ಬೆಂಗಳೂರು: ಕಳೆದ ಕೆಲವು ತಿಂಗಳುಗಳಿಂದ ಮಾಜಿ ಸಚಿವ ಮತ್ತು ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಪರ ಒಲವು ತೋರಿಸಿದ್ದಾರೆ. ಬಿಜೆಪಿಯ ಕಾರ್ಯಕ್ರಮಗಳಿಗೆ ಗೈರಾಗುವುದು, ಬಿಜೆಪಿ ನಾಯಕರಿಂದ ಅಂತರ ಕಾಯ್ದುಕೊಳ್ಳುವುದನ್ನು ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ನಲ್ಲಿ ಸಿಎಂ ಹಾಗೂ ಡಿಸಿಎಂ ಕಾರ್ಯಕ್ರಮಗಳಿದ್ದಾಗ ಭೇಟಿ ಮಾಡುವ ಕೆಲಸ ಮಾಡುತ್ತಿದ್ದಾರೆ. ಇದನ್ನು ಕಂಡವರು ಅತ್ತ ಬಿಜೆಪಿಯಲ್ಲಿ ಇದ್ದು ಇತ್ತ ಕಾಂಗ್ರೆಸ್ ಒಲವು ತೋರುತ್ತಿದ್ದಾರೆ. ಯಾವಾಗ ಕಾಂಗ್ರೆಸ್ ಗೆ ಬರುತ್ತಾರೆ ಎಂಬುದು ಗೊತ್ತಿಲ್ಲ ಎಂಬ ಚರ್ಚೆಗಳು ನಡೆದಿವೆ.
ಇದೀಗ ಹೊಸ ಬೆಳವಣಿಗೆಯೊಂದು ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಸಂಪೂರ್ಣವಾಗಿ ಬೆಂಬಲ ನೀಡಿದ್ದಾರೆ. ಬೆಂಗಳೂರು ವಿಧಾನಪರಿಷತ್ ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಿದ್ದಾರೆ. ಪುಟ್ಟಣ್ಣ ಪರವಾಗಿ ಸೋಮಶೇಖರ್ ಮಾತನಾಡಿದ್ದಾರೆ.
ಶಾಸಕರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಟ್ಟಣ್ಣ ಪರವಾಗಿ ಮತಯಾಚಿಸಿದ್ದಾರೆ. ಇದು ಬಿಜೆಪಿ ಪಾಳಯದಲ್ಲೂ ಎಲ್ಲರಿಗೂ ಗೊತ್ತಿರುವ ವಿಚಾರವೇ ಸರಿ. ಆದರೆ ಇದರ ನಡುವೆ ಎಸ್ ಟಿ ಸೋಮಶೇಖರ್ ಎಲ್ಲಿಯೂ ತಾನೂ ಬಿಜೆಪಿ ತೊರೆಯುವ ಬಗ್ಗೆ ಮಾತನಾಡಿಲ್ಲ. ಆದರೆ ಕಾಂಗ್ರೆಸ್ ನಾಯಕರ ಜೊತೆಗೆ ಹೆಚ್ಚು ಗುರುತಿಸಿಕೊಳ್ಳುತ್ತಿದ್ದಾರೆ.