Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ-ಕಾಂಗ್ರೆಸ್ ಪರಸ್ಪರ ಕಿಡಿಕಾರುತ್ತಿರುವಾಗಲೇ ಸಿದ್ದರಾಮಯ್ಯರನ್ನು ಗೆಲ್ಲಿಸುತ್ತೇವೆಂದ ಬಿಜೆಪಿ ಎಂಎಲ್ಸಿ..!

Facebook
Twitter
Telegram
WhatsApp

ಮೈಸೂರು : ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ಕೆಲವೊಂದು ಬೆಳವಣಿಗೆಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಬಿಜೆಪಿ ಮೇಲೆ ಸಮರ ಸಾರುತ್ತಿದೆ. ಬಿಜೆಪಿ ಕೂಡ ಸುಮ್ಮನೆ ಕೂತಿಲ್ಲ. ಚಾನ್ಸ್ ಸಿಕ್ಕಾಗೆಲ್ಲಾ ಕಾಂಗ್ರೆಸ್ ನಾಯಕರ ಮೇಲೆ ವಾಗ್ದಾಳಿ ನಡೆಸುತ್ತಿದೆ. ಇಷ್ಟೆಲ್ಲಾ ಬೆಳವಣಿಗೆಯ ನಡುವೆ ಇದೀಗ ಬಿಜೆಪಿ ಪಕ್ಷದವರೇ ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯ ಅವರನ್ನು ಗೆಲ್ಲಿಸುತ್ತೇವೆ ಎಂದು ಪಣ ತೊಟ್ಟಿದ್ದಾರೆ.

ಇಂಥದ್ದೊಂದು ಮಾತನ್ನು ಹೇಳಿದ್ದು ಬಿಜೆಪಿ ಎಂಎಲ್ಸಿ ಹೆಚ್ ವಿಶ್ವನಾಥ್ ಅವರು. ಅವರ ಹೇಳಿಕೆ ಅಚ್ಚರಿಗೂ ಕಾರಣವಾಗಿದೆ. ಸದ್ಯ ಸಿದ್ದರಾಮಯ್ಯ ಅವರು ಈ ಬಾರಿ ಯಾವ ಕ್ಷೇತ್ರದಿಂದ ನಿಲ್ಲಬೇಕು ಎಂಬುದೇ ಇನ್ನು ಖಾತ್ರಿಯಾಗಿಲ್ಲ. ಹೀಗಿರುವಾಗ ಹೆಚ್ ವಿಶ್ವನಾಥ್ ಅವರು, ಹುಣಸೂರು ಕ್ಷೇತ್ರಕ್ಕೆ ಆಹ್ವಾನ ನೀಡಿದ್ದಾರೆ. ಸಿದ್ದರಾಮಯ್ಯ ಅವರು ಹುಣಸೂರು ಕ್ಷೇತ್ರದಿಂದಲೇ ಸ್ಪರ್ಧಿಸಲಿ. ಅವರು ಇಲ್ಲಿಂದಲೇ ಸ್ಪರ್ಧಿಸಿದರೆ ನಾವೂ ಗೆಲ್ಲಿಸುತ್ತೇವೆ. ಅಂತ ಶೆಟ್ರು ಮಂಜನನ್ನೇ ಗೆಲ್ಲಿಸಿದ್ದೀವಿ ಇನ್ನು ನಿಮ್ಮನ್ನು ಗೆಲ್ಲಿಸಲ್ಲವಾ ಎಂದಿದ್ದಾರೆ. ಆಡಳಿತ ಪಕ್ಷದಲ್ಲಿದ್ದುಕೊಂಡು ಈ ರೀತಿ ಹೇಳಿಕೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ.

ಸಿದ್ದರಾಮಯ್ಯ ಅವರು 5 ವರ್ಷಗಳ ಕಾಲ ಯಶಸ್ವಿ ಆಡಳಿತ ನೀಡಿದ್ದಾರೆ. ಅಂಥಹವರು ವಿಧಾನಸಭೆಯಲ್ಲಿರಬೇಕು. ಈ ಹಿಂದೆಯೂ ಕೂಡ ಹುಣಸೂರಿನಲ್ಲಿ ಸ್ಪರ್ಧಿಸಿ ಎಂದು ಅವರಿಗೆ ಹೇಳಿದ್ದೆ. ಈ ಬಾರಿಯೂ ಹೇಳುತ್ತಿದ್ದೇನೆ. ಇಲ್ಲಿಯೇ ಸ್ಪರ್ಧಿಸಿದರೆ ಗೆಲ್ಲಿಸುವ ಜವಬ್ದಾರಿ ನಮ್ಮದು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!