Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಚಿತ್ರದುರ್ಗದಲ್ಲಿ ಬಿಜೆಪಿ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಮೇ. 02 :
ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯವರ ಹತ್ಯೆಯನ್ನು ಖಂಡಿಸಿ ಶುಕ್ರವಾರ ಚಿತ್ರದುರ್ಗ ನಗರದಲ್ಲಿ ಭಾರತೀಯ ಜನತಾ ಪಾರ್ಟಿಯವತಿಯಿಂದ ಓನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆಯನ್ನು ನಡೆಸಿ ಸರ್ಕಾರದ ವಿರುದ್ದ ಘೋಷಣೆಯನ್ನು ಕೂಗಿ ಹತ್ಯೆಯನ್ನು ಮಾಡಿದವರನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸುವಂತೆ ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜನ್ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹಿಂದೂಗಳ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದೆ, ಇದಕ್ಕೆ ರಾಜ್ಯ ಸರ್ಕಾರ ಕುಮ್ಮಕ್ಕು ನೀಡುತ್ತಾ ಅರೋಪಿಗಳನ್ನು ಬಂಧಿಸುವಲ್ಲಿ ವಿಫಲವಾಗಿದ್ದು ಅವರಿಗೆ ರಕ್ಷಣೆಯನ್ನು ನೀಡುತ್ತಿದೆ. ರಾಜ್ಯದಲ್ಲಿನ ಸರ್ಕಾರ ಹಿಂದೂಗಳ ವಿರೋಧಿ ಸರ್ಕಾರವಾಗಿದೆ. ಇಲ್ಲಿ ಹಿಂದೂಗಳು ನೆಮ್ಮದಿಯಾಗಿ ಬದುಕನ್ನು ನಡೆಸುವುದು ಇವರ ಆಡಳಿತದಲ್ಲಿ ಕಷ್ಠವಾಗಿದೆ ಎಂದು ದೂರಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಕರ್ನಾಟಕ ಎನ್ನುವುದು ಆರೋಪಿಗಳ ಸ್ವರ್ಗವಾಗಿದೆ ಇಲ್ಲಿ ಏನೇ ಮಾಡಿದರು ಸಹಾ ಯಾರೂ ಕೇಳುವವರಿಲ್ಲ ಎನ್ನುವಂತಾಗಿದೆ ರಾಜ್ಯದ ಆಡಳಿತವನ್ನು ನಡೆಸುತ್ತಿರುವ ರಾಜಕೀಯ ಪಕ್ಷದವರು ಸಹಾ ಇಂತಹ ಕೆಲಸವನ್ನು ಮಾಡುವವರಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಆರೋಪಿಗಳನ್ನು ಬಂಧಿಸುವಲ್ಲಿ ಪೋಲಿಸರು ಮುಂದೆ ಹೋದರು ಸಹಾ ಅವರನ್ನು ರಾಜಕೀಯ ವ್ಯಕ್ತಿಗಳು ಹಿಂದಕ್ಕೆ ಎಳೆಯುತ್ತಿದ್ದಾರೆ ಎಂದು ಆರೋಪಿಸಿದರು.

ರೈತ ಮೋರ್ಚಾದ ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್ ಮಾತನಾಡಿ, ನಮ್ಮ ರಾಜ್ಯದಲ್ಲಿ ಇರುವುದರ ಗೊಂಡಾ ಸರ್ಕಾರವಾಗಿದೆ ಹಿಂದೂಗಳನ್ನು ರಕ್ಷಣೆ ಮಾಡುವಲ್ಲಿ ವಿಫಲವಾಗಿದೆ. ಸರ್ಕಾರ ಒಂದು ಜನಾಂಗವನ್ನು ಮಾತ್ರ ಓಲೈಕೆ ಮಾಡುವಲ್ಲಿ ಮುಂದಾಗಿದೆ. ಇದರಿಂದ ಆ ಕೋಮಿನ ಜನತೆ ಅರ್ಭಟ ಹೆಚ್ಚಾಗಿದೆ. ಇದನ್ನು ತಡೆಯುವವರಿಲ್ಲ ಎನ್ನುವಂತಾಗಿದೆ ಇದನ್ನು ನಿಲ್ಲಿಸುವವರೆಗೂ ಸಹಾ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈ ಪ್ರತಿಭಟನೆಯಲ್ಲಿ ನಗರಾಧ್ಯಕ್ಷ ಲೋಕೇಶ್, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ, ದಗ್ಗೆ ಶಿವಪ್ರಕಾಶ್, ಮಾಧ್ಯಮ ವಕ್ತಾರ ಛಲವಾದಿ ತಿಪ್ಪೇಸ್ವಾಮಿ, ಯುವ ಮುಖಂಡ ಹೇರಿಸ್ವಾಮಿ, ನಗರಸಭಾ ಮಾಜಿ ಸದಸ್ಯ ನಾಗರಾಜ್, ಕಿರಣ್, ಯಶವಂತ, ನಂದಿ ನಾಗರಾಜ್, ಚಂದ್ರಶೇಖರ್, ಮಹಾಂತೇಶ್ ಸ್ವಾಮಿ ಸೇರಿದಂತೆ ಇತರರು ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment