ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬಳ್ಳಾರಿ : ಬಿರು ಬೇಸಿಗೆಯ ನಡುವೆ ಹಕ್ಕಿ ಜ್ವರದ ಆತಂಕವೂ ಹೆಚ್ಚಾಗಿದೆ. ಚಿಕ್ಕಬಳ್ಳಾಪುರದಲ್ಲಿ ಕಾಣಿಸಿಕೊಂಡಿದ್ದ ಹಕ್ಕಿಜ್ವರ ಇದೀಗ ಬಳ್ಳಾರಿಗೂ ಕಾಲಿಟ್ಟಿದೆ. ಸಂಡೂರು ತಾಲೂಕಿನ ಕುರೇಕುಪ್ಪ ಗ್ರಾಮದ ಸರ್ಕಾರಿ ಫೌಲ್ಟ್ರೀ ಫಾರ್ಮ್ ನಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಇದರ ಪರಿಣಾಮ ಇದೀಗ ಸಾವಿರಾರು ಕೋಳಿಗಳು ಸಾವಾಗಿವೆ. ಇದರಿಂದ ಸ್ಥಳೀಯ ಜನರಿಗೆ ಆತಂಕ ಎದುರಾಗಿದೆ.
ಹಕ್ಕಿ ಜ್ವರದಿಂದ 2,400 ಕೋಳಿಗಳು ಸಾವನ್ನಪ್ಪಿವೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ ಮಾಹಿತಿ ನೀಡಿದ್ದಾರೆ. ಫೆಬ್ರವರಿ 21ರಿಂದ ಇಲ್ಲಿಯವರೆಗೆ ಅಂದ್ರೆ ಕೇವಲ ಒಂದೇ ವಾರಕ್ಕೆ 2,400 ಕೋಳಿಗಳು ಮೃತಪಟ್ಟಿವೆ. ಸತ್ತ ಕೋಳಿಗಳ ಮಾದರಿ ಸಂಗ್ರಹಿಸಿ ಮಧ್ಯಪ್ರದೇಶದ ಭೂಪಾಲ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಸೆಕ್ಯೂರಿಟಿ ಅನಿಮಲ್ ಆಫ್ ದಿಸೀಸ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಪ್ರಯೋಗಾಲಯದ ವರದಿಯಲ್ಲಿ ಕೋಳಿಗಳಿಗೆ ಹಕ್ಕಿ ಜ್ವರ ಇರುವುದು ದೃಢಪಟ್ಟಿದೆ.
ಇನ್ನು ಈ ಸೋಂಕು ಆಂಧ್ರಪ್ರದೇಶ, ತೆಲಂಗಾಣದಿಂದ ಹರಡಿರುವ ಸಾಧ್ಯತೆಯೂ ಇದೆ. ಹಕ್ಕಿಜ್ವರ ದೃಢಪಟ್ಟ ಹಿನ್ನೆಲೆ ಅಲ್ಲಿನ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಜಿಲ್ಲೆಯಲ್ಲಿ ಅಗತ್ಯಕ್ರಮಗಳನ್ನ ಕೈಗೊಂಡಿದೆ. ಕುರೇಕುಪ್ಪ ಗ್ರಾಮದ ಸುತ್ತಲಿನ ಒಂದು ಕಿಲೋ ಮೀಟರ್ ದೂರವನ್ನು ಅಪಾಯಕಾರಿ ವಲಯವೆಂದು ಗುರುತು ಮಾಡಲಾಗಿದೆ. ಸದ್ಯ ಆ ವಲಯದ ಜನರಿಗೆ ಎಚ್ಚರದಿಂದ ಇರುವಂತೆ ಸೂಚನೆ ನೀಡಲಾಗಿದೆ. ಹಕ್ಕಿ ಜ್ವರ ಬಂದಿದೆ ಎಂದು ತಿಳಿದ ಬಳಿಕ ಸ್ಥಳೀಯರು ಸಹಜವಾಗಿಯೇ ಆತಂಕಗೊಂಡಿದ್ದಾರೆ. ಅದು ಬೇರೆ ಸಾವಿರಾರು ಸಂಖ್ಯೆಯಲ್ಲಿ ಕೋಳಿಗಳು ಸಾವನ್ನಪ್ಪಿರುವುದು ಅದರ ಮಾಲೀಕನಿಗೂ ನೋವು ತಂದಿದೆ. ಸಾವಿರಾರು ರೂಪಾಯಿ ನಷ್ಟವಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್