ಸುದ್ದಿಒನ್,ಮೈಸೂರು,ಮೇ.17: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಕುರ್ಚಿ ಆಟ ಈಗ ಕೊನೆಯ ಹಂತಕ್ಕೆ ಬಂದು ತಲುಪಿದೆ. ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುವುದು ಸತ್ಯ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರವಾದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಬೋಗಾದಿಯ ಭೋಗನಂದೀಶ್ವರ ದೇವಾಲಯದ ಬಳಿ ಹಮ್ಮಿಕೊಳ್ಳಲಾಗಿದ್ದ ‘ಜನರೊಂದಿಗೆ ಜನತಾದಳ’ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು,ಸಿಎಂ ತವರು ಜಿಲ್ಲೆಯಲ್ಲೇ ಕುರುಬ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟಿರುವ ಜೆಡಿಎಸ್, ಈ ಸಮಾವೇಶದಲ್ಲಿ ವಿಶೇಷ ಕಾರ್ಯತಂತ್ರ ರೂಪಿಸಿದಂತೆ ಕಾಣಿಸಿತು. ಸಮಾವೇಶದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್‌ನ ಎಲ್ಲಾ ಪ್ರಮುಖ ನಾಯಕರು ಕುರುಬ ಸಮುದಾಯದ ಸಂಕೇತವಾದ ಹಳದಿ ಪೇಟ ಧರಿಸಿ ಗಮನ ಸೆಳೆದರು.
ಈ ಸಮಾವೇಶ ಯಾರ ವಿರುದ್ಧವೂ ಅಲ್ಲ. ಕುರುಬ ಸಮುದಾಯವನ್ನು ಯಾರೂ ಗುತ್ತಿಗೆ ಪಡೆದಿಲ್ಲ. ಕುರುಬ ಸಮಾಜದ ಜೊತೆಗೆ ಜೆಡಿಎಸ್ ಪಕ್ಷ ಯಾವಾಗಲೂ ಇದ್ದೇ ಇರುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗಿಂತಲೂ ಕುರುಬ ಸಮುದಾಯಕ್ಕೆ ನಾನು ಹೆಚ್ಚು ಕೊಡುಗೆ ನೀಡಿದ್ದೇನೆ. ಅದಕ್ಕಾಗಿಯೇ ಇಂದು ಆ ಸಮಾಜದ ಯುವಕರು ನನಗೆ ಪ್ರೀತಿಯಿಂದ ಹಳದಿ ಪೇಟ ಧರಿಸಿದ್ದಾರೆ ಎಂದರು.
ರಾಜ್ಯ ಸರ್ಕಾರ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕೈಬಿಟ್ಟು ಕೇವಲ ಕುರ್ಚಿ ಆಟದಲ್ಲಿ ಮುಳುಗಿದೆ. ಇತ್ತೀಚೆಗೆ ಸುರಿದ ಮಳೆಯಿಂದ ಸಾರ್ವಜನಿಕರಿಗೆ ಆಗಿರುವ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಬೆಳೆ ನಷ್ಟದಿಂದ ಕಂಗಾಲಾಗಿರುವ ರೈತರಿಗೆ ಧೈರ್ಯ ತುಂಬುವ ಕನಿಷ್ಠ ಕೆಲಸವನ್ನೂ ಸಿಎಂ ಮಾಡುತ್ತಿಲ್ಲ. ಗ್ಯಾರಂಟಿ ಯೋಜನೆಗಳಿಂದ ಎಲ್ಲರಿಗೂ ಸಹಾಯವಾಗಿದೆ ಎಂಬ ಭ್ರಮೆಯಲ್ಲೇ ಕಾಂಗ್ರೆಸ್ ನಾಯಕರಿದ್ದಾರೆ. ಬೇಕಿದ್ದರೆ ಕಾಂಗ್ರೆಸ್ ನಾಯಕರು ಅರ್ಧ ಗಂಟೆ ನಮ್ಮ ಮನೆ ಬಳಿ ಬಂದು ನೋಡಲಿ, ಆಗ ರಾಜ್ಯದ ಜನರ ನಿಜವಾದ ಕಷ್ಟದ ಚಿತ್ರಣ ಅವರಿಗೆ ಗೊತ್ತಾಗುತ್ತದೆ ಎಂದು ಸವಾಲು ಹಾಕಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








