ನನ್ನ ವಿಚಾರದಲ್ಲೂ ಬಿಜೆಪಿಯವರು ಹೀಗೆ ಪ್ರತಿಭಟನೆ ಮಾಡಿದ್ರು : ಪ್ರಿಯಾಂಕ್ ಖರ್ಗೆ ಬೆಂಬಲಿಸಿದ ಕೆ.ಜೆ.ಜಾರ್ಜ್

ಚಿತ್ರದುರ್ಗ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೇಳುತ್ತಿರುವುದರ ಬಗ್ಗೆ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಪ್ರಿಯಾಂಕಾ ಖರ್ಗೆಗೂ ಹಾಗೂ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರನ ಕೇಸ್ ಗೂ ಸಂಬಂಧವಿಲ್ಲ ಎಂದು ತಿರುಗೇಟು ನೀಡಿದ್ದಾರೆ.

 

ಜಿಲ್ಲೆಯ ಹೊಸದುರ್ಗ ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಹಿಟ್ ಅಂಡ್ ರನ್ ಅಂತ ಹೇಳುತ್ತಾರೆ. ಬಿಜೆಪಿ ನಾಯಕರು ಹೇಳುವ ಮಾತಿಗೆ ಮೌಲ್ಯವಿಲ್ಲ. DK ರವಿ ಕೇಸ್ ಹಾಗೂ DYSP ಗಣಪತಿ ಕೇಸ್ ನಲ್ಲಿ ಬಿಜೆಪಿಯವರು ಪ್ರತಿಭಟನೆ ಮಾಡಿದ್ದರು. ಅಸೆಂಬ್ಲಿಯಲ್ಲಿ ಕುಳಿತು, ಮಲಗಿ ಧರಣಿ ಮಾಡಿದ್ದರು. ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ಸಲ್ಲಿಕೆ ಮಾಡಿದ್ದೆ. CID, CBI ಕೂಡಾ ನನ್ನ ಮೇಲೆ ಬಿ.ರಿಪೋರ್ಟ್ ಕೊಟ್ಟರು. ಆದರೆ ಸುಪ್ರೀಂ ಕೋರ್ಟ್ ನಲ್ಲಿ ಕೂಡಾ ನನ್ನ ಪರ ತೀರ್ಪು ಬಂತು. ಇವರು ಯಾರಾದ್ರೂ ಮತ್ತೆ ಆ ವಿಷಯದಲ್ಲಿ ದ್ವನಿ ಎತ್ತಿದ್ರಾ? ಹಾಗಾಗಿ ಪ್ರಿಯಾಂಕಾ ಖರ್ಗೆಗೂ ಆತ್ಮಹತ್ಯೆ ಕೇಸ್ ಗೆ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.

ಇನ್ನು ಸಚಿವ ಸಂಪುಟ ಪುನಾರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ಈ ವಿಚಾರದಲ್ಲಿ ಸಿಎಂ, ಡಿಸಿಎಂ, ಹೈಕಮಾಂಡ್ ತೀರ್ಮಾನ ಮಾಡುತ್ತಾರೆ ಎಂದರು.

ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂಬ ಶೆಟ್ಟರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವರು ರಾಜ್ಯದ ಮುಖ್ಯಮಂತ್ರಿ ಆಗಿದ್ದವರು ಶೆಟ್ಟರ್, ದಾಖಲೆ ಕೊಟ್ಟರೆ ತನಿಖೆ ಮಾಡುತ್ತೇವೆ. ಯಾರು ತಪ್ಪಿತಸ್ಥರು ಇದ್ದಾರೆ ಅವರ ವಿರುದ್ದ ಕ್ರಮ ವಹಿಸುತ್ತೇವೆ ಎಂದು ತಿಳಿಸಿದರು.

ಸಂವಿಧಾನ ಹಿಡಿದು ಓಡಾಡುವುದು ದೇಶದ್ರೋಹದ ಕೆಲಸ ಎಂಬ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ ತಿರುಗೇಟು ನೀಡಿದ ಸಂವಿಧಾನದ ಮೇಲೆ ನಮ್ಮ ದೇಶ ನಡೆಯುತ್ತಿದೆ. ಅದೇ ಸಂವಿಧಾನ ಬೇಡ ಎಂದು ಹೇಳಿದ್ದವರು ಯಾರು ಎಂದು ಪ್ರಶ್ನಿಸಿದರೆ.

Leave a Reply

Your email address will not be published. Required fields are marked *

error: Content is protected !!