ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್,ಚಿತ್ರದುರ್ಗ : ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಎಲ್ಲರ ಮನಸ್ಸುಗಳು ಒಡೆದು ಹೋಗಿದೆ. ಅದಕ್ಕಾಗಿ ಎಲ್ಲಾ ಜಾತಿ ಧರ್ಮದವರನ್ನು ಜೊತೆಗೆ ಕರೆದುಕೊಂಡು ಹೋಗುವ ಉದ್ದೇಶದಿಂದ ರಾಹುಲ್‍ಗಾಂಧಿ ಭಾರತ್ ಜೋಡೋಯಾತ್ರೆ ಆರಂಭಿಸಿದರು ಎಂದು ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಹೇಳಿದರು.
ಜಿಲ್ಲಾ ಕಾಂಗ್ರೆಸ್ ವತಿಯಿಂದ ಭಾನುವಾರ ನಗರದಲ್ಲಿ ನಡೆದ ಭಾರತ್ ಜೋಡೋ ಪಾದಯಾತ್ರೆಯ ಪ್ರಥಮ ವಾರ್ಷಿಕೋತ್ಸವ ಮೆರವಣಿಗೆಯನ್ನುದ್ದೇಶಿಸಿ ಮಾತನಾಡಿದರು.
ಸುದ್ದಿಒನ್, ಚಿತ್ರದುರ್ಗ : ಜಿಲ್ಲಾ ಕಾಂಗ್ರೆಸ್ ನಿಂದ ಭಾರತ್ ಜೋಡೋ ಪಾದಯಾತ್ರೆ #ಕಾಂಗ್ರೆಸ್ #congress#chitradurga #ಚಿತ್ರದುರ್ಗ #ಹೊಳಲ್ಕೆರೆ #ಹೊಸದುರ್ಗ #ಹಿರಿಯೂರು #ಚಳ್ಳಕೆರೆ #ಮೊಳಕಾಲ್ಮೂರು #Holalkere #hosadurga #hiriyuru #challakere #molakalmuru #ಕಾಂಗ್ರೆಸ್ #congress#BharatJodoYatraContinues pic.twitter.com/QoypBVxTS7
— suddione-kannada News (@suddione) September 10, 2023
ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ನಾಲ್ಕು ಸಾವಿರ ಕಿ.ಮೀ.ನಡೆದು ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದ ಫಲವಾಗಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಗೆದ್ದುಕೊಂಡಿತು. ಪ್ರಧಾನಿ ಮೋದಿ ಕಾಲಿಟ್ಟ ಕಡೆಯಲ್ಲೆಲ್ಲಾ ಬಿಜೆಪಿ.ಸೋತಿದೆ. ರಾಹುಲ್ ಪಾದಸ್ಪರ್ಶ ಮಾಡಿದ ಜಾಗದಲ್ಲೆಲ್ಲಾ ಕಾಂಗ್ರೆಸ್ ಗೆದ್ದಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಸುದ್ದಿಒನ್, ಚಿತ್ರದುರ್ಗ : ಜಿಲ್ಲಾ ಕಾಂಗ್ರೆಸ್ ನಿಂದ
ಭಾರತ್ ಜೋಡೋ ಪಾದಯಾತ್ರೆ #ಕಾಂಗ್ರೆಸ್ #congress#chitradurga #ಚಿತ್ರದುರ್ಗ #ಹೊಳಲ್ಕೆರೆ #ಹೊಸದುರ್ಗ #ಹಿರಿಯೂರು #ಚಳ್ಳಕೆರೆ #ಮೊಳಕಾಲ್ಮೂರು #Holalkere #hosadurga #hiriyuru #challakere #molakalmuru #ಕಾಂಗ್ರೆಸ್ #congress#BharatJodoYatra pic.twitter.com/ndwTAPXMuZ— suddione-kannada News (@suddione) September 10, 2023
ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದೆ ತಡ ಐದು ಗ್ಯಾರೆಂಟಿಗಳಲ್ಲಿ ನಾಲ್ಕನ್ನು ಜಾರಿಗೊಳಿಸಿದ್ದಾರೆ. ಒಂದು ಕೋಟಿ ಇಪ್ಪತ್ತು ಲಕ್ಷ ಮಹಿಳೆಯರಿಗೆ ಪ್ರತಿ ತಿಂಗಳು ಎರಡು ಸಾವಿರ ರೂ. ಬ್ಯಾಂಕ್ ಖಾತೆಗೆ ಜಮ ಆಗುತ್ತಿದೆ. ಉಚಿತ ಅಕ್ಕಿ, ಮಹಿಳೆಯರಿಗೆ ಸರ್ಕಾರಿ ಬಸ್‍ಗಳಲ್ಲಿ ಉಚಿತ ಪ್ರಯಾಣ.
ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇವರುಗಳು ಬಡವರ ಜೇಬು ತುಂಬಿಸುವ ಕೆಲಸ ಮಾಡುತ್ತಿದ್ದಾರೆ. ದೇಶದ ಪ್ರಧಾನಿ ಮೋದಿ ಅದಾನಿ, ಅಂಬಾನಿ ಇವರ ಜೇಜುಗಳನ್ನು ತುಂಬಿಸುವಲ್ಲಿ ಕಾಳಜಿ ವಹಿಸಿದ್ದಾರೆ. ಮನಮೋಹನ್‍ಸಿಂಗ್ ದೇಶದ ಪ್ರಧಾನಿಯಾಗಿದ್ದಾಗ ಎಪ್ಪತ್ತು ಸಾವಿರ ಕೋಟಿ ರೂ. ರೈತರ ಸಾಲ ಮನ್ನ ಮಾಡಿದ್ದರು ಎಂದು ಕಾಂಗ್ರೆಸ್ ಮತ್ತು ಬಿಜೆಪಿ.ಗಿರುವ ವ್ಯತ್ಯಾಸವನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್.ಮೈಲಾರಪ್ಪ, ಸಂಪತ್‍ಕುಮಾರ್, ಉಪಾಧ್ಯಕ್ಷರುಗಳಾದ ಜಿ.ಎಸ್.ಕುಮಾರ್‍ಗೌಡ, ಡಿ.ಟಿ.ವೆಂಕಟೇಶ್, ನಜ್ಮತಾಜ್, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್, ಕೆ.ಪಿ.ಸಿ.ಸಿ. ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ಮೆಹಬೂಬ್ ಖಾತೂನ್, ಸೇವಾದಳದ ಇಂದಿರಾ, ನಗರಸಭೆ ಮಾಜಿ ಉಪಾಧ್ಯಕ್ಷ ಎಂ.ಹನೀಫ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಿಕಾಂತ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಅಬ್ದುಲ್ಲಾ, ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಭಾರತ್ ಜೋಡೋ ಯಾತ್ರೆ ಪ್ರಥಮ ವಾರ್ಷಿಕೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಹೊಳಲ್ಕೆರೆ ರಸ್ತೆಯಲ್ಲಿರುವ ಕನಕ ವೃತ್ತದಿಂದ ಆರಂಭಗೊಂಡ ಮೆರವಣಿಗೆ ಸಂಗೊಳ್ಳಿರಾಯಣ್ಣ ವೃತ್ತ, ಗಾಂಧಿ ವೃತ್ತ, ಎಸ್.ಬಿ.ಎಂ.ಸರ್ಕಲ್, ಅಂಬೇಡ್ಕರ್ ಪ್ರತಿಮೆ ಮುಂಭಾಗದಿಂದ ಮದಕರಿ ವೃತ್ತ, ಒನಕೆ ಓಬವ್ವ ವೃತ್ತದ ಮೂಲಕ ಕಾಂಗ್ರೆಸ್ ಕಚೇರಿಗೆ ತಲುಪಿತು.