Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ ಬಿಜೆಪಿ ನಾಯಕರು..!

---Advertisement---

ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದೆ. ಒಂದು ಕಡೆ ಈಗಿರುವ ಸರ್ಕಾರ ಉಳಿಸಿಕೊಳ್ಳಲು ಎಲ್ಲಾ ಕಡೆಯಿಂದಾನೂ ಭದ್ರ ಪಡಿಸಿಕೊಳ್ಳುವ ಪ್ರಯತ್ನದ ಜೊತೆಗೆ ಲೋಕಸಭೆಯಲ್ಲಿ ಗೆಲ್ಲಲೇಬೇಕೆಂಬ ಒಂದಷ್ಟು ಪ್ಲ್ಯಾನ್ ಗಳು ಸಿದ್ಧವಾಗಿದೆ. ಇದೀಗ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಸೇರಿದ್ದಾರೆ.

ಮಾಜಿ ಶಾಸಕ ಚಿಕ್ಕನಗೌಡ ಸೇರಿದಂತೆ ಹಲವು ಬಿಜೆಪಿ ಮುಖಂಡರು ಇಂದು ಬಿಜೆಪಿ ಸೇರಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕನಗೌಡಗೆ ಬಿಜೆಪಿ ಟಿಕೆಟ್ ಸಿಗದೆ ಪಕ್ಷೇತರರಾಗಿ ಸ್ಪರ್ಧೆ ಮಾಡಿದ್ದರು. ಇದೀಗ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಸೇರಿದ್ದಾರೆ.

ಈ ಸಂಬಂಧ ಜಗದೀಶ್ ಶೆಟ್ಟರ್ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಕುಂದಗೋಳದ ಮಾಜಿ ಶಾಸಕರಾದ ಎಸ್.ಐ.ಚಿಕ್ಕನಗೌಡರ ಮತ್ತು ಕುಂದಗೋಳ ಹಾಗೂ ಶಿಗ್ಗಾಂವಿ ಮತಕ್ಷೇತ್ರದ ಮುಖಂಡರ ಜೊತೆ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು ಎಂದು ಬರೆದುಕೊಂಡು, ಫೋಟೋಗಳನ್ನು ಹಂಚಿಕಿಂಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment