Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೇವೇಗೌಡರ ವಿಚಾರದಲ್ಲಿ ಬಿಜೆಪಿ ಅಸಲಿ ಕಥೆಯನ್ನೇ ಮುಚ್ಚಿಡುತ್ತಿದೆ : ಜೆಡಿಎಸ್

Facebook
Twitter
Telegram
WhatsApp

ಬೆಂಗಳೂರು: ಕೆಂಪೇಗೌಡ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡ ಅವರನ್ನು ಆಹ್ವಾನಿಸಿಲ್ಲ ಎಂದು ಜೆಡಿಎಸ್ ಟ್ವೀಟ್ ಮಾಡುವ ಮೂಲಕ ನಿನ್ನೆ ಆಕ್ರೋಶ ಹೊರ ಹಾಕಿತ್ತು. ಇದಾದ ಬೆನ್ನಲ್ಲೆ ಆಹ್ವಾನಿಸಿರುವುದಾಗಿ ಬಿಜೆಪಿ ಕೂಡ ಸಮರ್ಥನೆ ನೀಡಿತ್ತು. ಇದೀಗ ಅದೇ ವಿಚಾರಕ್ಕೆ ಜೆಡಿಎಸ್ ಮತ್ತೆ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರ ಹಾಕಿದೆ.

ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲ! ಆದರೆ; ಮುಖ್ಯಮಂತ್ರಿಗಳೇ ಪತ್ರ ಬರೆದು ಶ್ರೀ @H_D_Devegowda ಅವರನ್ನು ಆಹ್ವಾನಿಸಿದ್ದಾರೆಂದು ಜನರ ದಿಕ್ಕು ತಪ್ಪಿಸುತ್ತಿರುವ ರಾಜ್ಯ @BJP4Karnataka ಸರಕಾರ, ಅಸಲಿ ಕಥೆಯನ್ನೇ ಮುಚ್ಚಿಡುತ್ತಿದೆ.

ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿಗಳಿಗೆ ಕರೆ ಮಾಡಿ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಿ ಪತ್ರ ಬರೆದಿದ್ದಾರೆ ಎಂದು ಬಿಜೆಪಿ ಟ್ವೀಟಿಸಿದೆ. ಸರಿ; ನವೆಂಬರ್ 11ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು, ಪತ್ರ ಬರೆದಿದ್ದು ಯಾವಾಗ? ಆ ಪತ್ರವನ್ನು ಮಾಜಿ ಪ್ರಧಾನಿಗಳ ನಿವಾಸಕ್ಕೆ ತಲುಪಿಸಿದ್ದು ಯಾವಾಗ?

ಕಮಲದವರ ಕಣ್ಣಿಗೆ ಕಾಮಾಲೆ ಬಡಿದಿದೆಯಾ, ಹೇಗೆ? ಘನವೆತ್ತ ಮಾನ್ಯ ಮುಖ್ಯಮಂತ್ರಿಗಳು ಬರೆದ ʼಘನವೆತ್ತʼ ಪತ್ರವನ್ನೊಮ್ಮೆ ʼಸಂಘಸಂಸ್ಕಾರʼದ ಬಿಜೆಪಿಗರು ಗಮನಿಸಬೇಕು. ಪತ್ರದಲ್ಲಿ ಮಾಜಿ ಪ್ರಧಾನಿಗಳ ಹೆಸರೆಲ್ಲಿ ಬರೆಯಲ್ಪಟ್ಟಿದೆ? (ಕೊನೆಯಲ್ಲಿ) ಕನ್ನಡ ನೆಲದ ಏಕೈಕ ಪ್ರಧಾನಿಯಾಗಿದ್ದ ಮೇರು ನಾಯಕರಿಗೆ ಪತ್ರ ಬರೆಯುವ ಸಂಸ್ಕಾರ, ಶಿಷ್ಟಾಚಾರ ಇದೇನಾ?

ಮರುದಿನ 12.50ರ ಸಮಾರಂಭಕ್ಕೆ ರಾತ್ರಿ 9 ಗಂಟೆಗೆ ಮಾಜಿ ಪ್ರಧಾನಿಗಳಿಗೆ ಕಾಟಾಚಾರದ ಕರೆ ಮಾಡಿದ ಮುಖ್ಯಮಂತ್ರಿಗಳು, ತಾವು ಬರೆದ ಪತ್ರವನ್ನು ತಲುಪಿಸಿದ್ದು ಮಧ್ಯರಾತ್ರಿ 12.30 ಗಂಟೆಗೆ!! ಹಾಗಾದರೆ, ಅವರ ಮೊದಲ ಪತ್ರ ಹೋಗಿದ್ದು ಯಾರಿಗೆ? ಇಂಥ ಹಿರಿಯರ ವಿಷಯದಲ್ಲಿ ಜಬಾಬ್ದಾರಿ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ವರ್ತಿಸುವ ರೀತಿ ಹೀಗೇನಾ?

ಇದರಲ್ಲಿ ಸುಳ್ಳಾಡುವುದೇನಿದೆ? ಮುಖ್ಯಮಂತ್ರಿಗಳು ಬರೆದ ಪತ್ರವನ್ನು ಇಲ್ಲಿ ಲಗತ್ತಿಸಲಾಗಿದೆ. ಹಾಗಾದರೆ, ಮುಖ್ಯಮಂತ್ರಿಗಳೇ ಎಲ್ಲವನ್ನೂ ಹೇಳಲಿ. ಜನರಿಗೂ ಸತ್ಯ ಯಾವುದು? ಸುಳ್ಳು ಯಾವುದು? ಎನ್ನುವುದು ತಿಳಿಯಲಿ. ಸತ್ಯ ಹೇಳುವ ದಮ್ಮು, ತಾಖತ್ತು ಮುಖ್ಯಮಂತ್ರಿಗಳಿಗೆ ಇದೆ ಎಂದು ನಾವು ಭಾವಿಸುತ್ತೇವೆ.

ಇನ್ನು ಕನ್ನಡದ ಆಸ್ಮಿತೆ ಪ್ರಶ್ನೆ. ಬಿಜೆಪಿಗೆ ನಾಚಿಕೆಯಾಗಬೇಕು, ಹಿಂದಿ ಹೇರಿಕೆ ವಾಕರಿಕೆ ಬರುವಷ್ಟಿದೆ. ಉದ್ಯೋಗದಲ್ಲಿ ಕನ್ನಡಿಗರಿಗೆ ಪಂಗನಾಮ, ಈ ನೆಲದ ಸಂಸ್ಕೃತಿ, ಭಾಷೆ, ಆಚಾರ-ವಿಚಾರಗಳನ್ನು ಹತ್ತಿಕ್ಕಿ,ಇಡೀ ದಕ್ಷಿಣ ಭಾರತೀಯರನ್ನು ದೆಹಲಿ ಗುಲಾಮರನ್ನಾಗಿ ಮಾಡಲು ಹೊರಟಿರುವ ಬಿಜೆಪಿಗರಾ ಕನ್ನಡದ ಮಣ್ಣಿನ ಮಕ್ಕಳನ್ನು ಗುರುತಿಸಿದ್ದು?

‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’; ಇದು ಭಾರತ ಕಂಡ ಪರಮ ಢೋಂಗೀ ಘೋಷಣೆ. ಇದಕ್ಕೆ ʼಸಬ್ ಕಾ ಸರ್ವನಾಶ್ʼ ಎಂದು ಸೇರಿದರೆ ಪರಿಪೂರ್ಣ. ಕರ್ನಾಟಕದಲ್ಲಿ ಶಿಕ್ಷಣ, ಧರ್ಮ, ಜಾತಿ, ಆಚಾರ, ವಿಚಾರ, ಆಹಾರ, ಉಡುಪುಗಳ ವಿಷಯದಲ್ಲೂ ಬಿಜೆಪಿ ಮಾಡಿದ್ದು ಸಾಕ್ಷಾತ್ ಸರ್ವನಾಶವೇ.

ಕುಟುಂಬ ರಾಜಕಾರಣ ಅಂತೀರಾ? ಗುಜರಾತಿನಿಂದ ಶುರುವಾಗಿ ದೆಹಲಿವರೆಗೂ ಹಬ್ಬಿ, ಬಿಸಿಸಿಐ ಒಳಹೊಕ್ಕಿ ಕೂತಿದ್ದು ಯಾರ ಕುಟುಂಬ?. ಕರ್ನಾಟಕದಲ್ಲಿ ಬೆಳೆದು ನಿಂತ ಬಿಜೆಪಿ ವಂಶವೃಕ್ಷಗಳೆಷ್ಟು? ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಗುಜರಾತ್ ನಿಂದ ಒಡಿಶಾವರೆಗೆ ವ್ಯಾಪಿಸಿರುವ ಬಿಜೆಪಿ ವಂಶವೃಕ್ಷಗಳ ಕೊಂಬೆಗಳ ಲೆಕ್ಕ ಬಿಚ್ಚಿಡಬೇಕೆ? ಎಂದು ಆಕ್ರೋಶ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!