ನವದೆಹಲಿ: ಮೂಡಾ ಹಗರಣವನ್ನು ವಿರೋಧಿಸಿ ಸದನದಲ್ಲೂ ಬಾರೀ ಚರ್ಚೆ ಮಾಡಿದರು. ಈಗ ಮೈಸೂರಿನವರೆಗೂ ಪಾದಯಾತ್ರೆ ನಡೆಸಲು ಬಿಜೆಪಿ ನಾಯಕರು ಸಜ್ಜಾಗಿದ್ದಾರೆ. ಆದರೆ ಮೈಸೂರು ಪಾದಯಾತ್ರೆಗೆ ನಮ್ಮ ಬೆಂಬಲವಿಲ್ಲ ಎಂದು ಕೇಂದ್ರ ಸಚುವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಪಾದಯಾತ್ರೆ ವಿಚಾರದಲ್ಲಿ ನಮ್ಮನ್ನು ಬೆಂಬಲಕ್ಕೆ ತೆಗೆದುಕೊಂಡಿಲ್ಲ. ಹೀಗಾಗಿ ನಾವೂ ಬೆಂಬಲ ನೀಡುತ್ತಿಲ್ಲ ಎಂದಿದ್ದಾರೆ. ಈ ಸಂಬಂಧ ಜೆಡಿಎಸ್ ಕೋರ್ ಕಮಿಟಿ ಸದಸ್ಯರು ಸಭೆ ನಡೆಸಿ ತೀರ್ಮಾನ ಮಾಡಿರುವ ಬಗ್ಗೆ ತಿಳಿಸಿದ್ದಾರೆ.
ಬಿಜೆಪಿಯವರು ಪಾದಯಾತ್ರೆ ಬಗ್ಗೆ ಅವರೇ ತೀರ್ಮಾನ ತೆಗೆದುಕೊಂಡು ಮಾಡುತ್ತಿದ್ದಾರೆ. ಈ ಸಮಯದಲ್ಲಿ ಪಾದಯಾತ್ರೆ ಸೂಕ್ತವಲ್ಲ ಎಂಬುದು ನಮ್ಮ ನಿಲುವು. ಹೀಗಾಗಿ ಅದರಿಂದ ಹಿಂದೆ ಸರಿದ್ದೇವೆ. ಆ ಭಾಗದ ಜನರ ಭಾವನೆ ಮುಖ್ಯ. ಹಾಗಾಗಿ ಪಾದಯಾತ್ರೆಯಲ್ಲಿ ಭಾಗಿಯಾಗಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಇದೇ ವೇಳೆ ಕೇರಳದ ಪ್ರವಾಹದ ಬಗ್ಗೆ ಮಾತನಾಡಿ, ಮಳೆತಿಂದ ನೂರಾರು ಜನರ ಜೀವಕ್ಕೆ ಹಾನಿಯಾಗಿದೆ. ರಾಜ್ಯದಿಂದ ಹೋದವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲಿಂದ ವಾಪಾಸ್ ಬರುವುದಕ್ಕೆ ಸಮಸ್ಯೆಯಲ್ಲಿ ಸಿಲುಕಿದ್ದಾರೆ. ರಾಜ್ಯದಲ್ಲೂ ಎಲ್ಲೋ, ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ. ಜೊತೆಗೆ ಈಗ ಎಲ್ಲರೂ ಕೃಷಿ ಚಟುವಟಿಕೆಯಲ್ಲಿ ಭಾಗವಹಿಸುವ ಸಮಯ. ಹೀಗಾಗಿ ಜೆಡಿಎಸ್ ಪಾದಯಾತ್ರೆಯಲ್ಲಿ ಭಾಗವಹಿಸುವುದಿಲ್ಲ ಎಂಬುದನ್ನು ಕೇಂದ್ರ ಅಚುವ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಬಿಜೆಪಿ ನಾಯಕರ ಪಾದಯಾತ್ರೆಗೆ ಆರಂಭದಲ್ಲಿಯೇ ವಿಘ್ನ ಎದುರಾಗಿದೆ. ಬಿಜೆಪಿ ಪಾದಯಾತ್ರೆ ಮಾಡಿದರು ಜೆಡಿಎಸ್ ನಾಯಕರು ಭಾಗವಹಿಸುವುದಿಲ್ಲ ಎಂಬುದನ್ನು ತಿಳಿಸಿದ್ದಾರೆ.