Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸಂಘಟನಾತ್ಮಕ ಸಭೆ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಜೂ.20) : ರಾಜ್ಯಾದ್ಯಂತ ಬಿಜೆಪಿ ಸಂಘಟನಾತ್ಮಕ ಸಭೆ ನಡೆಸುತ್ತಿರುವುದರಿಂದ ನಾಲ್ಕು ತಂಡಗಳನ್ನು ರಚಿಸಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ತಂಡ ನಾಳೆ ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಧುಗಿರಿಗೆ ಆಗಮಿಸಲಿದೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದರು.

ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎ.ನಾರಾಯಣಸ್ವಾಮಿ 22 ರಂದು ಬೆಳಿಗ್ಗೆ 10-30 ಕ್ಕೆ ದಾವಣಗೆರೆ, ಮಧ್ಯಾಹ್ನ 2-30 ಕ್ಕೆ ಚಿತ್ರದುರ್ಗಕ್ಕೆ ಆಗಮಿಸುವ ಬಿ.ಎಸ್.ಯಡಿಯೂರಪ್ಪ ತುರುವನೂರು ರಸ್ತೆಯಲ್ಲಿರುವ ರೆಡ್ಡಿ ಸಮುದಾಯ ಭವನದಲ್ಲಿ ವಿವಿಧ ಮೋರ್ಚಾ ಪದಾಧಿಕಾರಿಗಳ, ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಗೋವಿಂದ ಕಾರಜೋಳ, ತೇಜಸ್ವಿ ಸೂರ್ಯ, ಮೋಹನ್, ಮಂಡಲ ಅಧ್ಯಕ್ಷರು, ವಿಧಾನಪರಿಷತ್ ಸದಸ್ಯರುಗಳು ಭಾಗವಹಿಸಲಿದ್ದಾರೆ. ಶಾಸಕರು, ಮಾಜಿ ಶಾಸಕರು ತಪ್ಪದೆ ಸಭೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜಿಗೆ ದಾಖಲಾತಿ ಆರಂಭಿಸುವಂತೆ ನ್ಯಾಷನಲ್ ಮೆಡಿಕಲ್ ಕೌನ್ಸಿಲ್‍ನಿಂದ ಆದೇಶ ಬಂದಿದೆ. ಮೂಲ ಸೌಲಭ್ಯ ಒದಗಿಸಲು ಸಿದ್ದರಿದ್ದೇವೆ. ಸ್ಥಳ ಗುರುತಿಸಲು ಜಿಲ್ಲಾಡಳಿತಕ್ಕೆ ಸೂಚಿಸಿದೆ. ಮೆಡಿಕಲ್ ವಿದ್ಯಾರ್ಥಿಗಳಿಗೆ ಸ್ವಚ್ಚಂದ ವಾತಾವರಣವಿರಬೇಕೆಂಬ ಉದ್ದೇಶದಿಂದ ಇಂಗಳದಾಳು ಸಮೀಪ ಮೆಡಿಕಲ್ ಕಾಲೇಜು ಆರಂಭಿಸಲಿ ಎನ್ನುವುದು ನನ್ನ ಉದ್ದೇಶ. ಅದಕ್ಕಾಗಿ ಅಲ್ಲಿನ ಬೆಟ್ಟವನ್ನು ತೆಗೆದು ಸಮತಟ್ಟು ಮಾಡಲು ಸೂಚಿಸಿದ್ದೇನೆ.

ಜಿ.ಆರ್.ಹಳ್ಳಿ ಬಳಿ ಸ್ನಾತಕೋತ್ತರ ಕೇಂದ್ರಕ್ಕೆ ಭೇಟಿ ನೀಡಿ ಮೆಡಿಕಲ್ ವಿದ್ಯಾರ್ಥಿಗ ಶಿಕ್ಷಣಕ್ಕೆ ಎರಡು ವರ್ಷಗಳ ಕಾಲ ಅವಕಾಶ ಕೊಡಿ ಎಂದು ಉಪ ಕುಲಪತಿ ಹಾಗೂ ರಿಜಿಸ್ಟಾರ್ ಜೊತೆ ಮಾತನಾಡಿದ್ದೇನೆ. ಅಲ್ಲಿನ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದೆನ್ನುವ ಕಾರಣಕ್ಕಾಗಿ ಹೆಚ್ಚುವರಿ ಕೊಠಡಿಗಳನ್ನು ಕಟ್ಟಿಸಲು ಹೇಳಿದ್ದೇನೆ. ಇದಕ್ಕೆ ಶಾಸಕರು ಜಿಲ್ಲಾ ಉಸ್ತುವಾರಿ ಸಚಿವರು ಸಹಕಾರ ಕೊಡಬೇಕೆಂದು ವಿನಂತಿಸಿದರು.

