Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿ ನಾಯಕರ ಬಂಡಾಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ವರವಾಗುತ್ತಾ..?

---Advertisement---

ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯ ವಿಚಾರಕ್ಕೆ ಬಂಡಾಯದ ಕಿಚ್ಚು ಜೋರಾಗಿದೆ. ಹಾಲಿ ರಾಜ್ಯಾಧ್ಯಕ್ಷರಾಗಿರುವ ಬಿವೈ ವಿಜಯೇಂದ್ರ ಅವರ ಸ್ಥಾನಕ್ಕೆ ಕುತ್ತು ಬಂದಿದೆ. ಇದರ ಬೆನ್ನಲ್ಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ದೊಡ್ಡ ಸ್ಪರ್ಧೆ ಕೂಡ ಎದುರಾಗಿದೆ. ಅದರಲ್ಲಿ ಶಾಸಕ ಬಸನಗೌಡ ಪಾಟೀಲ್ ಕೂಡ ಒಬ್ಬರು. ಯಡಿಯೂರಪ್ಪ ಹಾಗೂ ವಿಜಯೇಂದ್ರ ಮೇಲೆ ಸದಾ ಕಿಡಿಕಾರುತ್ತಿದ್ದ ಯತ್ನಾಳ್ ಅವರು ರಾಜ್ಯಾಧ್ಯಕ್ಷ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ. ಈಗ ಬಿಜೆಪಿ ನಾಯಕರ ಒಳ ಜಗಳವೂ ಇದಕ್ಕೆ ಸಪೋರ್ಟ್ ಆಗಲಿದೆ ಎನ್ನಲಾಗ್ತಾ ಇದೆ.

ಇಲ್ಲಿಯವರೆಗೂ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ವಿಜಯೇಂದ್ರ ಅವರ ಸ್ಥಾನ ಭದ್ರ ಎಂದೇ ಹೇಳಲಾಗುತ್ತಿತ್ತು. ಆದರೆ ದಿನಕ್ಕೊಬ್ಬ ನಾಯಕರು ವಿಜಯೇಂದ್ರ ವಿರುದ್ಧವಾಗಿಯೇ ಮಾತನಾಡುತ್ತಿದ್ದಾರೆ. ಇಂದು ಮಾಜಿ ಸಚಿವ ಕೆ.ಸುಧಾಕರ್ ಆಕ್ರೋಶದ ಮಾತುಗಳನ್ನ ಆಡಿದ್ದಾರೆ. ಹೈಕಮಾಂಡ್ ನಾಯಕರಿಗೆ ಎಲ್ಲಾ ವಿಚಾರವನ್ನ ತಿಳಿಸುತ್ತೀನಿ ಅಂತಾನೇ ಹೇಳಿದ್ದಾರೆ.ಯತ್ನಾಳ್ ಅವರ ಬಣ ಮೊದಲಿನಿಂದಾನೂ ವಿಜಯೇಂದ್ರ ಅವರನ್ನ ಟಾರ್ಗೆಟ್ ಮಾಡಿದೆ.

ಶಾಸಕ ಸುನಿಲ್‌ ಕುಮಾರ್‌ ಅವರು ಪಕ್ಷದ ನೀಡಿರುವ ಜವಾಬ್ದಾರಿಯಿಂದ ಕೆಳಗಿಳಿಯುವ ನಿರ್ಧಾರ, ಸಭೆಯಲ್ಲೇ ಶ್ರೀರಾಮುಲು ಅವರ ಅಸಮಾಧಾನ, ಬಿಜೆಪಿ ಶಾಸಕರಾದ ಶಿವರಾಂ ಹೆಬ್ಬಾರ್‌ ಹಾಗೂ ಎಸ್‌.ಟಿ.ಸೋಮಶೇಖರ್‌ ಅವರ ಹೇಳಿಕೆಗಳು ಕೂಡ ವಿಜಯೇಂದ್ರ ಅವರಿಗೆ ಮುಳುವಾಗಿವೆ. ಪಕ್ಷದಲ್ಲಿಯೇ ವಿಜಯೇಂದ್ರ ಅವರಿಗೆ ವಿರೋಧ ವ್ಯಕ್ತವಾಗಿದೆ. ಹೀಗಾಗಿ ಯತ್ನಾಳ್ ಬಣವೇ ಸ್ಟ್ರಾಂಗ್ ಆಗುತ್ತಿದ್ದು, ಯತ್ನಾಳ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಶ್ರೀರಾಮುಲು ಅವರು ಕೂಡ ಯತ್ನಾಳ್ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಚುನಾವಣೆಯ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ ಮಾಡುವುದಾಗಿ ಹೈಕಮಾಂಡ್ ಸೂಚಿಸಿದೆ. ಯಾರೂ ಮುಂದಿ‌ನ ರಾಜ್ಯಾಧ್ಯಕ್ಷರಾಗುತ್ತರೆ ನೋಡಬೇಕಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment