ಚಾಮರಾಜನಗರ: ಸಂಸದ ಶ್ರೀನಿವಾಸ್ ಪ್ರಸಾದ್ ಇದೀಗ ತಮ್ಮ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಬಿಜೆಪಿಯಲ್ಲಂತು ರಾಜೀನಾಮೆ ಪರ್ವ ಜೋರಾಗಿಯೇ ಶುರುವಾಗಿದೆ. ಟಿಕೆಟ್ ಸಿಗದ ಕಾರಣ ಹಲವರು ರಾಜೀನಾಮೆ ಘೋಷಿಸಿದ್ದಾರೆ. ಆದರೆ ಶ್ರೀನಿವಾಸ್ ಪ್ರಸಾದ್ ಇದೆ ನನ್ನ ಕೊನೆಯ ಚುನಾವಣಾ ಪ್ರಚಾರ ಅಂತ ತಿಳಿಸಿದ್ದಾರೆ.

ಬಿಜೆಪಿಯಿಂದ ಚಾಮರಾಜನಗರದ ಸಂಸದರಾಗಿರುವ ಶ್ರೀನಿವಾಸ್ ಪ್ರಸಾದ್, ಗುಂಡ್ಲುಪೇಡೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾದ ನಡೆಸುತ್ತಿದ್ದ ಸಂದರ್ಭದಲ್ಲಿ ಘೋಷಣೆ ಮಾಡಿದ್ದಾರೆ. ಲೋಕಸಭೆ ಅವಧಿ ಮುಗಿದ ಬಳಿಕ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ತಿಳಿಸಿದ್ದಾರೆ.

“ಮುಂದಿನ ವರ್ಷ ನನ್ನ ಲೋಕಸಭಾ ಅವಧಿ ಮುಕ್ತಾಯವಾಗಲಿದೆ. ಆ ಬಳಿಕ ನಾನು ಯಾವುದೇ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಪ್ರಾಮಾಣಿಕವಾಗಿ ಯಾವುದೇ ಆರೋಪಗಳಿಲ್ಲದೆ ಕೆಲಸ ಮಾಡಿದ್ದೇನೆ. ಬರೋಬ್ಬರಿ 14 ಬಾರಿ ಚುನಾವಣೆ ಎದುರಿಸಿದ್ದೇನೆ. ಇದು ನನ್ನ ರಾಜಕೀಯದ ಕೊನೆ ಚುನಾವಣೆ ಪ್ರಚಾರ. 2014ರ ವಿಧಾನಸಭಾ ಚುನಾವಣೆಗೆ ನನ್ನ ಅವಧಿ ಮುಕ್ತಾಯವಾಗಲಿದೆ. ಬಳಿಕ ನಿವೃತ್ತಿ ಘೋಷಿಸುತ್ತೇನೆ ಎಂದಿದ್ದಾರೆ.

