Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಪಕ್ಷ ನಾಯಕನ ವಿಚಾರದಲ್ಲಿ ಐತಿಹಾಸಿಕ ದಾಖಲೆ ಸೃಷ್ಟಿಸಿದ ಬಿಜೆಪಿ..!

Facebook
Twitter
Telegram
WhatsApp

 

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ತಿಂಗಳ ಮೇಲಾಗಿದೆ. ಆದ್ರೆ ಬಿಜೆಪಿ ಮಾತ್ರ ಇನ್ನು ಪ್ರತಿಪಕ್ಷ ನಾಯಕನನ್ನು ಆಯ್ಕೆ‌ ಮಾಡಿಲ್ಲ. ಇಷ್ಟು ದಿನವಾದರೂ ಪ್ರತಿಪಕ್ಷ ನಾಯಕನ ಆಯ್ಕೆ ಮಾಡದ ಏಕೈಕ ಪಕ್ಷ ಬಿಜೆಪಿಯಾಗಿದೆ. ಅಷ್ಟೇ ಅಲ್ಲ ಇಷ್ಟು ದಿನದವರೆಗೂ ನಾಯಕನಿಲ್ಲದೆ ಇರುವುದು ಐತಿಹಾಸಿಕ ದಾಖಲೆಯಾಗಿದೆ. ಹೀಗೆ ಪ್ರತಿಪಕ್ಷ ನಾಯಕನ ಆಯ್ಕೆ ಮಾಡದೆ ಇರುವುದರಿಂದ ಸಿಗುವ ವಿಶೇಷ ಸವಲತ್ತುಗಳನ್ನು ಕಳೆದುಕೊಳ್ಳುವಂತೆ ಆಗಿದೆ. ಎರಡು ಸದನದಲ್ಲಿ ನಾಯಕನನ್ನು ನೇಮಿಸದೆ ಹೋದಲ್ಲಿ ಸವಲತ್ತುಗಳನ್ನು ಕಳೆದುಕೊಳ್ಳಲಿದೆಯಂತೆ.

ಬಿಜೆಪಿಯಲ್ಲಿ ಸದ್ಯಕ್ಕೆ ಯಡಿಯೂರಪ್ಪ ಹಾಗೂ ಬಿಎಲ್ ಸಂತೋಷ್ ಬಣವಿದೆ. ಈ ಬಣಗಳ ವಿಚಾರಕ್ಕೇನೆ ಇನ್ನು ವಿಪಕ್ಷನ ನಾಯಕನ ಆಯ್ಕೆ ಕಗ್ಗಂಟಾಗಿದೆ ಎಂದೇ ಹೇಳಲಾಗುತ್ತಿದೆ. ಇನ್ನು ವಿರೋಧ ಪಕ್ಷದ ನಾಯಕನ ಆಯ್ಕೆ ನಿರ್ಧಾರ ಕೇಂದ್ರ ಸರ್ಕಾರದ ಮೇಲೆ ಬಿಟ್ಟಿದೆ. ಕೇಂದ್ರ ಸರ್ಕಾರ ಇನ್ನು ಆಯ್ಕೆ ಮಾಡದೆ ಇರುವುದೇ ಆಶ್ಚರ್ಯಕ್ಕೆ ಕಾರಣವಾಗಿದೆ.

 

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರು ಗುಂಪಿನಲ್ಲಿ ಗುರುತಿಸಿಕೊಂಡಿರುವ ಬಸನಗೌಡ ಪಾಟೀಲ್ ಯತ್ನಾಳ್‌ ವಿರೋಧ ಪಕ್ಷದ ನಾಯಕರಾಗಿ, ಸಿಟಿ ರವಿ ರಾಜ್ಯಾಧ್ಯಕ್ಷರಾಗಿ ನೇಮಕವಾಗುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಇದಕ್ಕೆ ಬಿಜೆಪಿ ಹೈಕಮಾಂಡ್‌ ಒಪ್ಪಿಗೆ ಸೂಚಿಸಿಲ್ಲ. ಪ್ರಮುಖ ವಿರೋಧ ಪಕ್ಷವು ಎರಡೂ ಸದನಗಳಲ್ಲಿ ವಿರೋಧ ಪಕ್ಷದ ನಾಯಕನನ್ನು ನೇಮಿಸದಿರುವುದು ಅತ್ಯಂತ ದುರದೃಷ್ಟಕರ ಎಂದು ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಮತ್ತು ಮುಖ್ಯ ಸಚೇತಕ ಎಂಎಲ್‌ಸಿ ಸಲೀಂ ಅಹ್ಮದ್ ಅಭಿಪ್ರಾಯ ಪಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

DCP ಆಗಿ ಅಧಿಕಾರ ವಹಿಸಿಕೊಂಡ RCB ಸ್ಟಾರ್ ಕ್ರಿಕೆಟರ್ : ಸಿರಾಜ್ ಸಂಬಳ ಎಷ್ಟು ಗೊತ್ತಾ..?

ಟೀಂ ಇಂಡಿಯಾದ ಸ್ಟಾರ್ ವೇಗಿ ಎಂದೇ ಗುರುತಿಸಿಕೊಂಡಿದ್ದ ಮೊಹಮ್ಮದ್ ಸಿರಾಜ್ ಇದೀಗ ಸರ್ಕಾರಿ ಅಧಿಕಾರಿಯಾಗಿದ್ದಾರೆ. ಡಿಸಿಪಿಯಾಗಿ ಅಧಿಕಾರ ವಹಿಸಿಕೊಂಡ ಸಿರಾಜ್ ಗೆ ಅಭಿಮಾನಿಗಳು ಕೂಡ ವಿಶ್ ಮಾಡಿದ್ದಾರೆ. ಸದ್ಯ ಮೊಹಮ್ಮದ್ ಸಿರಾಜ್ ತೆಲಂಗಾಣದ ಡೆಪ್ಯೂಟಿ

ದರ್ಶನ್ ಹೊರ ಬರುವ ಸುಳಿವು ಕೊಟ್ರಾ ವಿಜಯಲಕ್ಷ್ಮೀ: ಅಭಿಮಾನಿಗಳಿಗೆ ಹೇಳಿದ್ದೇನು..?

  ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯವಾಗಿದೆ. ಫ್ಯಾಮಿಲಿ, ಫ್ರೆಂಡ್ಸ್, ಫ್ಯಾನ್ಸ್ ತುದಿಗಾಲಿನಲ್ಲಿ ನಿಂತು ನಮ್ಮ ಡಿ ಬಾಸ್ ಯಾವಾಗ ಬರ್ತಾರೆ ಅಂತ ಕಾಯ್ತಿದ್ದಾರೆ. ದಸರಾಗಾದರೂ

ಗುರುಗಳು ಮತ್ತು ಭಕ್ತರು ಸೌಹಾರ್ದತೆಯಿಂದ ಹೆಜ್ಜೆ ಹಾಕಿದರೆ ಮಾತ್ರ ಮೀಸಲಾತಿಯನ್ನು ಪಡೆಯಲು ಸಾಧ್ಯ : ಶಾಂತವೀರ ಮಹಾಸ್ವಾಮೀಜಿ

ಸುದ್ದಿಒನ್, ತುಮಕೂರು, ಅಕ್ಟೋಬರ್. 11 : ಕುಂಚಿಟಿಗ ಸಮಾಜದ ಅಭಿವೃದ್ಧಿಗೆ ಸಂಘಟನೆಗೆ ಗುರುಗಳು ಮತ್ತು ಭಕ್ತರು ಪರಸ್ಪರ ಸೌಹಾರ್ದತೆಯಿಂದ ಹೆಜ್ಜೆ ಹಾಕಿದರೆ ಮಾತ್ರ ಕುಂಚಿಟಿಗ ಸಮಾಜ ಸಂಘಟನೆಯಾಗಿ ಸಾಮಾಜಿಕ ನ್ಯಾಯ ಮೀಸಲಾತಿಯನ್ನು ಪಡೆಯಲು ಸಾಧ್ಯ

error: Content is protected !!