ಜಾಲಿಕಟ್ಟೆಯಲ್ಲಿ ಯಾರೋ ದಾನ ಕೊಟ್ಟಿರುವ ನಲವತ್ತು ಎಕರೆ ಭೂಮಿಯಿದೆ. ಚಿಕ್ಕಪುರದಲ್ಲಿಯೂ ಮೂವತ್ತು ಎಕರೆ ಜಮೀನಿದೆ. ಅಂತಿಮವಾಗಿ ಮೆಡಿಕಲ್ ಕಾಲೇಜು ಆರಂಭಿಸುವುದು ಎಲ್ಲಿ ಎನ್ನುವುದು ಇನ್ನು ನಿರ್ಧಾರವಾಗಿಲ್ಲ. ಅದಕ್ಕಾಗಿ ಮತ್ತೊಂದು ಸುತ್ತಿನ ಸಭೆ ನಡೆಸುವುದಾಗಿ ಹೇಳಿದ ಎ.ನಾರಾಯಣಸ್ವಾಮಿ ಜಿಲ್ಲಾ ಆಸ್ಪತ್ರೆ ಹಿಂಭಾಗದಲ್ಲಿರುವ ಜಾಗದಲ್ಲಿ ಮೆಡಿಕಲ್ ಕಾಲೇಜು ಕಟ್ಟುವ ವಿಚಾರ ಇನ್ನು ಪೆಂಡಿಂಗ್ ಇಡಲಾಗಿದೆ. ಬೆಂಗಳೂರಿನ ಗಂಗಾಧರಯ್ಯ ನ್ಯಾಷನಲ್ ಮೆಡಿಕಲ್ ಕೌನ್ಸಿಲ್ ನಿರ್ದೇಶಕರಾಗಿದ್ದಾರೆ. ವಿಶೇಷ ಅಧಿಕಾರಿ ಯುವರಾಜ್ ಮಧ್ಯಕರ್ನಾಟಕದ ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ವಿಶೇಷ ಗಮನ ಹರಿಸಿದ್ದಾರೆಂದರು.
ವಿಧಾನಸಭೆ ಚುನಾವಣಾ ಪೂರ್ವದಲ್ಲಿಯೇ ಕಾಂಗ್ರೆಸ್ ಪಕ್ಷ ಐದು ಗ್ಯಾರೆಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದಿದೆ. ಆದರೆ ಈಗ ಕೇಂದ್ರ ಅಕ್ಕಿ ಕೊಡುತ್ತಿಲ್ಲ ಎಂದು ಬೆರಳು ಮಾಡಿ ತೋರಿಸುತ್ತ ಜನರನ್ನು ದಿಕ್ಕು ತಪ್ಪಿಸುತ್ತಿರುವುದರಲ್ಲಿ ಯಾವುದೆ ಅರ್ಥವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರ್ಚಿಗೆ ಗೌರವ ಬರಬೇಕಾದರೆ ನುಡಿದಂತೆ ಹತ್ತು ಕೆ.ಜಿ.ಅಕ್ಕಿಯನ್ನು ಎಲ್ಲರಿಗೂ ಕೊಡಲಿ ಎಂದು ಒತ್ತಾಯಿಸಿದರು.

ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ಜಿಲ್ಲಾ ಉಪಾಧ್ಯಕ್ಷ ಸಂಪತ್, ವಕ್ತಾರ ನಾಗರಾಜ್‍ಬೇದ್ರೆ, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ಹಿಂದುಳಿದ ವಿಭಾಗದ ಕಲ್ಪತರು ಜಯಣ್ಣ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

error: Content is protected !!