ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ; ನಗರ ಠಾಣೆ ಪಿಎಸ್ಐ ಗಾದಿಲಿಂಗಪ್ಪ ಮೇಲೆ ತುಮಕೂರು ಜಿಲ್ಲೆಯ ಮಧುಗಿರಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ನಗರದ ತುರುವನೂರು ರಸ್ತೆಯಲ್ಲಿ ಈ ಘಟನೆ ನಡೆದಿದೆ. ತುರವನೂರು ರಸ್ತೆಯ ಖಾಸಗಿ ಹೊಟೇಲ್ ಬಳಿ ನಡೆದಿದೆ.
ತುರುವನೂರು ರಸ್ತೆಯ ಖಾಸಗಿ ಹೊಟೇಲ್ ಬಳಿ ತಡರಾತ್ರಿ ರಸ್ತೆ ಮೇಲೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತೇಗೌಡ ಗುಂಪಾಗಿ ನಿಂತಿದ್ದರು. ಇದನ್ನು ನೋಡಿದ ಪಿಎಸ್ಐ ಗಾದಿಲಿಂಗಪ್ಪ ಪ್ರಶ್ನೆ ಮಾಡಿದರು. ಈ ಹಿನ್ನೆಲೆಯಲ್ಲಿ ಗಾದಿಲಿಂಗಪ್ಪ ಅವರ ಮೇಲೆ ಹನುಮಂತೇಗೌಡ ಅವರು ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ಈ ವೇಳೆ ಹನುಮಂತೇಗೌಡ ಅವರು ಪೊಲೀಸರ ಮೇಲೆಯೇ ಆರೋಪ ಹೊರಿಸಿದ್ದಾರೆ.
ಪೊಲೀಸರಿಂದಾನೇ ನನ್ನ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿದ್ದಾರೆ. ಇದರ ಬೆನ್ನಲ್ಲೇ ಎದೆ ನೋವು ಅಂತ ಒದ್ದಾಡಿದ್ದಾರೆ. ಪೊಲೀಸರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿತ್ರದುರ್ಗ ನಗರ ಠಾಣಾ ವ್ಯಾಪ್ತಿಯಲ್ಲಿ ಇ ಘಟನೆ ನಡೆದಿದೆ. ಇನ್ನು ಈ ಘಟನೆ ಬಗ್ಗೆ ಪ್ರತ್ಯಕ್ಷದರ್ಶಿಯೊಬ್ಬರು ಮಾತನಾಡಿ, ರಾತ್ರಿ 11.30 ರ ಸಮಯವಾಗಿತ್ತು. ಖಾಸಗಿ ಹೊಟೇಲ್ ನಲ್ಲಿ ಊಟ ಮಾಡಿ ಹೊರಡಲು ರೆಡಿಯಾಗಿದ್ದರು.. ಅಷ್ಟೊತ್ತಿಗೆ ಅಲ್ಲಿಗೆ ಬಂದ ಪಿಎಸ್ಐ ಗಾದಿಲಿಂಗಪ್ಪ ಅವರು ರಾತ್ರಿ ಇಷ್ಟೊತ್ತಾದರೂ ಯಾಕೆ ನಿಂತಿದ್ದೀರಾ ಎಂದು ಪ್ರಶ್ನೆ ಮಾಡಿದರು. ಈಗ ಹೊರಡುತ್ತಾ ಇದ್ದೇವೆ ಎಂದು ಹೇಳಿದರೂ ಗಾದಿಲಿಂಗಪ್ಪ ಅವರು ಅವಾಚ್ಯ ಶಬ್ದಗಳಿಂದ ವಾಗ್ದಾಳಿ ನಡೆಸಿದರು. ಮಾತಿಗೆ ಮಾತು ಬೆಳೆದು ಜಗಳವಾಗಿದೆ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್