Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್‌ಟಿ ಮೀಸಲಾತಿ ಕಡಿತ ಆರೋಪ; ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಜ್ಯವ್ಯಾಪಿ ಹೋರಾಟ ಘೋಷಣೆ

---Advertisement---

ಬೆಂಗಳೂರು: ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿಯನ್ನು ಶೇ.7ರಿಂದ ಶೇ.3ಕ್ಕೆ ಇಳಿಸಿ ಕಾಂಗ್ರೆಸ್ ಸರ್ಕಾರ ದಲಿತ ಮತ್ತು ಹಿಂದುಳಿದ ಸಮುದಾಯಗಳಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿರುವ ಬಿಜೆಪಿ, ಇದರ ವಿರುದ್ಧ ರಾಜ್ಯವ್ಯಾಪಿ ಹೋರಾಟ ನಡೆಸುವುದಾಗಿ ಘೋಷಿಸಿದೆ.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ , ಬಿಜೆಪಿ ಸರ್ಕಾರದ ಅವಧಿಯಲ್ಲಿ ಜನಸಂಖ್ಯೆ ಆಧಾರದ ಮೇಲೆ ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯನ್ನು ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡ (ಎಸ್‌ಟಿ) ಮೀಸಲಾತಿಯನ್ನು ಶೇ.7ಕ್ಕೆ ಹೆಚ್ಚಿಸಲಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಒಳಮೀಸಲಾತಿ ಹೆಸರಿನಲ್ಲಿ ಹೊಸ ಆದೇಶ ಹೊರಡಿಸಿ ಎಸ್‌ಟಿ ಸಮುದಾಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.

“ಮಾದಿಗ, ಅಲೆಮಾರಿ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರೊಂದಿಗೆ ಚರ್ಚೆ ನಡೆಸಿ ರಾಜ್ಯಾದ್ಯಂತ ಹೋರಾಟ ರೂಪಿಸಲಾಗುವುದು. ಸರ್ಕಾರ ಕೂಡಲೇ ಈ ಆದೇಶವನ್ನು ಹಿಂಪಡೆದು ಹಿಂದಿನ ಮೀಸಲಾತಿ ವ್ಯವಸ್ಥೆಯನ್ನು ಮುಂದುವರಿಸಬೇಕು” ಎಂದು ಅವರು ಒತ್ತಾಯಿಸಿದರು.
ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದ ಅವರು, “ದಲಿತ ಸಮುದಾಯದ ಮೂಗಿಗೆ ತುಪ್ಪ ಸವರಿಸುವ ಕೆಲಸ ಮಾಡಲಾಗಿದೆ. ಹೆಚ್ಚುವರಿ ಮೀಸಲಾತಿ ವಿಚಾರದಲ್ಲಿ ಸರ್ಕಾರ ಸಮರ್ಪಕವಾಗಿ ವಾದ ಮಂಡಿಸದ ಕಾರಣ ಹಿನ್ನಡೆಯಾಗಿದೆ” ಎಂದು ಟೀಕಿಸಿದರು.

ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಮಾತನಾಡಿ, “ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಕಾಂಗ್ರೆಸ್ ಸರ್ಕಾರವೇ ಈಗ ಮೀಸಲಾತಿ ವಿಚಾರದಲ್ಲಿ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದೆ” ಎಂದು ವಾಗ್ದಾಳಿ ನಡೆಸಿದರು.ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ರಾಜುಗೌಡ ನಾಯಕ, ಎನ್. ರವಿಕುಮಾರ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.ಇನ್ನೊಂದೆಡೆ, ಸರ್ಕಾರದ ಈ ಕ್ರಮಕ್ಕೆ ವಿವಿಧ ದಲಿತ ಹಾಗೂ ಹಿಂದುಳಿದ ಸಂಘಟನೆಗಳಿಂದಲೂ ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ರಾಜ್ಯ ರಾಜಕೀಯದಲ್ಲಿ ಮೀಸಲಾತಿ ವಿಚಾರ ಮತ್ತೆ ಚರ್ಚೆಯ ಕೇಂದ್ರಬಿಂದುವಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now