿ ಈ ಅಪಘಾತ ನಡೆದಿದೆ. ಮೃತರಿಬ್ಬರು ಹೊಸದುರ್ಗದಿಂದ ಸಿದ್ದಾಪುರಕ್ಕೆ ಬೈಕ್‌ನಲ್ಲಿ ತೆರಳುತ್ತಿರುವಾಗ ಅಪಾಘಾತ ಸಂಭವಿಸಿದೆ. 26 ವರ್ಷದ ಪ್ರವೀಣ್ ಚಿಕ್ಕಮಗಳೂರು ಜಿಲ್ಲೆ ಸಿದ್ದಾಪುರ ಗ್ರಾಮದವರು ಹಾಗೂ 27 ವರ್ಷದ ಯೋಗೀಶ್ ಹೊಸದುರ್ಗ ತಾಲೂಕಿನ ಕಡಿವಾಣಕಟ್ಟೆ ಗ್ರಾಮದವರು. ಇಬ್ಬರ ಸಾವಿನಿಂದ ಕುಟುಂಬಸ್ಥರಲ್ಲಿ ದುಃಖ ಮಡುಗಟ್ಟಿದೆ.

ಕಾರು ಗುದ್ದಿರುವ ರಭಸಕ್ಕೆ ಇಬ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನು ಚಿಕ್ಕ ವಯಸ್ಸಿಗೆ ಎಲ್ಲರನ್ನು ಬಿಟ್ಟು ಬಾರದೂರಿಗೆ ಹೋಗಿರುವ ಸಂಕಟವನ್ನು ಅಪ್ಪ ಅಮ್ಮನಿಂದ ತಡೆದುಕೊಳ್ಳಲಾಗುತ್ತಿಲ್ಲ. ಈ ಸಂಬಂಧ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...