ಬಿಜೆಪಿ-ಜೆಡಿಎಸ್ ಗೆ ನಿರೀಕ್ಷೆಗೂ ಮೀರಿ ಮತಗಳು ಬಂದಿವೆ.. ಅದನ್ನೊಮ್ಮೆ ಪರೀಕ್ಷೆ ಮಾಡಬೇಕು : ಡಿಕೆ ಶಿವಕುಮಾರ್

suddionenews
1 Min Read

 

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿತ್ತು. ಅಂದುಕೊಂಡಂತೆ ಜೆಡಿಎಸ್ ಎರಡು ಕ್ಷೇತ್ರ.. ಬಿಜೆಪಿ 17 ಕ್ಷೇತ್ರ ಗೆದ್ದಿದೆ. ದೇಶದಲ್ಲಿ ಸರಳ ಬಹುಮತವನ್ನು ಬಿಜೆಪಿ ಪಡೆದುಕೊಂಡು ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದೆ. ಈ ಸಂಬಂಧ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಈ ಫಲಿತಾಂಶದ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಬೇಕು ಎಂದಿದ್ದಾರೆ.

ಇವಿಎಂ ತೊಗಲಗಬೇಕು. ಬ್ಯಾಲೆಟ್ ಮತದಾನ ಮತ್ತೆ ಬರಬೇಕು. ಈಗಾಗಲೇ ಫಲಿತಾಂಶ ಮತ್ತೆ ಬಂದಾಗಿದೆ. ಈಗೇನು ಮಾಡುವುದಕ್ಕೆ ಆಗುವುದಿಲ್ಲ. ಮತ್ತೊಮ್ಮೆ ಫಲಿತಾಂಶವನ್ನು ಪರಿಶೀಲನೆ ನಡೆಸಬಹುದು. ಮಧ್ಯಪ್ರದೇಶದಲ್ಲಿ ಬ್ಯಾಲೆಟ್ ಪೇಪರ್ ಇದ್ದಾಗ ಕಾಂಗ್ರೆಸ್ ಗೆ ಮೂರರಲ್ಲಿ ಎತಡು ಭಾಗದಷ್ಟು ಮತಗಳು ಬೀಳುತ್ತಿದ್ದವು. ಇವಿಎಂ ಕಾರಣಕ್ಕೆ ಈಗ ಪರಿಸ್ಥಿತಿ ಬದಲಾಗಿದೆ. ಇದರ ಬಗ್ಗೆ ಮತ್ತಷ್ಟು ಆಳವಾಗಿ ಚಿಂತನೆ ನಡೆಸಬೇಕಿದೆ ಎಂದಿದ್ದಾರೆ.

ಇದೇ ವೇಳೆ ಮೇಕೆದಾಟು ಯೋಜನೆಯ ಬಗ್ಗೆ ಮಾತನಾಡಿ, ನಮ್ಮ ನೀರು ನಮ್ಮ ಹಕ್ಕು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ನ್ಯಾಯಾಲಯ ಇದರ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತದೆ. ಕೇಂದ್ರ ಸರ್ಕಾರ ಇದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು. ಇದರಿಂದ ತಮಿಳುನಾಡಿಗೆ ಹೆಚ್ಚು ಅನುಕೂಲವಾಗಲಿದೆ. ಮೇಕೆದಾಟು ಅಣೆಕಟ್ಟಿನಿಂದ ತಮಿಳುನಾಡಿಗೆ ನಿಗದಿಯಾಗಿರುವ ನೀರಿನ ಪಾಲನ್ನು ನೀಡಲು ಅನುಕೂಲವಾಗುತ್ತದೆ ಹೊರತು ನಮ್ಮ ಕರ್ನಾಟಕದ ಉಪಯೋಗಕ್ಕೆ ಬಳಸುವುದಿಲ್ಲ ಎಂದಿದ್ದಾರೆ.

ಪೆಟ್ರೋಲ್-ಡಿಸೇಲ್ ದರ ಏರಿಕೆ ಬಗ್ಗೆಯೂ ಮಾತನಾಡಿ, 75 ರಿಂದ 100 ರೂಪಾಯಿ ತನಕ ಬೆಲೆ ಏರಿಕೆ ಮಾಡಿದ್ದು ಬಿಜೆಪಿಗರಲ್ಲವೆ. ಇತರೆ ರಾಜ್ಯಗಳಲ್ಲಿ ನಮಗಿಂತಲೂ ಹೆಚ್ಚಿನ ಬೆಲೆ ಇದೆ. ಕೇಂದ್ರ ಸರ್ಕಾರ ಅಬಕಾರಿ‌ ಶುಲ್ಕ ಹೆಚ್ಚಳ ಮಾಡಿರುವುದೇ ಬೆಲೆ ಏರಿಕೆಗೆ ಕಾರಣವಾಗಿದೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *