ಬಿಜೆಪಿ-ಜೆಡಿಎಸ್ ಮೈತ್ರಿಗೆ ಆರಂಭದಲ್ಲಿಯೇ ವಿಘ್ನ : ಅಂಥದ್ದೇನಾಯ್ತು ಗೊತ್ತಾ..?

suddionenews
1 Min Read

ಮೈಸೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲು ಸಜ್ಜಾಗುತ್ತಿವೆ. ಆದರೆ ಈ ಮೈತ್ರಿ ಎರಡು ಪಕ್ಷದಲ್ಲೂ ಸಾಕಷ್ಟು ಜನರಿಗೆ ಇಷ್ಟವಿಲ್ಲ. ಇದೀಗ ಇನ್ನು ಅಧಿಕೃತವಾಗಿ ಮೀಟಿಂಗ್ ಆಗುವುದಕ್ಕೂ ಮುನ್ನವೇ ಆರಂಭಿಕ ವಿಘ್ನ ಎದುರಾದಂತೆ ಕಾಣುತ್ತಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಪ್ರತ್ಯೇಕ ಸ್ಪರ್ಧೆಗೆ ಮುಂದಾಗಿದ್ದಾರೆ.

 

ಈ ಸಂಬಂಧ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ಲೋಕಸಭಾ ಚುನಾವಣೆಗೆ ಮಾತ್ರ ಮೈತ್ರಿ ಮಾಡಿಕೊಳ್ಳಲಾಗಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ ಗೆ ಬೆಂಬಲ ನೀಡುವುದಿಲ್ಲ. ಬಿಜೆಪಿಯಲ್ಲಿ 12 ಮಂದಿ ಆಕಾಂಕ್ಷಿಗಳಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಒಮ್ಮೆಯೂ ಗೆದ್ದಿಲ್ಲ. ಹೀಗಾಗಿ ಬಿಜೆಪಿಯ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸಲಿದ್ದೇವೆ ಎಂದಿದ್ದಾರೆ.

 

ಈ ಕ್ಷೇತ್ರದಲ್ಲಿ ಯಾರೇ ಅಭ್ಯರ್ಥಿಯಾದರೂ ಅವರ ಗೆಲುವಿಗಾಗಿ ಶ್ರಮಿಸುವಂತೆ ಸೂಚನೆ ನೀಡಲಾಗಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಈ ಮೂಲಕ ಎರಡು ಪಕ್ಷಗಳ ಮೈತ್ರಿ ಕೇವಲ ಲೋಕಸಭಾ ಚುನಾವಣೆಗೆ ಮಾತ್ರ. ಅದರ ಮಧ್ಯೆ ಯಾವುದೇ ಚುನಾವಣೆ ಬಂದರೂ ಅದಕ್ಕೆ ಬೆಂಬಲ ಸಿಗುವುದು ಕಷ್ಟ ಎಂಬುದನ್ನೇ ತೋರಿಸುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *