ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 01 : ಇದೆ ತಿಂಗಳು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಎಸ್ಸಿ. ಮೀಸಲು ಕ್ಷೇತ್ರದಿಂದ ಬಿಜೆಪಿ. ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಗೋವಿಂದ ಕಾರಜೋಳರವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಮಾಜಿ ಶಾಸಕ ತಿಪ್ಪೇಸ್ವಾಮಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ಬಿಜೆಪಿ ಜಿಲ್ಲಾಧ್ಯಕ್ಷ ಎ. ಮುರಳಿ, ಸಿದ್ದಾಪುರ ಸುರೇಶ್, ಜಿಲ್ಲಾ ಜೆಡಿಎಸ್. ಅಧ್ಯಕ್ಷ ಜಯಣ್ಣ, ಮಾಜಿ ಅಧ್ಯಕ್ಷ ಡಿ.ಯಶೋಧರ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಜಿಲ್ಲಾ ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಈ ಸಂದರ್ಭದಲ್ಲಿ ಹಾಜರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











