Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಸವ ಜಯಂತಿ ಅಂಗವಾಗಿ ಚಿತ್ರದುರ್ಗದಲ್ಲಿ ಬೈಕ್ ರ್ಯಾಲಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 09  : ಸಾಂಸ್ಕøತಿಕ ನಾಯಕ ವಿಶ್ವಗುರು ಬಸವೇಶ್ವರರ ಜಯಂತಿ ಅಂಗವಾಗಿ ವೀರಶೈವ ಸಮಾಜದಿಂದ ಗುರುವಾರ ನಗರದಲ್ಲಿ ಬೈಕ್ ರ್ಯಾಲಿ ನಡೆಯಿತು.

ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಹೊರಟ ಬೈಕ್ ರ್ಯಾಲಿ ಆನೆಬಾಗಿಲು, ದೊಡ್ಡಪೇಟೆ, ರಂಗಯ್ಯನಬಾಗಿಲು, ಮದಕರಿ ಸರ್ಕಲ್, ಗಾಯತ್ರಿ ಸರ್ಕಲ್, ಜೆ.ಸಿ.ಆರ್. ಆರ್.ಟಿ.ಓ. ಕಚೇರಿ ರಸ್ತೆ, ಕೆಳಗೋಟೆ, ಡಿ.ಸಿ.ಸರ್ಕಲ್, ಕನಕವೃತ್ತದ ಮೂಲಕ ನೀಲಕಂಠೇಶ್ವರಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ ಬೈಕ್ ರ್ಯಾಲಿ ಮುಕ್ತಾಯಗೊಂಡಿತು.

ವೀರಶೈವ ಸಮಾಜದ ಅಧ್ಯಕ್ಷ ಎಸ್.ಎಂ.ಎಲ್.ತಿಪ್ಪೇಸ್ವಾಮಿ, ಸಹ ಕಾರ್ಯದರ್ಶಿ ಜಿತೇಂದ್ರ, ಪಂಚಮಸಾಲಿ ಸಮಾಜದ ಪ್ರಕಾಶ್, ವಿಶ್ವ ಹಿಂದು ಪರಿಷತ್‍ನ ರುದ್ರೇಶ್, ವೀರಶೈವ ಅರ್ಬನ್ ಸೊಸೈಟಿಯ ನಿರ್ದೇಶಕ ಸಿದ್ದವ್ವನಹಳ್ಳಿ ಪರಮೇಶ್, ಪಿಳ್ಳೆಕೆರನಹಳ್ಳಿ ಬಸವರಾಜ್, ವೀರೇಂದ್ರ, ನಗರಸಭೆ ಸದಸ್ಯರುಗಳಾದ ಕೆ.ಬಿ.ಸುರೇಶ್, ಜಯಣ್ಣ, ವೀರಶೈವ ಲಿಂಗಾಯಿತ ಯುವ ವೇದಿಕೆ ಅಧ್ಯಕ್ಷ ಹೆಚ್.ಎಂ.ಮಂಜುನಾಥ್ ಇನ್ನು ಅನೇಕರು ಬೈಕ್ ರ್ಯಾಲಿಯಲ್ಲಿ ಭಾಗವಹಿಸಿದ್ದರು.
ಬಸವಣ್ಣನವರ ಭಾವಚಿತ್ರವುಳ್ಳ ಕೇಸರಿ ಭಾವುಟಗಳು ಮೆರವಣಿಗೆಯಲ್ಲಿ ರಾರಾಜಿಸಿದವು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment