ಬೆಂಗಳೂರು: ದಾವಣಗೆರೆ – ಬಾಗಲಕೋಟೆ ಕ್ಷೇತ್ರದಲ್ಲಿ ಏಪ್ರಿಲ್ 9ಕ್ಕೆ ಉಪಚುನಾವಣೆ ನಡೆಯಲಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿಯೇ ಇದ್ದರು. ಇದೀಗ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹೊಸ ವ್ಯಕ್ತಿಗಳಿಗೆ ಅವಕಾಶ ನೀಡಿದೆ. ಬಾಗಲಕೋಟೆಯಲ್ಲಿ ಹೆಚ್ ವೈ ಮೇಟಿ ನಿಧನದ ಬಳಿಕ ಆ ಕ್ಷೇತ್ರ ಖಾಲಿ ಉಳಿದಿತ್ತು.
ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಚರಂತಿಮಠ್ ಅವರನ್ನು ಅಭ್ಯರ್ಥಿಯಾಗಿ ಬಿಜೆಪಿ ಘೋಷಣೆ ಮಾಡಿದೆ. ಚರಂತಿಮಠ್ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಕ್ಷೇತ್ರದಲ್ಲಿ ಲಿಂಗಾಯತ ಮತಗಳ ಪ್ರಾಬಲ್ಯ ಹೆಚ್ಚಾಗಿರುವ ಕಾರಣ ಬಿಜೆಪಿ ನಾಯಕರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಇನ್ನು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಾಬಲ್ಯವೇ ಹೆಚ್ಚಾಗಿತ್ತು. ಶಾಮನೂರು ಶಿವಶಂಕರಪ್ಪ ಅವರ ಕುಟುಂಬದ ಆಡಳಿತವೇ ಇತ್ತು. ಅವರ ನಿಧನದ ಬಳಿಕ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಬೈ ಎಲೆಕ್ಷನ್ ನಡೆಯುತ್ತಿದೆ. ಈ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಶ್ರೀನಿವಾಸ್ ಟಿ.ದಾಸರಿಯಲ್ಲ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಇಲ್ಲಿ ಬಿಜೆಪಿ ವಾಲ್ಮೀಕಿ ಸಮುದಾಯಕ್ಕೆ ಆದ್ಯತೆಯನ್ನು ಕೊಟ್ಟಿದೆ. ಎಸ್ಟಿ ಮತಗಳನ್ನು ಸೆಳೆಯುವ ಉದ್ದೇಶದಿಂದ ಬಿಜೆಪಿ ಈ ತೀರ್ಮಾನವನ್ನ ಮಾಡಿದೆ. ಎರಡು ಕ್ಷೇತ್ರದಲ್ಲೂ ಈ ಬಾರಿ ಗೆಲ್ಲಬೇಕು ಎಂಬ ಹಠ ಬಿಜೆಪಿಯದ್ದಾಗಿದೆ. ಕಾಂಗ್ರೆಸ್ ನಾಯಕರಿಗೂ ಆ ಎರಡು ಕ್ಷೇತ್ರವನ್ನು ಗೆಲ್ಲುವ ಭರವಸೆ ಇದೆ. ಅದರಲ್ಲೂ ದಾವಣಗೆರೆ ಕ್ಷೇತ್ರದಲ್ಲಿ ಟಿಕೆಟ್ ಗೆ ಬೇಡಿಕೆ ಜಾಸ್ತಿಯಾಗಿದೆ. ಬಿಜೆಪಿ ಏನೋ ಅಭ್ಯರ್ಥಿಗಳನ್ನ ಅನೌನ್ಸ್ ಮಾಡಿ ಆಗಿದೆ. ಈಗ ಎಲ್ಲರ ಚಿತ್ರ ಕಾಂಗ್ರೆಸ್ ನತ್ತಿ ನೆಟ್ಟಿದೆ. ಆ ಕಡೆಯಿಂದ ಯಾರನ್ನ ಅಭ್ಯರ್ಥಿಯನ್ನಾಗಿ ನಿಲ್ಲಿಸಬಹುದು ಎಂಬ ಕುತೂಹಲವಿದೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






