Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಲಂಚ ಪಡೆಯುವಾಗಲೇ ಸಿಕ್ಕಿಬಿದ್ದಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಜಾಮೀನು..!

---Advertisement---

ಬೆಂಗಳೂರು: ಕಳೆದ 15 ದಿನಗಳಿಂದ ಪರಪ್ಪನ ಅಗ್ರಹಾರದಲ್ಲಿದ್ದ ಶಾಸಜ ಚಂದ್ರು ಲಮಾಣಿಗೆ ಷರತ್ತು ಬದ್ಧ ಜಾಮೀನು ಸಿಕ್ಕಿದೆ‌. ನಾಲ್ಕು ಗೋಡೆಗಳ ಮಧ್ಯೆ ಇದ್ದ ಚಂದ್ರು ಲಮಾಣಿ ಸದ್ಯ ನಿಟ್ಟುಸಿರು ಬಿಡುವಂತಾಗಿದೆ. ಐದು ಲಕ್ಷ ಲಂಚ ಪಡೆಯುವಾಗಲೇ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದರು. ಈ ಸಂಬಂಧ ಜೈಲು ಸೇರಿದ್ದರು. ಇಂದು ಜನಪ್ರತಿನಿಧಿಗಳ ನ್ಯಾಯಾಲಯವೂ ಷರತ್ತು ಬದ್ಧ ಜಾಮೀನು ನೀಡಿದೆ.

ಎರಡು ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿಯನ್ನು ಪಡೆದು ಜಾಮೀನನ್ನ ನೀಡಿದೆ. ರಸ್ತೆ ಬದಿ ತಡೆಗೋಡೆ ನಿರ್ಮಾಣ ಸಂಬಂಧ 1 ಕೋಟಿ ಮೊತ್ತದ ಕಾಮಗಾರಿಗೆ ಶಾಸಕ ಚಂದ್ರು ಲಮಾಣಿ ಕ್ಲಾಸ್-1 ಗುತ್ತಿಗೆದಾರ ವಿಜಯ ಪೂಜಾರ ಎನ್ನುವವರ ಬಳಿ 11 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದರು. ಇದರ ಮೊದಲ ಹಂತದ ಹಣವಾಗಿ 5 ಲಕ್ಷ ರೂ. ಪಡೆಯುವಾಗಲೇ ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದ ತಂಡ ದಾಳಿ ನಡೆಸಿದೆ. ಈ ವೇಳೆ ಶಾಸಕರು ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದಿದ್ದರು.

ಈ ಕೇಸ್ ಬಿಜೆಪಿ ನಾಯಕರಿಗೆ ಮುಜುಗರವನ್ನುಂಟು ಮಾಡಿತ್ತು. ಯಾಕಂದ್ರೆ ಆಡಳಿತ ಪಕ್ಷ ಕಾಂಗ್ರೆಸ್ ಅನ್ನು ಸಣ್ಣ ಕಾರಣ ಸಿಕ್ಕಿದ್ರು ಸಿಲುಕಿಸುವ ಪ್ರಯತ್ನ ಮಾಡ್ತಿರುವ ಬಿಜೆಪಿಗರಿಗೆ ತಮ್ಮದೆರ ಪಕ್ಷದ ಶಾಸಕ ಲಂಚ ಪ್ರಕರಣದಲ್ಲಿ ಸಿಕ್ಕಿ ಬಿದ್ದಿದ್ದು, ಎದುರಾಳಿಯ ಬಗ್ಗೆ ಮಾತನ್ನಾಡುವುದಕ್ಕೆ ಕಷ್ಟವಾಗಿತ್ತು. ಹೀಗಾಗಿ ಬಿಜೆಪಿ ನಾಯಕರು ಸಹ ಈ ಘಟನೆಗೆ ವಿರೋಧಿಸಿದ್ದರು. ಇದೀಗ ಚಂದ್ರು ಲಮಾಣಿಗೆ ಜಾಮೀನು ಸಿಕ್ಕಿದ್ದು, ಬಿಜೆಪಿ ಶಿಸ್ತು ಸಮಿತಿ ಯಾವ ರೀತಿಯ ತೀರ್ಮಾನ ತೆಗೆದುಕೊಳ್ಳುತ್ತೆ ಎಂಬುದನ್ನ ನೋಡಬೇಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...