ಬೆಂಗಳೂರು: ಕಾಂಗ್ರೆಸ್ ಸರ್ಕಾರ ಫುಲ್ ಆ್ಯಕ್ಟೀವ್ ಆಗಿದೆ. ಈಗಾಗಲೇ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ರೀತಿಯಲ್ಲಿ ಕಾಪಾಡುವಂತೆ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಇದೀಗ ಅಕ್ರಮದ ಬಗ್ಗೆ ವಿಚಾರಣೆ ನಡೆಸಲು ಹೊರಟಿದ್ದಾರೆ. ಅದರಲ್ಲಿ ಗಂಗಾ ಕಲ್ಯಾಣ ಯೋಜನೆಯ ಅಕ್ರಮ.
ಈ ಸಂಬಂಧ ವಿಧಾನಸೌಧದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶೀಘ್ರವೇ ಈ ಕೇಸು ಸಿಬಿಐಗೂ ವರ್ಗಾವಣೆ ಮಾಡಲಾಗುತ್ತಿದೆ. 2 ರಿಂದ 5 ಎಕರೆ ಜಮೀನಿರುವ ಗಂಗಾ ಕಲ್ಯಟಣ ಯೋಜನೆಯಡಿ ಕೊಳವೆ ಬಾವಿ ನಿರ್ಮಾಣ ಮಾಡುವ ಮೂಲಕ ಅವರಿಗೆ ನೆರವಾಗುವ ಕೆಲಸ ಮಾಡುತ್ತಿತ್ತು.
ಈ ಯೋಜನೆಯನ್ನು ದುರುಪಯೋಗ ಪಡಿಸಿಕೊಂಡು ನಿಯಮಗಳನ್ನು ಗಾಳಿಗೆ ತೂರಿ, ನಕಲಿ ದಾಖಲೆ ನೀಡಿ ಕೋಟ್ಯಾಂತರ ಹಣ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಹಿಂದೆ ಅಂದ್ರೆ 2021ರಲ್ಲಿ ಗಂಗಾ ಕಲ್ಯಾಣ ಯೋಜನೆ ಅಕ್ರಮ ತಡೆಯಲು ಸದನ ಸಮಿತಿ ರಚನೆಯಾಗಿತ್ತು. ಇದರ ಮಧ್ಯಂತರ ವರದಿಯನ್ನು ಡಾ. ವೈ ಎ ನಾರಾಯಣಸ್ವಾಮಿ ಅವರು ಸಲ್ಲಿಸಿದ್ದರು. ಈ ಬೆನ್ನಲ್ಲೇ ಗಂಗಾ ಕಲ್ಯಾಣ ಯೋಜನೆಯ ಅಕ್ರಮದ ತನಿಖೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.