ಕಾಂಗ್ರೆಸ್ ನ 50 ಶಾಸಕರಿಗೆ ತಲಾ 50 ಕೋಟಿ ಬಿಜೆಪಿ ಆಮಿಷ : ಸಿಎಂ ಆರೋಪ

suddionenews
1 Min Read

ಸುದ್ದಿಒನ್ | ಬಿಜೆಪಿಯವರು ನಮ್ಮ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಪಿತೂರಿ ನಡೆಸುತ್ತಿದ್ದಾರೆ ಮತ್ತು 50 ಮಂದಿ ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂ. ಆಮಿಷ ಒಡ್ಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಭಾರೀ ಆರೋಪ ಮಾಡಿದ್ದಾರೆ.

ಬುಧವಾರ ಮೈಸೂರಿನಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಬಿಜೆಪಿಯ ಆಮಿಷಕ್ಕೆ ಕಾಂಗ್ರೆಸ್‌ನ ಯಾವೊಬ್ಬ ಶಾಸಕರೂ ಇದಕ್ಕೆ ಒಪ್ಪಿಲ್ಲ. ಈ ಕಾರಣದಿಂದಾಗಿ ಬಿಜೆಪಿಯವರು ತಮ್ಮ ವಿರುದ್ಧ ಸುಳ್ಳು ಕೇಸು ಹಾಕುತ್ತಿದ್ದಾರೆ ಎಂದು ಟೀಕಿಸಿದರು.

ಈ ಸಂದರ್ಭದಲ್ಲಿ ಪ್ರತಿಪಕ್ಷ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದರು. ಆ ಪಕ್ಷದ ಎಲ್ಲ ನಾಯಕರು ಕೋಟಿಗಟ್ಟಲೆ ಸಂಗ್ರಹಿಸಿ ಆ ಹಣವನ್ನು ತಮ್ಮ ಶಾಸಕರಿಗೆ ಆಮಿಷ ಒಡ್ಡಿದ್ದಾರೆ ಎಂದು ಟೀಕಿಸಿದರು. ಆದರೆ, ನಮ್ಮ ಯಾವೊಬ್ಬ ಶಾಸಕರೂ ಆಮಿಷಕ್ಕೆ ಒಳಗಾಗದ ಕಾರಣ ಸುಳ್ಳು ಪ್ರಕರಣಗಳನ್ನು ಹಾಕಿ ಸರ್ಕಾರ ಬೀಳಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ದೂರಿದರು.

ಬಿಜೆಪಿಯವರು ಹೇಗಾದರೂ ಮಾಡಿ
ಸಿದ್ದರಾಮಯ್ಯ ಸರಕಾರವನ್ನು ಬೀಳಿಸಬೇಕೆಂಬ ಸಂಕಲ್ಪ ತೊಟ್ಟಿದ್ದಾರೆ. 50 ಮಂದಿ ಶಾಸಕರಿಗೆ ತಲಾ 50 ಕೋಟಿ ರೂ. ನೀಡಲು ಅವರಿಗೆ ಇಷ್ಟು ಹಣ ಎಲ್ಲಿಂದ ಬಂತು? ನೀವು ಯಾವುದೇ ನೋಟುಗಳನ್ನು ಮುದ್ರಿಸುತ್ತೀರಾ? ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಆರ್.ಅಶೋಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆ ಹಣ ಪಾವತಿಸುತ್ತಿದ್ದಾರೆಯೇ?’ ಎಂದು ಸಿಎಂ ಪ್ರಶ್ನಿಸಿದರು. ಮತ್ತೊಂದೆಡೆ ಬಿಜೆಪಿ ನಾಯಕರು ಕೋಮುದ್ವೇಷ ಕೆರಳಿಸಲು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಸಿದ್ದು ಆರೋಪಿಸಿದ್ದಾರೆ.

ಇದೇ ವೇಳೆ ಚೆನ್ನಪಟ್ಟಣ ಉಪಚುನಾವಣೆ ಪ್ರಚಾರದ ಕೊನೆಯ ದಿನ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಪ್ರಚಾರ ನಡೆಸಿದ ಜೆಡಿಎಸ್ ಮುಖಂಡ, ಮಾಜಿ ಪ್ರಧಾನಿ ದೇವೇಗೌಡರು, ಜನವರಿ ನಂತರ ಸಿದ್ದರಾಮಯ್ಯ ಸರ್ಕಾರ ಪತನವಾಗುತ್ತದೆ ಎಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಬಿಜೆಪಿ ಸರ್ಕಾರವನ್ನು ಬೀಳಿಸಲು ಯತ್ನಿಸುತ್ತಿದೆ ಎಂದು ಸಿಎಂ ಆರೋಪಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *