ಸುದ್ದಿಒನ್,ಬೆಂಗಳೂರು,ಮೇ.17: ಇತ್ತೀಚೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಬೆಳೆಸಿದ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ನಾಯಕರ ಈ ದಿಢೀರ್ ಮೆಟ್ರೋ ಪ್ರೇಮ ಕೇವಲ ಒಂದು ದಿನದ ನಾಟಕ ಮತ್ತು ಪ್ರದರ್ಶನವಷ್ಟೇ ಎಂದು ಅವರು ಲೇವಡಿ ಮಾಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಪ್ರಧಾನಿ ನರೇಂದ್ರ ಮೋದಿ ಅವರು, ಬಿಜೆಪಿ ನಾಯಕರು ಪ್ರತಿದಿನ ಮೆಟ್ರೋದಲ್ಲಿ ಓಡಾಡುವುದಾದರೆ ನಾವು ಅದನ್ನು ಖಂಡಿತ ಒಪ್ಪಿಕೊಳ್ಳುತ್ತೇವೆ. ಆದರೆ ಅವರದ್ದು ಕೇವಲ ಒಂದು ದಿನದ ನಾಟಕವಷ್ಟೇ. ಒಬ್ಬ ಮಂತ್ರಿ ಮೆಟ್ರೋ ಹತ್ತುವುದು, ಮತ್ತೊಬ್ಬರು ಬೈಕ್ ಹತ್ತಿ ಫೋಟೋಗೆ ಫೋಸ್ ಕೊಡುವುದು ಬಿಜೆಪಿಯವರ ಹಳೇ ಚಾಳಿ” ಎಂದು ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದರು.
ಪ್ರಶ್ನೆ ಇರೋದು ವಿಜಯೇಂದ್ರ ಅವರು ಮೆಟ್ರೋ ಹತ್ತುವಂತೆ ಮಾಡಿದ್ದು ಯಾರು? ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಮೆಟ್ರೋ ಹತ್ತುವ ಪರಿಸ್ಥಿತಿ ಯಾಕೆ ಬಂತು? ಅವರನ್ನು ಮೆಟ್ರೋ ಹತ್ತುವಂತೆ ಮಾಡಿದವರು ಯಾರು? ಇದಕ್ಕೆಲ್ಲಾ ಬಿಜೆಪಿ ನಾಯಕರು ಮೊದಲು ಉತ್ತರ ನೀಡಬೇಕಲ್ವಾ? ಎಂದು ಪ್ರಶ್ನಿಸಿದರು.
ಬಿಜೆಪಿ ನಾಯಕರಿಗೆ ನಿಜವಾಗಿಯೂ ಜನಸಾಮಾನ್ಯರ ಬಗ್ಗೆ ಕಾಳಜಿ ಮತ್ತು ಪ್ರಾಮಾಣಿಕತೆ ಇದ್ದರೆ, ಅವರು ಪ್ರತಿದಿನ ಬಿಎಂಟಿಸಿ ಬಸ್ಸುಗಳಲ್ಲಿ ಪ್ರಯಾಣಿಸಲಿ ಎಂದು ಸಚಿವ ಖರ್ಗೆ ಸವಾಲು ಹಾಕಿದರು. ಅಷ್ಟೇ ಅಲ್ಲದೆ, ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ’ ಯೋಜನೆಯನ್ನು ಬಿಜೆಪಿ ನಾಯಕರು ಸಮರ್ಪಕವಾಗಿ ಬಳಸಿಕೊಳ್ಳಲಿ ಎಂದು ಅವರು ಇದೇ ವೇಳೆ ಉಚಿತ ಸಲಹೆ ನೀಡಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








