ಶಿರಸಿ : ಕೂಡ್ಲಿಗಿ ಬಿಜೆಪಿ ಶಾಸಕ ಎನ್. ವೈ. ಎನ್ ಗೋಪಾಲ ಕೃಷ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜೀನಾಮೆ ನೀಡಿರುವುದು ಪಕ್ಷಕ್ಕೆ ಅಚ್ಚರಿ ಮೂಡಿಸಿದೆ. ಸ್ಪೀಕರ್ ಕಾಗೇರಿ ಅವರ ಬಳಿ ತೆರಳಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಗೋಪಾಲಕೃಷ್ಣ ಅವರು ವಯಸ್ಸಿನ ಕಾರಣದಿಂದ ಈಗ ರಾಜೀನಾಮೆ ನೀಡುತ್ತಿದ್ದೇನೆ. ರಾಜಕೀಯದಲ್ಲಿ ಮುಂದೇನಾಗುತ್ತೋ ಗೊತ್ತಿಲ್ಲ. ಮಕ್ಕಳು ಯಾವ ಪಕ್ಷಕ್ಕೆ ಹೋಗುತ್ತಾರೋ ಗೊತ್ತಿಲ್ಲ ಎಂದಿದ್ದಾರೆ.
ಆರು ಬಾರಿ ಶಾಸಕರಾದರೂ ಮಂತ್ರಿ ಸ್ಥಾನ ನೀಡಿಲ್ಲ. ಅದು ಕಾಂಗ್ರೆಸ್ ಪಕ್ಷವೂ ನೀಡಿಲ್ಲ, ಬಿಜೆಪಿಯೂ ನೀಡಿಲ್ಲ. ಇದಕ್ಕೆ ಅಸಮಾಧಾನವಿದೆ ಎಂದು ತಿಳಿಸಿದ್ದಾರೆ. ಶಿರಸಿಯ ಸಭಾಧ್ಯಕ್ಷರ ಕಚೇರಿಗೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ.





GIPHY App Key not set. Please check settings