ದಲಿತರ ವಿಚಾರಕ್ಕೆ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಬಿಜೆಪಿ : ಕ್ಲಾಸ್ ತೆಗೆದುಕೊಂಡ ನೆಟ್ಟಿಗರು..!

2 Min Read

 

ಬೆಂಗಳೂರು: @siddaramaiah ಅವರ ದಲಿತಪರ ಪ್ರೀತಿ ಯಾವತ್ತಿಗೂ ತೋರ್ಪಡಿಕೆಗೆ ಅಷ್ಟೇ. ಸಿದ್ದರಾಮಯ್ಯ ಅವರ ತೋರ್ಪಡಿಕೆಯ “ಅಹಿಂದ” ಹೋರಾಟದ ನಾಟಕದಲ್ಲಿ ಈಗ ದಲಿತರು ಇಲ್ಲ, ಹಿಂದುಳಿದವರೂ ಇಲ್ಲ. ಅವರ ವಕಾಲತ್ತೇನಿದ್ದರೂ ಒಂದು ಸಮುದಾಯದ ಪರ ಮಾತ್ರ. ಹಿಂದುಳಿದ ಹಾಗೂ ದಲಿತ ವರ್ಗಕ್ಕೆ ಸಿದ್ದರಾಮಯ್ಯ ಅವರಿಂದ ಯಾವತ್ತಿಗೂ ಸಿಗುವುದು ಕುತಂತ್ರದ ಒಳ ಏಟು ಮಾತ್ರ ಎಂದು ಬಿಜೆಪಿ ಸರಣಿ ಟ್ವೀಟ್ ಮಾಡಿದೆ.

@siddaramaiah ರವರು ಐದು ವರ್ಷ ಅಧಿಕಾರದಲ್ಲಿದ್ದಾಗಲೇ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಬಂದಿದೆ. ಆಗ ವರದಿ ಜಾರಿ ಮಾಡುವ ಬಗ್ಗೆ ಆಲೋಚಿಸದ ಪ್ರತಿಪಕ್ಷದ ನಾಯಕರು, ಮುಂದಿನ ಬಾರಿ ಅಧಿಕಾರಕ್ಕೆ ಬಂದರೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೊಳಿಸುವ ಮಾತನಾಡುತ್ತಿರುವುದು ಹಾಸ್ಯಾಸ್ಪದ.

ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗಲೇ ಮಾದಿಗ ಸಮುದಾಯ ದೊಡ್ಡ ಸಮಾವೇಶವನ್ನು ಮಾಡಿ, ಆ ಸಂದರ್ಭದಲ್ಲಿ @siddaramaiah ಅವರು ನ್ಯಾ. ಸದಾಶಿವ ಆಯೋಗದ ವರದಿ ಜಾರಿ ಮಾಡುವ ಘೋಷಣೆ ಮಾಡುತ್ತಾರೆಂಬ ದಲಿತರ ನಿರೀಕ್ಷೆಯನ್ನು ಹುಸಿ ಮಾಡಿ, ದಲಿತರ ಹೆಸರಲ್ಲಿ ಅಧಿಕಾರ ಅನುಭವಿಸಿದ್ದು ಮರೆತು ಹೋಯಿತಾ? ಈಗ @siddaramaiah ನವರು ಮತ್ತೆ ದಲಿತರಿಗೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿ ಮಾಡುವ ಸುಳ್ಳು ಭರವಸೆ ನೀಡುತ್ತಿದ್ದು, ದಲಿತರ ಮೂಗಿಗೆ ತುಪ್ಪ ಸವರುವ ನಿಮ್ಮ ಸುಳ್ಳು ಭರವಸೆಯನ್ನು ಯಾವ ದಲಿತರು ನಂಬುವ ಸ್ಥಿತಿಯಲ್ಲಿಲ್ಲ.

ಅಧಿಕಾರ ಇದ್ದಾಗ ಸಿದ್ದರಾಮಯ್ಯ ದಲಿತರ ಯಾವ ಬೇಡಿಕೆನೂ ಈಡೇರಿಸಿಲ್ಲ ಹಾಗೇ ಅವರಿಂದ ತುಳಿತಕ್ಕೆ ಒಳಗಾದ ದಲಿತ ನಾಯಕರ ಪಟ್ಟಿಗೂ ಕೊನೆಯಿಲ್ಲ.
√ ಮಲ್ಲಿಕಾರ್ಜುನ ಖರ್ಗೆ
√ ಡಾ.ಜಿ.ಪರಮೇಶ್ವರ್
√ ಮೋಟಮ್ಮ
√ ಶ್ರೀನಿವಾಸ್ ಪ್ರಸಾದ್
@siddaramaiah ಅವರ ದಲಿತಪರ ಪ್ರೀತಿ ಯಾವತ್ತಿಗೂ ತೋರ್ಪಡಿಕೆಗೆ ಅಷ್ಟೇ. ಸಿದ್ದರಾಮಯ್ಯ ಅವರ ತೋರ್ಪಡಿಕೆಯ “ಅಹಿಂದ” ಹೋರಾಟದ ನಾಟಕದಲ್ಲಿ ಈಗ ದಲಿತರು ಇಲ್ಲ, ಹಿಂದುಳಿದವರೂ ಇಲ್ಲ. ಅವರ ವಕಾಲತ್ತೇನಿದ್ದರೂ ಒಂದು ಸಮುದಾಯದ ಪರ ಮಾತ್ರ. ಹಿಂದುಳಿದ ಹಾಗೂ ದಲಿತ ವರ್ಗಕ್ಕೆ ಸಿದ್ದರಾಮಯ್ಯ ಅವರಿಂದ ಯಾವತ್ತಿಗೂ ಸಿಗುವುದು ಕುತಂತ್ರದ ಒಳ ಏಟು ಮಾತ್ರ ಎಂದ ಬಿಜೆಪಿಗೆ ನೆಟ್ಟಿಗರು ಕ್ಲಾಸ್ ತೆಗೆದುಕೊಂಡಿದ್ದಾರೆ. ಈಗ ಅಧಿಕಾರದಲ್ಲಿ ಇರುವುದು ಯಾರು ಎಂದು ಪ್ರಶ್ನಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *